IPL 2025: ಮಾಜಿ ಆಟಗಾರನಿಗೆ ಮಹತ್ವದ ಜವಾಬ್ದಾರಿ ವಹಿಸಿದ ಡೆಲ್ಲಿ ಕ್ಯಾಪಿಟಲ್ಸ್‌

2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಹಲವು ಬದಲಾವಣೆಗಳನ್ನು ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕೋಚಿಂಗ್ ಸಿಬ್ಬಂದಿಯನ್ನೂ ಕೂಡ ಬದಲಾವಣೆ ಮಾಡಿದೆ. ಇದೀಗ ತಂಡದ ಮಾಜಿ ಆಟಗಾರ ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್‌ ಅವರಿಗೆ ಮಹತ್ವದ ಜವಾಬ್ದಾರಿಯನ್ನು ವಹಿಸಿದೆ. ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ.

ಹೇಮಂಗ್ ಬದಾನಿ ತಂಡದ ಮುಖ್ಯ ಕೋಚ್ ಆಗಿದ್ದು, ಮುನಾಫ್ ಪಟೇಲ್ ಬೌಲಿಂಗ್ ಕೋಚ್ ಆಗಿದ್ದಾರೆ. ಟ್ಯಾಲೆಂಟ್‌ ಸ್ಕೌಟ್ ಆಗಿ ಕನ್ನಡಿಗ ವಿಜಯ್ ಭಾರಧ್ವಾಜ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ವೇಣುಗೋಪಾಲ್ ರಾವ್ ಡೆಲ್ಲಿ ಕ್ಯಾಪಿಟಲ್ಸ್‌ನ ಡೈರೆಕ್ಟರ್ ಆಫ್ ಕ್ರಿಕೆಟ್ ಆಗಿದ್ದಾರೆ.

Delhi capitals announce kevin pietersen as mentor for ipl 2025

ಕೆಎಲ್ ರಾಹುಲ್‌ಗೆ ನಾಯಕತ್ವ?

2025ರ ಐಪಿಎಲ್ ಮೆಗಾ ಹರಾಜಿಗೆ ಮುನ್ನ ರಿಷಬ್ ಪಂತ್‌ರನ್ನು ಕೈಬೀಡುವ ಮೂಲಕ ಸುದ್ದಿ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈಗ ತಂಡಕ್ಕೆ ಹೊಸ ನಾಯಕನ ನೇಮಕ ಮಾಡಿದೆ. ಮೆಗಾ ಹರಾಜಿನಲ್ಲಿ 14 ಕೋಟಿ ರೂಪಾಯಿಗೆ ಕನ್ನಡಿಗ ಕೆಎಲ್ ರಾಹುಲ್‌ರನ್ನು ಖರೀದಿ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಅವರಿಗೆ ನಾಯಕತ್ವದ ಹೊಣೆ ನೀಡುವ ಸಾಧ್ಯತೆ ಇದೆ. ಅಕ್ಷರ್ ಪಟೇಲ್ ಕೂಡ ನಾಯಕತ್ವದ ರೇಸ್‌ನಲ್ಲಿದ್ದಾರೆ.

ಈಗಾಗಲೇ ಪಂಜಾಬ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಾಯಕತ್ವ ನಿಭಾಯಿಸಿರುವ ಕೆಎಲ್ ರಾಹುಲ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ 17 ವರ್ಷಗಳಿಂದ ಒಮ್ಮೆಯೂ ಪ್ರಶಸ್ತಿಯನ್ನು ಗೆದ್ದಿಲ್ಲ, ಒಮ್ಮೆ ಫೈನಲ್‌ ತಲುಪಿದ್ದೇ ಅವರ ಸಾಧನೆಯಾಗಿದ್ದು ಈ ಬಾರಿಯಾದರೂ ಪ್ರಶಸ್ತಿ ಬರ ನೀಗುತ್ತದೆ ಎನ್ನುವ ವಿಶ್ವಾಸದಲ್ಲಿದೆ.

ಇನ್ನು ಆಲ್‌ರೌಂಡರ್ ಅಕ್ಷರ್ ಪಟೇಲ್ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವದ ರೇಸ್‌ನಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಅವರಿಗೆ ಹೊಸ ಜವಾಬ್ದಾರಿಯನ್ನು ವಹಿಸಿ, ಕೆಎಲ್ ರಾಹುಲ್ ಮೇಲಿನ ಒತ್ತಡ ಕಡಿಮೆ ಮಾಡುವ ಬಗ್ಗೆ ಕೂಡ ಯೋಚಿಸುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಕೆಎಲ್ ರಾಹುಲ್, ಮಿಚೆಲ್ ಸ್ಟಾರ್ಕ್, ಮುಕೇಶ್ ಕುಮಾರ್, ಟಿ.ನಟರಾಜನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಹ್ಯಾರಿ ಬ್ರೂಕ್, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಸಮೀರ್ ರಿಜ್ವಿ, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಮ ವಿಜಯಯ್, ಮಾಧವ್ ತಿವಾರಿ, ಕರುಣ್ ನಾಯರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+