
ಎಂ. ಎಸ್. ಧೋನಿ ಸಾಧನೆ ಸರಿಗಟ್ಟಿದ ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್ ಸದ್ಯ ಭಾರತ ಕ್ರಿಕೆಟ್ ಲೋಕದಲ್ಲಿ ಟ್ರೆಂಡಿಂಗ್‌ನಲ್ಲಿರುವ ಹೆಸರು. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಿದ್ದ ಡಿಕೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹಂಬಲ ವ್ಯಕ್ತಪಡಿಸಿದ್ದರು. ಐಪಿಎಲ್‌ನಲ್ಲಿ ಅವರ ಬ್ಯಾಟಿಂಗ್ ಪ್ರದರ್ಶನ ನೋಡಿದ್ದ ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ನೀಡಿತ್ತು.
ತಮ್ಮ ಆಯ್ಕೆಯನ್ನು ಸಾಬೀತುಪಡಿಸುವ ಪ್ರದರ್ಶನ ನೀಡುತ್ತಿರುವ ಡಿನೇಶ್ ಕಾರ್ತಿಕ್, ಶುಕ್ರವಾರ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆದ ಸರಣಿಯ ನಾಲ್ಕನೇ ಪಂದ್ಯದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಬಟ್ಲರ್ 162; ಇಂಗ್ಲೆಂಡ್ 498, ಮೂರು ಸಿಂಹಗಳ ಡಿಚ್ಚಿಗೆ ತತ್ತರಿಸಿದ ಡಚ್ಚರು!
ಹೌದು, ಶುಕ್ರವಾರ ನಡೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಎಂ. ಎಸ್. ಧೋನಿ ದಾಖಲೆ ಸರಿಗಟ್ಟಿದ್ದಾರೆ. ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಹಿರಿಯ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು.
ಐದು ಪಂದ್ಯಗಳ ಸರಣಿಯ 4 ನೇ T20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ದೆಹಲಿಯ ರಾಜ್‌ಕೋಟ್ ಮೈದಾನದಲ್ಲಿ 37 ವರ್ಷ ವಯಸ್ಸಿನ ದಿನೇಶ್ ಕಾರ್ತಿಕ್ ಹೊಸ ಇತಿಹಾಸ ಬರೆದರು. ಅವರು ಕೇವಲ 27 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.
ಜೂನ್ 19ರಂದು ಮಧ್ಯರಾತ್ರಿವರೆಗೂ ನಮ್ಮ ಮೆಟ್ರೋ ಸಂಚಾರ

ಧೋನಿ ದಾಖಲೆ ಮುರಿದ ಡಿಕೆ
37 ವರ್ಷ, 16 ದಿನಗಳ ವಯಸ್ಸಿನಲ್ಲಿ ಅರ್ಧಶತಕ ಗಳಿಸುವ ಮೂಲಕ ದಿನೇಶ್ ಕಾರ್ತಿಕ್ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 50 ರನ್ ಗಡಿ ದಾಟಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎನಿಸಿಕೊಂಡರು.
2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 50 ರನ್ ಸಿಡಿಸಿದಾಗ ಎಂ. ಎಸ್. ಧೋನಿಗೆ 36 ವರ್ಷ, 229 ದಿನಗಳು. 2020 ರಲ್ಲಿ 35 ವರ್ಷ ವಯಸ್ಸಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅರ್ಧ ಶತಕ ಸಿಡಿಸಿದ ಶಿಖರ್ ಧವನ್ ಈ ಸಾಧನೆ ಮಾಡಿದ ಮೂರನೇ ಹಿರಿಯರಾಗಿದ್ದಾರೆ.

