Dinesh Karthik: 'ಡಿಕೆ ಬಾಸ್' ಆರ್‌ಸಿಬಿಗೆ ವಾಪಸ್! ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ನೇಮಕ

2025ರ ಐಪಿಎಲ್‌ನಲ್ಲಿ ದಿನೇಶ್ ಕಾರ್ತಿಕ್ ಮತ್ತೆ ಆರ್‌ಸಿಬಿ ತಂಡಕ್ಕೆ ವಾಪಸಾಗಲಿದ್ದಾರೆ. 2024ರ ಐಪಿಎಲ್‌ ಬಳಿಕ ನಿವೃತ್ತಿ ಘೋಷಣೆ ಮಾಡಿದ್ದ ಅವರು, ಈಗ ಆರ್‌ಸಿಬಿ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ನೇಮಕವಾಗಿದ್ದಾರೆ.

2024ರ ಐಪಿಎಲ್‌ನಲ್ಲಿ ಸತತ ಸೋಲನುಭವಿಸಿದ್ದ ಆರ್ ಸಿಬಿ ಬಳಿಕ ಪುಟಿದೆದ್ದು ಸತತ 7 ಪಂದ್ಯಗಳನ್ನು ಗೆದ್ದು ಪ್ಲೇಆಫ್‌ ತಲುಪಿತ್ತು. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತು ಮತ್ತೊಮ್ಮೆ ನಿರಾಸೆ ಅನುಭವಿಸಿತ್ತು.

Dinesh Karthik Appointed as RCB Batting Coach and Mentor

ತಂಡದ ಕೋಚಿಂಗ್ ಸಿಬ್ಬಂದಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮೊದಲು ತಂಡದ ಕೋಚಿಂಗ್ ಸಿಬ್ಬಂದಿಯನ್ನು ಬದಲಾಯಿಸಬೇಕು. ಉತ್ತಮ ಆಟಗಾರರನ್ನು ಆಯ್ಕೆ ಮಾಡಲು ವಿಫಲವಾಗಿದ್ದಾರೆ ಎನ್ನುವ ಕೂಗು ಕೇಳಿಬಂದಿತ್ತು.

ದಿನೇಶ್ ಕಾರ್ತಿಕ್ ಅತ್ಯುತ್ತಮ ಆಯ್ಕೆ

ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುವುದು ಅತ್ಯುತ್ತಮ ಆಯ್ಕೆ. ದಿನೇಶ್ ಕಾರ್ತಿಕ್ ಅವರಿಗೆ ತಂಡದ ಆಟಗಾರರ ಜೊತೆ ಸಾಕಷ್ಟು ಉತ್ತಮ ಬಾಂಧವ್ಯವಿದೆ. ಇದು ತಂಡದ ಪ್ರದರ್ಶನದ ಮೇಲೂ ಪರಿಣಾಮ ಬೀರಲಿದೆ.

ಮುಖ್ಯವಾಗಿ 2025ರ ಐಪಿಎಲ್‌ಗೆ ಮುನ್ನ ಮೆಗಾ ಹರಾಜು ನಡೆಯಲಿದೆ. ಅತ್ಯುತ್ತಮ ಭಾರತೀಯ ಆಟಗಾರರನ್ನು ಒಳಗೊಂಡ ತಂಡವನ್ನು ಕಟ್ಟುವುದು ಮುಖ್ಯವಾಗಿದೆ. ದಿನೇಶ್ ಕಾರ್ತಿಕ್ ಅವರಿಗೆ ಭಾರತೀಯ ಆಟಗಾರರ ಬಗ್ಗೆ ಸಾಕಷ್ಟು ಅರಿವಿದ್ದು, ಉತ್ತಮ ಆಟಗಾರರನ್ನು ಹರಾಜಿನಲ್ಲಿ ಖರೀದಿಸುವಲ್ಲಿ ಸಹಾಯವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+