IPL 2023, ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ಪಂದ್ಯಕ್ಕೆ ಮಳೆಯ ಆತಂಕ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೂಖಾಮುಖಿಯಾಗಲಿದ್ದು ಈ ಸೆಣೆಸಾಟ ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈನನ್ಸ್ ತಂಡ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಗೆಲುವು ಸಾಧಿಸಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಪಂದ್ಯವನ್ನು ಸೋಲಿನಿಂದಿಗೆ ಆರಂಭಿಸಿತ್ತು. ಹೀಗಾಗಿ ಮೊದಲ ಗೆಲುವಿಗಾಗಿ ಡಿಸಿ ಪಡೆ ಇಂದು ಹವಣಿಸುತ್ತಿದ್ದು ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಆದರೆ ಈ ಪಂದ್ಯಕ್ಕೆ ಈಗ ಮಳೆಯ ಆತಂಕ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧದ ಈ ಪಂದ್ಯ ದೆಹಲಿಯಲ್ಲಿ ನಡೆಯಲಿದ್ದು ರಾಷ್ಟ್ರ ರಾಜಧಾನಿಯಲ್ಲಿ ಪಂದ್ಯದ ದಿನವಾಗಿರುವ ಇಂದು ಮಳೆ ಸುರಿಯುತ್ತಿದೆ. ಇದು ಪಂದ್ಯದ ಸಮಯದಲ್ಲಿಯೂ ಸುರಿಯುವ ಸಾಧ್ಯತೆಯಿರುವ ಕಾರಣ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಆತಂಕಗಳು ಉಂಟಾಗಿದೆ.

ಪಂದ್ಯ ನಡೆಯುವ ದಿನವಾದ ಇಂದು(ಮಂಗಳವಾರ) ದೆಹಲಿಯಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇಂದು ಸಂಜೆ 7:30ಕ್ಕೆ ದೆಹಲಿಯಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ನಡೆಯಲಿರುವ ಕಾರಣ ಈ ಪಂದ್ಯ ಮಳೆಗೆ ಆಹುತಿಯಾಗುವ ಆತಂಕ ಈಗ ಕ್ರಿಕೆಟ್ ಅಭಿಮಾನಿಗಳಲ್ಲಿದೆ.
IPL 2023: ಅಪಘಾತದ ನಂತರ ಮೊದಲ ಬಾರಿಗೆ ಮೈದಾನಕ್ಕೆ ಬರುತ್ತಿದ್ದಾರೆ ರಿಷಬ್ ಪಂತ್
ಕಳೆದ ಶನಿವಾರ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವವನ್ನು 50 ರನ್‌ಗಳ ಬೃಹತ್ ಅಂತರದಿಂದ ಮಣಿಸಿತ್ತು. ಮತ್ತೊಂದೆಡೆ ಶುಕ್ರವಾರ ನಡೆದ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಈಗ ಈ ಎರಡು ತಂಡಗಳು(ಜಿಟಿ ಹಾಗೂ ಡಿಸಿ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ.
ಪಂದ್ಯದ ಸಮಯ ಹಾಗೂ ಇತರ ಮಾಹಿತಿ: ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಸಂಜೆ 7:30ಕ್ಕೆ ಆರಂಬವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಸ್ಟಾರ್ ಸ್ಪೋಟ್ಸ್‌ನಲ್ಲಿ ಪಂದ್ಯದ ನೇರಪ್ರಸಾರವಾಗಲಿದ್ದು ಜಿಯೋ ಸಿನಿಮಾದಲ್ಲಿ ಲೈವ್ ಸ್ಟ್ರೀಮಿಂಗ್ ದೊರೆಯಲಿದೆ.
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್.












Click it and Unblock the Notifications