Get Updates
Get notified of breaking news, exclusive insights, and must-see stories!

ಐಸಿಸಿ ಪ್ರಶಸ್ತಿ ಬರ ಅಂತ್ಯ; ಟೆಸ್ಟ್ ಕ್ರಿಕೆಟ್‌ನಲ್ಲಿ ಅವಮಾನ! 2024ರಲ್ಲಿ ಟೀಂ ಇಂಡಿಯಾ ಪ್ರದರ್ಶನ ಹೇಗಿತ್ತು?

ಭಾರತ ಕ್ರಿಕೆಟ್ ಅಭಿಮಾನಿಗಳಿಗೆ 2024ರ ವರ್ಷ ಹಲವು ಕಾರಣಗಳಿಂದ ಮರೆಯಲು ಸಾಧ್ಯವಿಲ್ಲ. ದಶಕದ ಐಸಿಸಿ ಪ್ರಶಸ್ತಿ ಬರ ಅಂತ್ಯವಾಗಿದ ಖುಷಿ ಒಂದು ಕಡೆಯಾದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾರನ್ನು ದಿಗ್ಗಜ ಕ್ರಿಕೆಟಿಗರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದು ಆಘಾತಕಾರಿ ಸಂಗತಿ, ಅದಾದ ಬಳಿಕ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲಿನ ಕಹಿ ಸಿಕ್ಕಿತು. 2024ರಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು ಎನ್ನುವುದರ ಹಿನ್ನೋಟ ಇಲ್ಲಿದೆ.

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿ ಮೂಲಕ ಭಾರತ ತಂಡ 2024ರ ವರ್ಷವನ್ನು ಆರಂಭಿಸಿತು. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯ ಸೋತ ಭಾರತ ಬಳಿಕ ಸತತ ನಾಲ್ಕು ಪಂದ್ಯಗಳನ್ನು ಗೆದ್ದು 4-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿತು.

ends icc trophy drought lost test series team india performance in 2024

ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಅಮೋಘ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ ದಕ್ಷಿಣ ಆಫ್ರಿಕಾ ವಿರುದ್ಧದ ರೋಚಕ ಫೈನಲ್ ಪಂದ್ಯದಲ್ಲಿ 7 ರನ್‌ಗಳಿಂದ ಗೆಲುವು ಸಾಧಿಸಿತು.

ಸೂರ್ಯಕುಮಾರ್ ಯಾದವ್‌ ಬೌಂಡರಿ ಲೈನ್‌ ಸಮೀಪ ಅದ್ಭುತ ಕ್ಯಾಚ್‌ ಹಿಡಿದು ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡುವ ಮೂಲಕ ಭಾರತದ ಪಾಲಿನ ಹೀರೋ ಆದರು, ಸೋತೇ ಬಿಡ್ತೇವೆ ಎಂದುಕೊಂಡಿದ್ದ ಪಂದ್ಯವನ್ನು ಭಾರತ ಪಟ್ಟುಬಿಡದೆ ಹೋರಾಡಿ ಗೆದ್ದುಕೊಂಡಿತ್ತು.

ಒಂದು ದಶಕದ ಬಳಿಕ ಐಸಿಸಿ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದ್ದ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ನಿವೃತ್ತಿ ಘೋಷಣೆಯ ಶಾಕ್ ಸಿಕ್ಕಿತ್ತು. ತಾವಿನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಆಡುವುದಿಲ್ಲ, ಯುವ ಕ್ರಿಕೆಟಿಗರಿಗೆ ಅವಕಾಶ ಬಿಟ್ಟುಕೊಡಬೇಕು ಎಂದು ಮೂವರು ನಿವೃತ್ತಿ ಘೋಷಣೆ ಮಾಡಿದರು.

ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತದ ಯುವ ಪಡೆ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. 5 ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಲ್ಲಿ ಗೆದ್ದುಕೊಂಡಿತು. ಈ ಸರಣಿಯಲ್ಲಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಿದ್ದರು.

ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್‌ ಕೋಚ್ ಅವಧಿ ಮುಕ್ತಾಯವಾಗಿದ್ದರಿಂದ ಗೌತಮ್ ಗಂಭೀರ್ ಹೊಸ ಕೋಚ್ ಆಗಿ ನೇಮಕವಾದರು. ಗಂಭೀರ್ ಸಾರಥ್ಯದಲ್ಲಿ ಭಾರತ ಶ್ರೀಲಂಕಾ ಪ್ರವಾಸ ಕೈಗೊಂಡಿತು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಗೆದ್ದರೆ, ಏಕದಿನ ಸರಣಿಯನ್ನು 2-0 ಅಂತರದಲ್ಲಿ ಸೋತು ಕೆಟ್ಟ ದಾಖಲೆ ಮಾಡಿತು. 1997 ರ ಬಳಿಕ ಮೊದಲ ಬಾರಿಗೆ ಭಾರತ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋಲು ಕಂಡಿತು.

ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ ಮೊದಲ ಸ್ಥಾನಕ್ಕೇರಿತು. ಬಳಕ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಗೆಲುವು ಸಾಧಿಸಿತು.

ನ್ಯೂಜಿಲೆಂಡ್ ವಿರುದ್ಧ ಅವಮಾನ

ಟೆಸ್ಟ್ ಕ್ರಿಕೆಟ್‌ನಲ್ಲಿ ಸೋಲೆ ಇಲ್ಲದೆ ಮೆರೆಯುತ್ತಿದ್ದ ಭಾರತ ತಂಡಕ್ಕೆ ನ್ಯೂಜಿಲೆಂಡ್‌ ಆಘಾತ ನೀಡಿತು. ಮೂರು ಪಂದ್ಯಗಳ ಸರಣಿಯನ್ನು ಭಾರತ 0-3 ಅಂತರದಲ್ಲಿ ಸೋತು ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ 3 ಪಂದ್ಯ ಸೋತ ಕೆಟ್ಟ ದಾಖಲೆ ಬರೆಯಿತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ 3-1 ಅಂತರದಲ್ಲಿ ಗೆಲುವು ಸಾಧಿಸಿತು.

ಈಗ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವ ಸಾಧಿಸಿದ್ದು, ಎರಡನೇ ಟೆಸ್ಟ್ ಡಿಸೆಂಬರ್ 6ರಂದು ಆರಂಭವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+