DC vs CSK: ಗುರುವಿಗೆ ತಿರುಮಂತ್ರ ಹಾಕಿದ ಶಿಷ್ಯ; ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

ವಿಶಾಖಪಟ್ಟಣದ ವಿಡಿಸಿಎ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ.

ಐಪಿಎಲ್ 2024ರ ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿ ಸೋಲಿನ ರುಚಿ ನೋಡಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 191 ರನ್ ಕಲೆಹಾಕಿದರೆ, ಸಿಎಸ್‌ಕೆ 20 ಓವರ್ ಗಳಲ್ಲಿ ಕೇವಲ 171 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.

DC vs CSK Delhi Capitals Win By 20 Runs Against Chennai Super Kings

ವಾರ್ನರ್, ಪಂತ್, ಪೃಥ್ವಿ ಶಾ ಅಬ್ಬರ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಅಬ್ಬರದ ಆರಂಭ ಪಡೆಯಿತು. ಈ ಐಪಿಎಲ್‌ನಲ್ಲಿ ಮೊದಲ ಬಾರಿ ಅವಕಾಶ ಪಡೆದ ಪೃಥ್ವಿ ಶಾ ಅಬ್ಬರಿಸಿದರು. 27 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 42 ರನ್ ಗಳಿಸಿ ಮಿಂಚಿದರು. ಕಳೆದ ಎರಡು ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲವಾಗಿದ್ದ ಡೇವಿಡ್ ವಾರ್ನರ್ 35 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್ ಸಹಿತ 52 ರನ್ ಗಳಿಸಿದರು.

ನಾಯಕನ ಆಟವಾಡಿದ ರಿಷಬ್ ಪಂತ್ 32 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 51 ರನ್ ಗಳಿಸಿದರು. ಇದು ಈ ಆವೃತ್ತಿಯಲ್ಲಿ ಮೊದಲ ಅರ್ಧಶತಕವಾಗಿದೆ. ಮಿಚೆಲ್ ಮಾರ್ಷ್ 12 ಎಸೆತಗಳಲ್ಲಿ 18 ರನ್ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್‌ಗಳನ್ನು ಕಲೆಹಾಕಿತು. ಸಿಎಸ್‌ಕೆ ಪರವಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮಥೀಶ ಪತಿರಾಣ 4 ಓವರ್ ಗಳಲ್ಲಿ 31 ರನ್ ನೀಡಿ 3 ವಿಕೆಟ್ ಪಡೆದರು.

ಧೋನಿ ಬ್ಯಾಟಿಂಗ್ ನೋಡಿ ಫ್ಯಾನ್ಸ್ ಸಂಭ್ರಮ

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಸಿಎಸ್‌ಕೆ ತಂಡಕ್ಕೆ ಖಲೀಲ್ ಅಹಮದ್ ಆಘಾತ ನೀಡಿದರು. ಆರಂಭದಲ್ಲೇ ನಾಯಕ ರುತುರಾಜ್ ಗಾಯಕ್ವಾಡ್ (1 ರನ್), ರಚಿನ್ ರವೀಂದ್ರ (2 ರನ್) ವಿಕೆಟ್ ಪಡೆದರು. ಅಜಿಂಕ್ಯ ರಹಾನೆ 30 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರು.

ಡೇರಿಲ್ ಮಿಚೆಲ್ 34 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕಳೆದ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಶಿವಂ ದುಬೆ 18 ರನ್ ಗಳಿಸಿದರೆ, ಸಮೀರ್ ರಿಜ್ವಿ ಆಡಿದ ಮೊದಲ ಎಸೆತದಲ್ಲೇ ಔಟಾದರು.

ರವೀಂದ್ರ ಜಡೇಜಾ 17 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರೆ, ಈ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಮಾಡಿದ ಮಹೇಂದ್ರ ಸಿಂಗ್ ಧೋನಿ 16 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 37 ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ತಲುಪಿಸಲು ಆಗಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+