ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಮನ್‌ವೆಲ್ತ್‌: ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ

|
Google Oneindia Kannada News

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022 ರ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕದ ಬೇಟೆ ಮುಂದುವರೆದಿದೆ. ವೇಟ್‌ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಪುರುಷರ 67 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್‌ವೆಲ್ತ್‌ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಎರಡನೇ ಚಿನ್ನದ ಪದಕ ಇದಾಗಿದೆ. ಭಾರತ ಒಟ್ಟು ಐದು ಪದಕಗಳನ್ನು ಗೆದ್ದುಕೊಂಡಿದೆ.

ಪುರುಷರ 67 ಕೆಜಿ ಫೈನಲ್‌ನಲ್ಲಿ ವೇಟ್‌ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗ ಚಿನ್ನ ಗೆದ್ದಿದ್ದಾರೆ. ಜೆರೆಮಿ ಲಾಲ್ರಿನ್ನುಂಗಾ 140 ಕೆಜಿ ಎತ್ತುವ ಮೂಲಕ ಹೊಸ ಕಾಮನ್‌ವೆಲ್ತ್ ಗೇಮ್ಸ್ ದಾಖಲೆಯನ್ನು ನಿರ್ಮಿಸಿದರು.

CWG 2022: Indian Weightlifter Jeremy Lalrinnunga Wins Gold In Mens 67kg Final

ಜೆರೆಮಿ ಲಾಲ್ರಿನ್ನುಂಗಾ ಅವರು ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 160 ಕೆಜಿ ಎತ್ತುವ ಮೂಲಕ ಒಟ್ಟು 300 ಕೆಜಿ ಎತ್ತಿದ್ದಾರೆ. ಇದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಹೊಸ ದಾಖಲೆಯಾಗಿದೆ.

ಜೆರೆಮಿ ತನ್ನ 165 ಕೆಜಿಯನ್ನು ಎತ್ತುವ ಅಂತಿಮ ಪ್ರಯತ್ನದ ಕೊನೆಯಲ್ಲಿ ಗಾಯಗೊಂಡಂತೆ ಕಂಡುಬಂದರು.

ಮಿಜೋರಾಂನ ಐಜ್ವಾಲ್‌ನ 19 ವರ್ಷದ ಆಟಗಾರ ಜೆರೆಮಿ ಲಾಲ್ರಿನ್ನುಂಗಾ 2018 ರ ಯೂತ್ ಒಲಿಂಪಿಕ್ ಗೇಮ್ಸ್‌ನಲ್ಲಿ 62 ಕೆಜಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು. ಕಳೆದ ವರ್ಷ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ನಲ್ಲಿ 67 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು.

ಸಮೋವಾದ ಅನುಭವಿ ಲಿಫ್ಟರ್ ವೈಪವಾ ಐಯೋನೆ 293 ಕೆಜಿಯಷ್ಟು ಭಾರ ಎತ್ತುವ ಮೂಲಕ ಬೆಳ್ಳಿ ಗೆದ್ದರೆ, ನೈಜೀರಿಯಾದ ಎಡಿಡಿಯಾಂಗ್ ಉಮೊಫಿಯಾ 290 ಕೆಜಿ ಎತ್ತುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿ ಪಡೆದರು.

ಕಾಮನ್‌ವೆಲ್ತ್‌ ಗೇಮ್ಸ್‌ 2022ರ ಎರಡನೇ ದಿನದಲ್ಲಿ ಮಹಿಳೆಯರ 49 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಸ್ಪರ್ಧಿಸಿದ್ದ ಮೀರಾಬಾಯಿ ಚಾನು ಚಿನ್ನದ ಪದಕ ಗೆಲ್ಲುವ ಮೂಲಕ ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ದರು. ಇದಲ್ಲದೆ ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಮತ್ತು ಕನ್ನಡಿಗ ಗುರುರಾಜ ಪೂಜಾರಿ ಪುರುಷರ 61 ಕೆಜಿಯಲ್ಲಿ ಕಂಚಿನ ಪದಕ ಪಡೆದರು. ಜೊತೆಗೆ ಬಿಂದ್ಯಾರಾಣಿ ದೇವಿ 55 ಕೆಜಿ ವಿಭಾಗದಲ್ಲಿ ಶನಿವಾರ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು.

English summary
Commonwealth Games-2022: Weightlifter Jeremy Lalrinnunga Wins Gold In Men's 67kg Final. eremy created a new Commonwealth Games record. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X