ಈಡನ್ ಗಾರ್ಡನ್ಸ್ ಅಂಗಳದಲ್ಲಿ ವಿರಾಟ್ ಕೊಹ್ಲಿ ಹುಟ್ಟುಹಬ್ಬ ಅದ್ದೂರಿ ಆಚರಣೆಗೆ ಸಿದ್ಧತೆ
ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಅಜೇಯ ಗೆಲುವಿನ ಓಟವನ್ನು ಮುಂದುವರೆಸಿದೆ. ಭಾನುವಾರ ಲಕ್ನೋದಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್‌ಗಳ ಅಂತರದಲ್ಲಿ ಸೋಲಿಸಿದ ಬಳಿಕ ಮುಂದಿನ ಪಂದ್ಯಕ್ಕಾಗಿ ಮುಂಬೈಗೆ ತೆರಳಿದೆ. ನವೆಂಬರ್ 2 ರಂದು ಶ್ರೀಲಂಕಾ ವಿರುದ್ಧ ಸೆಣೆಸಲಿದ್ದ, ನಂತರ ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
ನವೆಂಬರ್ 5 ಭಾರತದ ಕ್ರಿಕೆಟ್ ಜಗತ್ತಿಗೆ ನಿಜಕ್ಕೂ ವಿಶೇಷ ದಿನ, ಹೌದು, ನವೆಂಬರ್ 5ರಂದು ವಿರಾಟ್ ಕೊಹ್ಲಿ ಹುಟ್ಟುಹಬ್ಬ ಇದ್ದು, ಅಂದೇ ಭಾರತ ದಕ್ಷಿಣ ಆಫ್ರಿಕಾ ಪಂದ್ಯ ಕೂಡ ಇರುವುದರಿಂದ ಭಾರತದ ಕ್ರಿಕೆಟ್ ಅಭಿಮಾನಿಗಳು ಸಂತೋಷ ಇಮ್ಮಡಿಯಾಗಲಿದೆ.

ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (CAB) ಕೂಡ ವಿರಾಟ್ ಕೊಹ್ಲಿ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ವರದಿಗಳ ಪ್ರಕಾರ, ಭಾರತ ವಿರುದ್ಧ ದಕ್ಷಿಣ ಆಫ್ರಿಕಾ (IND vs SA) ವಿಶ್ವಕಪ್ ಘರ್ಷಣೆಗೆ ಮುಂಚಿತವಾಗಿ ಈಡನ್ ಗಾರ್ಡನ್ಸ್‌ನಲ್ಲಿ ಪಟಾಕಿಗಳೊಂದಿಗೆ ಲೇಸರ್ ಶೋ ಆಯೋಜನೆ ಮಾಡಲಾಗುತ್ತದೆ. ಕೊಹ್ಲಿ ಹುಟ್ಟುಹಬ್ಬದ ಪ್ರಯುಕ್ತ ಅಂದು ಪ್ರೇಕ್ಷಕರಿಗೆ 70,000 ಕೊಹ್ಲಿಯ ಮುಖವಾಡಗಳನ್ನು ವಿತರಿಸಲಾಗುತ್ತದೆ.
ಭರ್ತಿಯಾಗಲಿದೆ ಕ್ರೀಡಾಂಗಣ
"ನಾವು ವಿರಾಟ್‌ಗಾಗಿ ಕೇಕ್ ಅನ್ನು ಆರ್ಡರ್ ಮಾಡಿದ್ದೇವೆ ಮತ್ತು ವಿನ್ಯಾಸವು ವಿರಾಟ್ ಕೊಹ್ಲಿಯೊಂದಿಗೆ ಎಲ್ಲರೂ ಗುರುತಿಸುತ್ತದೆ" ಎಂದು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ತಿಳಿಸಿರುವುದಾಗಿ ರೇವ್‌ಸ್ಪೋರ್ಟ್ಸ್ ವರದಿ ಮಾಡಿದೆ.
"ನಾನು ಇನ್ನೂ ಚಿತ್ರಗಳನ್ನು ಹಂಚಿಕೊಳ್ಳುತ್ತಿಲ್ಲ, ಏಕೆಂದರೆ ಅದು ಆಶ್ಚರ್ಯ ನೀಡಬೇಕು, ಅಲ್ಲದೆ, ನಾವು ವಿರಾಟ್ ಮತ್ತು ಪ್ರೇಕ್ಷಕರಿಗೆ ಇನ್ನಿಂಗ್ಸ್ ಮಧ್ಯಂತರದಲ್ಲಿ ಪಟಾಕಿ ಪ್ರದರ್ಶನವನ್ನು ಆಯೋಜಿಸಲು ಯೋಜಿಸಿದ್ದೇವೆ. ಇದು ಅವರ ಜನ್ಮದಿನವನ್ನು ಆಚರಿಸುವ ನಮ್ಮ ಮಾರ್ಗವಾಗಿದೆ ಮತ್ತು ಇಡೀ ಕೋಲ್ಕತ್ತಾದ ಪ್ರೇಕ್ಷಕರು ಆಚರಣೆಯ ಭಾಗವಾಗುತ್ತಾರೆ ಎಂದು ಹೇಳಲು ಖುಷಿಯಾಗುತ್ತದೆ, ಕ್ರೀಡಾಂಗಣ ಭರ್ತಿಯಾಗಲಿದೆ, ಸ್ಟ್ಯಾಂಡ್‌ನಲ್ಲಿರುವ ಪ್ರತಿಯೊಬ್ಬರೂ ವಿರಾಟ್ ಅಭಿಮಾನಿಗಳು. ಇದು ಅವರೆಲ್ಲರ ಪರವಾಗಿ ಒಂದು ಸೂಚಕವಾಗಿದೆ," ಎಂದು ಗಂಗೂಲಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಹುಟ್ಟುಹಬ್ಬ
ನವೆಂಬರ್ 5 ರಂದು ವಿರಾಟ್ ಕೊಹ್ಲಿ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಅದೇ ದಿನ, ಭಾರತವು ಐಕಾನಿಕ್ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಕಿಂಗ್ ಕೊಹ್ಲಿಗಾಗಿ ವಿಶೇಷ ಕೇಕ್ ಕತ್ತರಿಸುವ ಸಮಾರಂಭವನ್ನು ಏರ್ಪಡಿಸುತ್ತದೆ.
ಈಡನ್ ಗಾರ್ಡನ್ಸ್ ಪ್ರೇಕ್ಷಕರು ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬದಂದು ಅದ್ಭುತ ಪ್ರದರ್ಶನವನ್ನು ನೀಡಲು ಮತ್ತು ಸಚಿನ್ ತೆಂಡೂಲ್ಕರ್ ಅವರ 49 ನೇ ಏಕದಿನ ಶತಕ ದಾಖಲೆ ಸರಿಗಟ್ಟಲಿ ಎಂದು ನಿರೀಕ್ಷೆ ಮಾಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications