RCB Good News: ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಡಿ.ಕೆ.ಶಿವಕುಮಾರ್
ಆರ್‌ಸಿಬಿ ಚೊಚ್ಚಲ ಐಪಿಎಲ್ ಕಪ್ ಗೆದ್ದು ಬಂದು ಇತಿಹಾಸ ನಿರ್ಮಿಸಿದೆ. ಆದರೆ ಅಭಿಮಾನಿಗಳ ಸಂಭ್ರಮಾಚರಣೆಯು ಶೋಕಾಚರಣೆಯಾಗಿ ಮಾರ್ಪಟ್ಟಿದ್ದ ದುರಂತ ಇನ್ನೂ ಮಾಸಿಲ್ಲ. ಆರ್‌ಸಿಬಿ ಆಟಗಾರರನ್ನು ಅಭಿನಂದಿಸಲು ಬಂದಿದ್ದ ಕೆಲ ಅಭಿಮಾನಿಗಳು ಕಾಲ್ತುಳಿತದಲ್ಲಿ ಜೀವಬಿಟ್ಟಿದ್ದರು. ಈ ಘಟನೆ ಬಳಿಕ ಬೆಂಗಳೂರಿನಲ್ಲಿ ಮುಂದಿನ ಐಪಿಎಲ್ ಟೂರ್ನಿಯ ಆರ್‌ಸಿಬಿ ಪಂದ್ಯಾವಳಿಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎಂದು ಹೇಳಲಾಗಿತ್ತು. ಇದರಿಂದ ಆತಂಕಗೊಂಡಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಂದೇಶ ನೀಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಇಲ್ಲಿ ಆರ್‌ಸಿಬಿ ಪಂದ್ಯಾವಳಿಗಳನ್ನು ಬೇರೆ ಕಡೆಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿತ್ತು. ಇದರಿಂದ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿತ್ತು. ಈ ಗೊಂದಲದಲ್ಲೇ ಇದ್ದ ಅಭಿಮಾನಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಅಲ್ಲದೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ವಾಪಸ್ ತರುವ ಬಗ್ಗೆ ಡಿಕೆಶಿ ಮಹತ್ವದ ಮಾಹಿತಿ ನೀಡಿದ್ದಾರೆ.

ನಾನೂ ಕ್ರಿಕೆಟ್ ಅಭಿಮಾನಿ, ಆರ್‌ಸಿಬಿ ನಮ್ಮ ಹೆಮ್ಮೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೋಗುತ್ತಿರುವ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಾವು ವಾಪಸ್ ತರ್ತೀವಿ. ನಮ್ಮ ಬೆಂಗಳೂರು ಎಂದಿಗೂ ಕ್ರಿಕೆಟ್ ಹಬ್ ಆಗಿ ಉಳಿಯಬೇಕು. ಹೀಗಾಗಿ 2026ರ ಐಪಿಎಲ್ ಪಂದ್ಯಗಳು ಕೂಡ ಬೆಂಗಳೂರಿನಲ್ಲೇ ನಡೆಯುತ್ತವೆ. ಐಪಿಎಲ್‌ನಂತಹ ದೊಡ್ಡ ಟೂರ್ನಿಗಳು ಬೆಂಗಳೂರಿನ ಕೈತಪ್ಪದಂತೆ ನೋಡಿಕೊಳ್ಳುತ್ತೇವೆ. ನಾನು ಕೂಡ ಕ್ರಿಕೆಟ್ ಅಭಿಮಾನಿ, ಆರ್‌ಸಿಬಿ ನಮ್ಮ ಹೆಮ್ಮೆ, ನಾನು ಎಲ್ಲ ಸಮಸ್ಯೆಯನ್ನ ಸರಿ ಮಾಡುತ್ತೇನೆ ಎಂದು ಅಭಯ ನೀಡಿದ್ದಾರೆ. ತಮ್ಮ ಮಾತಿನ ಮೂಲಕ ಡಿಕೆಶಿ, ನಿರಾಸೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ರಿಲೀಫ್ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಚುನಾವಣೆಯ ಮತದಾನದ ಬಳಿಕ ಈ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಾನು ಕ್ರಿಕೆಟ್ ಅನ್ನು ಪ್ರೀತಿಸುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ಐಪಿಎಲ್ ಪಂದ್ಯಗಳು ಕೈತಪ್ಪಲು ಬಿಡುವುದಿಲ್ಲ. ನಮ್ಮ ಹೆಮ್ಮೆಯಾದ ಆರ್‌ಸಿಬಿ ತಂಡದ ಎಲ್ಲ ಪಂದ್ಯಗಳು ತವರಿನಲ್ಲೇ ನಡೆಯಲಿವೆ. ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಹಿಂದೆ ಏನೆಲ್ಲ ಅನಾಹುತ ಆಗಿದೆಯೋ ಅದನ್ನು ತಪ್ಪಿಸಿ, ಬೆಂಗಳೂರು ನಗರದ ಗೌರವ ಉಳಿಸುವ ಕೆಲಸವನ್ನು ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಅಭಿಮಾನಿಗಳ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸ್ಟೇಡಿಯಂ ಅನ್ನು ಜಾಗ್ರತೆಯಿಂದ ಬಳಸುತ್ತೇವೆ. ಚಿನ್ನಸ್ವಾಮಿಗೆ ಪರ್ಯಾಯವಾಗಿ ಬೇರೆ ಸ್ಟೇಡಿಯಂ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆಗಳು ನಡೆದಿವೆ ಎಂದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರವಾಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಂತಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್‌ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ










Click it and Unblock the Notifications