David Warner: ನೋವಿನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಕ್ರಿಕೆಟಿಗ

2023ರಲ್ಲಿ ನಡೆದ ಏಕದಿನ ವಿಶ್ವಕಪ್ ಗೆದ್ದಿದ್ದ ಆಸ್ಟ್ರೇಲಿಯಾ, ಟಿ20 ವಿಶ್ವಕಪ್ ಕೂಡ ಗೆಲ್ಲುವ ಮಹದಾಸೆ ಹೊಂದಿತ್ತು. ಆದರೆ, ಭಾರತ ಮತ್ತು ಅಫ್ಘಾನಿಸ್ತಾನ ತಂಡದ ಏಕದಿನ ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡಿದ್ದು, ಟಿ20 ವಿಶ್ವಕಪ್‌ನಿಂದಲೇ ಆಸ್ಟ್ರೇಲಿಯಾವನ್ನು ಹೊರದಬ್ಬಿವೆ.

ಅಫ್ಘಾನಿಸ್ತಾನ ಮತ್ತು ಭಾರತದ ವಿರುದ್ಧ ಸೋತ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿದೆ. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಶ್ರೇಷ್ಠ ಬ್ಯಾಟರ್ ಡೇವಿಡ್ ವಾರ್ನರ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಕೂಡ ಅಂತ್ಯವಾಗಿದೆ.

David Warner Announces Retirement After T20 World Cup Exit

ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡೇವಿಡ್ ವಾರ್ನರ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ನೋವಿನಲ್ಲಿ ಕೊನೆಯಾಗಿದೆ. ಇದೇ ವಿಶ್ವಕಪ್ ನನ್ನ ಕೊನೆಯ ಪಂದ್ಯಾವಳಿ ಎಂದು ಡೇವಿಡ್ ವಾರ್ನರ್ ಈ ಮೊದಲೇ ಹೇಳಿದ್ದರು. ಪ್ರಶಸ್ತಿ ಗೆದ್ದು ವಿದಾಯ ಹೇಳುವ ವಿಶ್ವಾಸದಲ್ಲಿದ್ದ ಆಸ್ಟ್ರೇಲಿಯಾಗೆ ಇದು ನಿರಾಸೆಯಾಗಿದೆ.

ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರೂ, ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2023ರಲ್ಲಿ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಡಿದ್ದು, ಅವರ ಕೊನೆಯ ಅಂತಾರಾಷ್ಟ್ರಿಯ ಏಕದಿನ ಪಂದ್ಯವಾಗಿತ್ತು. 2024 ರ ಆರಂಭದಲ್ಲಿ ಪಾಕಿಸ್ತಾನದ ವಿರುದ್ಧ ಅವರ ಅಂತಿಮ ಟೆಸ್ಟ್ ಪಂದ್ಯವನ್ನು ಆಡಿದರು. ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಿದ್ದೇ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ.

ಶ್ರೇಷ್ಠ ಆಟಗಾರರಲ್ಲಿ ಒಬ್ಬರು

110 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಅವರು, 110 ಪಂದ್ಯಗಳಲ್ಲಿ 3277 ರನ್ ಗಳಿಸಿದ್ದಾರೆ. ಮೂರು ಮಾದರಿಯಲ್ಲಿ ಶತಕ ಸಿಡಿಸಿದ ಆಸ್ಟ್ರೇಲಿಯಾ ಮೂರನೇ ಬ್ಯಾಟರ್ ಆಗಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಾತ್ರವಲ್ಲ, ಫ್ರಾಂಚೈಸಿ ಕ್ರಿಕೆಟ್‌ನಲ್ಲೂ ಡೇವಿಡ್ ವಾರ್ನರ್ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಗಳಿಸಿದ ನಾಲ್ಕನೇ ಬ್ಯಾಟರ್ ಆಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಕಪ್ ಗೆದ್ದುಕೊಟ್ಟಿದ್ದಾರೆ.

ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಕೂಡ ಸೂಪರ್ 8ರಲ್ಲಿ ಭಾರತ ವಿರುದ್ಧ ತಂಡದ ಸೋಲಿನ ನಂತರ ವಾರ್ನರ್ ಅಂತರಾಷ್ಟ್ರೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದರು. ಆತನನ್ನು ತಂಡ ಮಿಸ್ ಮಾಡಿಕೊಳ್ಳುತ್ತದೆ ಎಂದಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದರೂ ಡೇವಿಡ್ ವಾರ್ನರ್ 2025ರ ಐಪಿಎಲ್‌ನಲ್ಲಿ ಆಡುವ ಸಾಧ್ಯತೆ ಇದೆ. ಈ ವರ್ಷ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆಡಿದ್ದ ಅವರು, 2025ರ ಐಪಿಎಲ್ ಮೆಗಾ ಹರಾಜಿಗೆ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು ಕೈಬಿಟ್ಟರೆ ಡೇವಿಡ್ ವಾರ್ನರ್ ಮತ್ತೆ ಹರಾಜಿನಲ್ಲಿ ಹೆಸರು ನೋಂದಾಯಿಸುವುದು ಖಚಿತವಾಗಿದ್ದು, ಯಾವ ತಂಡದ ಪಾಲಾಗಲಿದ್ದಾರೆ ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+