KL Rahul: ಟಿ20 ವಿಶ್ವಕಪ್‌ಗೆ ಆಯ್ಕೆಯಾಗದ ಕೆಎಲ್ ರಾಹುಲ್; ದೊಡ್ಡ ಗಣೇಶ್ ಹೇಳಿದ್ದೇನು?

ಜೂನ್‌ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಕನ್ನಡಿಗ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ತಂಡಕ್ಕೆ ಆಯ್ಕೆಯಾಗುವಲ್ಲಿ ವಿಫಲವಾಗಿದ್ದಾರೆ.

ಕೆಎಲ್ ರಾಹುಲ್ ತಂಡಕ್ಕೆ ಆಯ್ಕೆಯಾಗದ್ದಕ್ಕೆ ಸಾಕಷ್ಟು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಲವು ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಕೆಎಲ್ ರಾಹುಲ್ ಆಯ್ಕೆ ಮಾಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

Dodda Ganesh Unhappy About KL Rahul s Absence from India s T20 World Cup Squad

ಕರ್ನಾಟಕದವರೇ ಆದ ದೊಡ್ಡ ಗಣೇಶ್ ಕೂಡ ಕೆಎಲ್ ರಾಹುಲ್ ಆಯ್ಕೆಯಾಗದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ಮಾಡಿದ ತಪ್ಪು ಅವರು ಆಯ್ಕೆಯಾಗದೇ ಇರಲು ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೊಡ್ಡ ಗಣೇಶ್ ಹೇಳಿದ್ದೇನು?

"ಭಾರತ ತಂಡದಲ್ಲಿ ಆರಂಭಿಕ ಆಟಗಾರನಾಗಿ ಆಡಲು ಅವಕಾಶ ಇಲ್ಲದಿದ್ದರೂ, ಐಪಿಎಲ್‌ನಲ್ಲಿ ಎಲ್‌ಎಸ್‌ಜಿ ತಂಡದಲ್ಲಿ ಆರಂಭಿಕರಾಗಿ ಆಡಲು ಆದ್ಯತೆ ನೀಡಿದ್ದು ವಿಲಕ್ಷಣ ನಿರ್ಧಾರವಾಗಿತ್ತು. ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕಾಗಿ ಕೆಎಲ್ ರಾಹುಲ್ 5 ಅಥವಾ 6ನೇ ಕ್ರಮಾಂಕದಲ್ಲಿ ಫಿನಿಷರ್ ಆಗಿ ಆಡಬಹುದಿತ್ತು. ಯಾವುದೇ ಕ್ರಮಾಂಕದಲ್ಲಾದರೂ ಉತ್ತಮವಾಗಿ ಆಡುವ ಸಾಮರ್ಥ್ಯ ಅವರಿಗಿದೆ, ಅವರ ಬಗ್ಗೆ ಮರುಕವಾಗುತ್ತಿದೆ." ಎಂದು ಹೇಳಿದ್ದಾರೆ.

ಕೆಎಲ್ ರಾಹುಲ್ ಕೂಡ ತಾವು ಆಯ್ಕೆಯಾಗದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಒಡೆದ ಹೃದಯದ ಇಮೋಜಿ ಹಂಚಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್‌ನಂತಹ ನಿಧಾನಗತಿಯ ಪಿಚ್‌ಗಳಲ್ಲಿ ಕೆಎಲ್ ರಾಹುಲ್ ಅಂತಹ ಅನುಭವಿ ಆಟಗಾರರು ಬೇಕಿತ್ತು ಎನ್ನುವುದು ಅಭಿಮಾನಿಗಳ ವಾದವಾಗಿದೆ. ಮತ್ತೊಂದು ಕಡೆ ರಿಷಬ್ ಪಂತ್, ಸಂಜು ಸ್ಯಾಮ್ಸನ್ ಮತ್ತು ಕೆಎಲ್ ರಾಹುಲ್ ಅವರ ಅಂಕಿ ಅಂಶಗಳನ್ನು ನೀಡಿ ಕೆಎಲ್ ರಾಹುಲ್ ಅವರೇ ಉತ್ತಮ ಎನ್ನುವ ವಾದ ಮಾಡುತ್ತಿದ್ದಾರೆ.

ಸಂಜು ಸ್ಯಾಮ್ಸನ್ ಮತ್ತು ರಿಷಬ್ ಪಂತ್ ಅವರು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ. ಐಪಿಎಲ್‌ನಲ್ಲಿ ಈ ಇಬ್ಬರೂ ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು ತಂಡದಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಿಷಬ್ ಪಂತ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್,

ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+