England Team For ODI World Cup: ಏಕದಿನ ತಂಡಕ್ಕೆ ಸ್ಟೋಕ್ಸ್ ವಾಪಸ್: ಆರ್‌ಸಿಬಿ ಆಟಗಾರನಿಗೂ ತಂಡದಲ್ಲಿ ಸ್ಥಾನ
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌ಗಾಗಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬುಧವಾರ ತಮ್ಮ 15 ಆಟಗಾರರ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ಹಲವು ಅಚ್ಚರಿಯ ಆಯ್ಕೆಗಳನ್ನು ಮಾಡಿದ್ದು, ಪ್ರಮುಖ ಆಟಗಾರರನ್ನು ಕೈಬಿಟ್ಟಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಪ್ರಮುಖ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್ ನಿವೃತ್ತಿ ವಾಪಸ್ ಪಡೆದುಕೊಂಡಿದ್ದು, ವಿಶ್ವಕಪ್ ತಂಡಕ್ಕೆ ವಾಪಸಾಗಿದ್ದಾರೆ. 2019ರ ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗುವಲ್ಲಿ ಸ್ಟೋಕ್ಸ್ ಕೊಡುಗೆ ಅಪಾರವಾಗಿದೆ.

ಅಚ್ಚರಿ ಎಂದರೆ ಬ್ಯಾಟಿಂಗ್‌ನಲ್ಲಿ ಭರವಸೆ ಮೂಡಿಸಿದ್ದ ಹ್ಯಾರಿ ಬ್ರೂಕ್ ಮತ್ತು ವೇಗದ ಬೌಲರ್ ಜೋಫ್ರಾ ಆರ್ಚರ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಹ್ಯಾರಿ ಬ್ರೂಕ್ ಮುಂದಿನ ದಿನಗಳಲ್ಲಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಜೋಫ್ರಾ ಆರ್ಚರ್ ಗಾಯದ ಸಮಸ್ಯೆ ಇರುವ ಕಾರಣ, ಸಂಪೂರ್ಣ ಫಿಟ್ ಆದರೆ ತಂಡಕ್ಕೆ ಮರಳುವ ಸಾಧ್ಯತೆ ಇದೆ.
ಮರಳಿದ ಸ್ಟೋಕ್ಸ್, ತಂಡಕ್ಕೆ ಆನೆಬಲ
2019ರಲ್ಲಿ ಏಕದಿನ ವಿಶ್ವಕಪ್ ಗೆಲ್ಲಲು, 2022ರಲ್ಲಿ ಟಿ20 ವಿಶ್ವಕಪ್ ಗೆಲುವಿನಲ್ಲಿ ಇಂಗ್ಲೆಂಡ್ ತಂಡದಲ್ಲಿ ಮಹತ್ವದ ಪಾತ್ರ ವಹಿಸಿದ್ದು ಬೆನ್‌ಸ್ಟೋಕ್ಸ್. ಬಿಡುವಿಲ್ಲ ವೇಳಾಪಟ್ಟಿಯ ಕಾರಣ ಅವರು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ಗೆ ಸೀಮಿತವಾಗಿದ್ದರು.
ಟೆಸ್ಟ್ ತಂಡದ ನಾಯಕನಾಗಿರುವ ಅವರು, ಮೊದಲ ಆದ್ಯತೆ ಟೆಸ್ಟ್ ಕ್ರಿಕೆಟ್‌ಗೆ ಎಂದು ಹೇಳಿದ್ದರು. ತಂಡದ ನಾಯಕ ಜೋರೂಟ್ ಮತ್ತು ಕೋಚ್ ಮನವಿ ಮಾಡಿದ ನಂತರ ಸ್ಟೋಕ್ಸ್ ಏಕದಿನ ಕ್ರಿಕೆಟ್‌ಗೆ ಮರಳಲು ನಿರ್ಧರಿಸಿದ್ದರು. ಏಕದಿನ ವಿಶ್ವಕಪ್‌ಗೆ ಮುನ್ನ ನ್ಯೂಜಿಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಏಕದಿನ ಸರಣಿಯಲ್ಲೂ ಸ್ಟೋಕ್ಸ್ ಆಡಲಿದ್ದಾರೆ.
ಏಕದಿನ ವಿಶ್ವಕಪ್‌ಗೆ ಆಯ್ಕೆ ಮಾಡಿರುವ ತಂಡವೇ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದೆ ಎಂದು ತಂಡದ ಆಯ್ಕೆಗಾರ ಲ್ಯೂಕ್ ರೈಟ್ ಹೇಲಿದ್ದಾರೆ. ಕೆಲವು ಆಟಗಾರರನ್ನು ಕೈಬಿಟ್ಟಿರುವುದು ನಂಬಲಾಗದಷ್ಟು ಕಷ್ಟಕರವಾಗಿದೆ. ಇಂಗ್ಲಿಷ್ ಕ್ರಿಕೆಟ್‌ನಲ್ಲಿ ಪ್ರತಿಭಾವಂತ ಆಟಗಾರರ ಪಡೆಯೇ ಇರುವುದು ಇದರಿಂದ ತಿಳಿಯುತ್ತದೆ. ತಂಡಕ್ಕೆ ಸೇರಲು ಹಲವು ಆಟಗಾರರು ಕಾಯುತ್ತಿದ್ದಾರೆ ಎಂದು ಹೇಳಿದರು.
"ಬೆನ್ ಸ್ಟೋಕ್ಸ್ ಹಿಂದಿರುಗುವಿಕೆ ತಂಡಕ್ಕೆ ಮತ್ತಷ್ಟು ಬಲ ತಂದಿದೆ. ಅವರು ನಾಯಕತ್ವದ ಗುಣ ಹೊಂದಿದ್ದಾರೆ. ಅವರು ಮತ್ತೆ ಇಂಗ್ಲೆಂಡ್ ಏಕದಿನ ತಂಡದಲ್ಲಿ ಆಡುವುದನ್ನು ನೋಡಿ ಪ್ರತಿಯೊಬ್ಬ ಇಂಗ್ಲೆಂಡ್ ಅಭಿಮಾನಿ ಆನಂದಿಸುತ್ತಾನೆ ಎಂದು ನನಗೆ ತಿಳಿದಿದೆ ಎಂದು ಆಯ್ಕೆದಾರ ಲೂಕ್ ರೇಟ್ ಹೇಳಿದ್ದಾರೆ.
ತಂಡದಲ್ಲಿ ಆರ್ ಸಿಬಿ ವೇಗದ ಬೌಲರ್ ರೀಸ್ ಟೋಪ್ಲಿ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಐಪಿಎಲ್‌ನಲ್ಲಿ ತಮ್ಮ ಮೊದಲನೇ ಪಂದ್ಯದಲ್ಲೇ ವಿಕೆಟ್ ಪಡೆದ ನಂತರ ಗಾಯಗೊಂಡು ಪಂದ್ಯಾವಯಿಂದ ಹೊರಬಿದ್ದಿದ್ದರು. ರೀಸ್ ಟೋಪ್ಲಿ ಎಡಗೈ ವೇಗಿಯಾಗಿದ್ದು ಸದ್ಯ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಹಂಡ್ರೆಡ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ಈಗ ಹೆಸರಿಸಿರುವುದು ತಾತ್ಕಾಲಿಕ ತಂಡವಾದರೂ ಬಹುತೇಕ ಇದೇ ತಂಡ ಅಂತಿಮವಾಗಲಿದೆ. ಹೆಚ್ಚೆಂದರೆ ಒಂದು ಎರಡು ಬದಲಾವಣೆಯಾಗಬಹುದು ಅದು ಆಟಗಾರರು ಗಾಯಗೊಂಡರೆ ಮಾತ್ರ. ತಂಡದಲ್ಲಿ ಬದಲಾವಣೆ ಮಾಡಲು ಸೆಪ್ಟೆಂಬರ್ 28 ರವರೆಗೆ ಅವಕಾಶ ಇರುತ್ತದೆ.
ಇಂಗ್ಲೆಂಡ್ ತಾತ್ಕಾಲಿಕ ತಂಡ
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.
ಏಕದಿನ ವಿಶ್ವಕಪ್ ಪಂದ್ಯಾವಳಿ ಅಕ್ಟೋಬರ್ 5ರಂದು ಆರಂಭವಾಗಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಸೆಣೆಸಲಿವೆ.
-
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications