MI Vs DC: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫಿಕ್ಸಿಂಗ್ ಮುಂಬೈ ಇಂಡಿಯನ್ಸ್?; ಫೋಟೋ ಭಾರೀ ವೈರಲ್
IPL 2025 MI Vs DC: ಐಪಿಎಲ್ 2025ರ 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಎಂಐ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಫಿಕ್ಸಿಂಗ್ ಎಂಬ ಆರೋಪ ಜೋರಾಗಿ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿಡಿಯೋವೊಂದು ಸಹ ಭಾರೀ ವೈರಲ್ ಆಗುತ್ತಿದೆ. ಹಾಗಾದ್ರೆ ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಗುರುವಾರದ ಪಂದ್ಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್‌ಗಳನ್ನು ಕಲೆಹಾಕಿ 181 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 18.2 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಬರೀ 121 ರನ್ ಕಲೆಹಾಕುವ ಮೂಲಕ ಸೋಲೊಪ್ಪಿಕೊಂಡಿತು.

ಇದರ ಬೆನ್ನಲ್ಲೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಇದನ್ನು ನೋಡಿದ ನೆಟ್ಟಿಗರು ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫಿಕ್ಸಿಂಗ್ ಮಾಡಿಕೊಂಡು ಗೆದ್ದು ಪ್ಲೇ ಆಫ್ ಪ್ರವೇಶ ಮಾಡಿದೆ ಎಂದು ಆರೋಪ ಮಾಡುತ್ತಿದ್ದಾರೆ. ಡೆಲ್ಲಿ ಪರ ಬ್ಯಾಟ್ ಬೀಸಿದ ಅಭಿಷೇಕ್ ಪೊರೆಲ್ ಅವರ ಸ್ಟಂಪ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂಬೈ ಇಂಡಿಯನ್ಸ್ ಫಿಕ್ಸಿಂಗ್ ಮಾಡಿಕೊಳ್ತಾ? ಎನ್ನುವ ಪ್ರಶ್ನೆಗಳು ಎದ್ದಿವೆ.
ಈ ಪಂದ್ಯದಲ್ಲಿ ಟಿವಿ ತೀರ್ಪುಗಾರರು ಮುಂಬೈ ಇಂಡಿಯನ್ಸ್ ಪರ ತೀರ್ಪು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಭಿಷೇಕ್ ಪೊರೆಲ್ ಅವರು ಸ್ಟಂಪ್ ಔಟ್ ಆಗದಿದ್ದರೂ ಮೋಸ ಮಾಡಿ ಔಟ್ ಕೊಟ್ಟಿದ್ದಾರೆ ಅಂತಲೂ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಸಾಕ್ಷಿ ಜೊತೆ ನೆಟ್ಟಿಗರು ದೂರುತ್ತಿದ್ದಾರೆ.
ಮತ್ತೊಂದೆಡೆ ಅಭಿಷೇಕ್ ಪೊರೆಲ್ ಕಾಲು ನೆಲಕ್ಕೆ ತಾಗುವ ಮುಂಚೆಯೇ ಬೆಲ್ಸ್ ಎಗರಿದ್ದರಿಂದ ಥರ್ಡ್ ಅಂಪೈರ್ ಅದನ್ನು ಔಟ್ ಎಂದು ತೀರ್ಪು ಕೊಟ್ಟದ್ದಾರೆ. ಇದೇ ಕಾರಣದಿಂದಲೇ ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಆದ್ದರಿಂದ ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.












Click it and Unblock the Notifications