DC Vs SRH: ಸನ್‌ರೈಸರ್ಸ್ ಹೈದರಾಬಾದ್ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 67 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿತು.

ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. 6 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 125 ರನ್ ಕಲೆಹಾಕಿತು. ಇದು ಇಡೀ ವಿಶ್ವದಲ್ಲೇ ಟಿ20 ಕ್ರಿಕೆಟ್‌ನಲ್ಲಿ ಪವರ್ ಪ್ಲೇನಲ್ಲಿ ದಾಖಲಾದ ಅತಿ ಹೆಚ್ಚು ರನ್ ಆಗಿದೆ.
ಟ್ರಾವಿಸ್ ಹೆಡ್ ಸ್ಫೋಟಕ ಬ್ಯಾಟಿಂಗ್
ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ 6 ಸಿಕ್ಸರ್ ಸಹಿತ 46 ರನ್ ಗಳಿಸಿದರು. ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 11 ಬೌಂಡರಿ 6 ಸಿಕ್ಸರ್ ಸಹಿತ 89 ರನ್ ಗಳಿಸಿದರು. ನಿತೀಶ್ ರೆಡ್ಡಿ 37 ರನ್ ಗಳಿಸಿದರೆ, ಶಹಬಾಜ್ ಅಹ್ಮದ್ 29 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿ ಮಿಂಚಿದರು. ಕುಲದೀಪ್ ಯಾದವ್ 4 ವಿಕೆಟ್ ಪಡೆಯುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ವೇಗಕ್ಕೆ ಸ್ವಲ್ಪ ಕಡಿವಾಣ ಹಾಕಿದರು.
ಹೋರಾಡಿ ಬಳಿಕ ಪಂದ್ಯ ಕೈಬಿಟ್ಟ ಡೆಲ್ಲಿ
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಪೃಥ್ವಿ ಶಾ 5 ಎಸೆತಗಳಲ್ಲಿ 16 ರನ್ ಗಳಿಸಿ ಔಟಾದರೆ, ಡೇವಿಡ್ ವಾರ್ನರ್ 3 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು.
ಜೇಕ್ ಫ್ರೇಸರ್ ಮೆಕ್‌ಗುರ್ಕ್ 18 ಎಸೆತಗಳಲ್ಲಿ 5 ಬೌಂಡರಿ, 7 ಸಿಕ್ಸರ್ ಸಹಿತ 65 ರನ್ ಗಳಿಸಿ ಹೋರಾಟ ಕೊಟ್ಟರು. ಅಭಿಷೇಕ್ ಪೊರೆಲ್ 22 ಎಸೆತಗಳಲ್ಲಿ 42 ರನ್ ಗಳಿಸಿದರು. ಇವರಿಬ್ಬರೂ ಔಟಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ದಾರಿ ಕಳೆದುಕೊಂಡಿತು.
ಟ್ರಿಸ್ಟನ್ ಸ್ಟಬ್ಸ್ 10 ರನ್ ಗಳಿಸಿದರೆ, ನಾಯಕ ರಿಷಬ್ ಪಂತ್ 35 ಎಸೆತಗಳಲ್ಲಿ 44 ರನ್ ಗಳಿಸಿ ಔಟಾದರು. ಉಳಿದ ಬ್ಯಾಟರ್ ಗಳು ಎರಡಂಕಿ ದಾಟಲಿಲ್ಲ. ಟಿ ನಟರಾಜನ್ 4 ಓವರ್ ಗಳಲ್ಲಿ 19 ರನ್ ನೀಡಿ 4 ವಿಕೆಟ್ ಪಡೆದುಕೊಂಡರು. ನಿತೀಶ್ ರೆಡ್ಡಿ 2.1 ಓವರ್ ಗಳಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರು.












Click it and Unblock the Notifications