ಸಂಕಷ್ಟದಲ್ಲಿದ್ದ ತಂಡಕ್ಕೆ ಆಸರೆಯಾದ ಆಪದ್ಭಾಂದವ
ಶುಕ್ರವಾರ ದೆಹಲಿಯ ರಾಜ್‌ಕೋಟ್ ಮೈದಾನದಲ್ಲಿ ನಡೆದ ಸರಣಿಯ ನಾಲ್ಕನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ಒಂದು ಹಂತದಲ್ಲಿ ಭಾರತ 13 ಓವರ್ ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು 81 ರನ್ ಗಳಿಸಿತ್ತು. ಆಗ ಕ್ರೀಸಿಗೆ ಬಂದ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. 27 ಎಸೆತಗಳಲ್ಲಿ 9 ಫೋರ್, 2 ಸಿಕ್ಸರ್ ಸಹಿತ 55 ರನ್ ಗಳಿಸಿ ಭಾರತ ತಂಡ ಉತ್ತಮ ಮೊತ್ತ ಕಲೆಹಾಕಿತು. ಇವರ ಜೊತೆ ಹಾರ್ದಿಕ್ ಪಾಂಡ್ಯ ಕೂಡ ಉತ್ತಮ ಆಟವಾಡಿದರು.

ಟೀಂ ಇಂಡಿಯಾಗೆ ಭರ್ಜರಿ ಜಯ
ಭಾರತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ 16.5 ಓವರ್ ಗಳಲ್ಲಿ 87 ರನ್ ಗಳಿಸಿ ಸರ್ವ ಪತನ ಕಂಡಿತು . ಈ ಮೂಲಕ ಭಾರತ 82 ರನ್‌ಗಳ ಭರ್ಜರಿ ಜಯ ಸಾಧಿಸಿತು.
ಅರ್ಹವಾಗಿಯೇ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದ ದಿನೇಶ್ ಕಾರ್ತಿಕ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನಾರದರು. ಈ ಜಯದ ಮೂಲಕ ಭಾರತ 5 ಪಂದ್ಯಗಳ ಸರಣಿಯಲ್ಲಿ 2-2 ಸಮಬಲ ಸಾಧಿಸಿದ್ದು, ಭಾನುವಾರ ಬೆಂಗಳೂರಿನಲ್ಲಿ ನಡೆಯುವ ಕೊನೆಯ ಪಂದ್ಯ ರೋಚಕತೆ ಹೆಚ್ಚಿಸಿಕೊಂಡಿದೆ.

ಸಾಧಕರಿಗೆ ಸ್ಪೂರ್ತಿ ದಿನೇಶ್ ಕಾರ್ತಿಕ್
ಆರ್ ಸಿ ಬಿ ತಂಡಕ್ಕೆ ಹರಾಜಿನಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಖರೀದಿಸಿದಾಗ ಟೀಕೆ ವ್ಯಕ್ತವಾಗಿತ್ತು. ಸತತ ವೈಫಲ್ಯ ಅನುಭವಿಸಿದ್ದ ಡಿಕೆ ಆಯ್ಕೆ ಮಾಡಿದ್ದು ಸರಿಯಲ್ಲ ಎಂದೇ ಹೇಳಿದ್ದರು. ಆದರೆ ಟೂರ್ನಿ ಆರಂಭವಾಗುತ್ತಿದ್ದಂತೆ ಎಲ್ಲರ ನಿರೀಕ್ಷೆಗಳನ್ನು ಡಿಕೆ ಸುಳ್ಳು ಮಾಡಿದ್ದರು.
ತಮ್ಮ ಸ್ಫೋಟಕ ಆಟದಿಂದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ದಿನೇಶ್ ಕಾರ್ತಿಕ್ ಮತ್ತೆ ಭಾರತದ ಪರವಾಗಿ ಅಂತಾರಾಷ್ಟ್ರೀಯ ಪಂದ್ಯವನ್ನಾಡುವ ಆಸೆ ವ್ಯಕ್ತಪಡಿಸಿದ್ದರು. ತಮ್ಮ ನಂಬಿಕೆ, ನಿರಂತರ ಶ್ರಮದ ಫಲವಾಗಿ ಭಾರತ ತಂಡಕ್ಕೆ ಆಯ್ಕೆಯಾದ ದಿನೇಶ್ ಕಾರ್ತಿಕ್ ಫಿನಿಷರ್ ರೋಲ್ ನಿಭಾಯಿಸುತ್ತಿದ್ದಾರೆ. ದಿನೇಶ್ ಕಾರ್ತಿಕ್ ಆಟಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.