IND vs ENG Test: ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ: ಸ್ಟಾರ್ ವೇಗಿಗೆ ಇಲ್ಲ ಸ್ಥಾನ
ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆತಿಥೇಯ ಇಂಗ್ಲೆಂಡ್ ತಂಡ ಈ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, ನಾಲ್ಕು ವರ್ಷದ ಬಳಿಕ ತಂಡದಲ್ಲಿ ಸ್ಥಾನ ಪಡೆದ ಸ್ಟಾರ್ ವೇಗಿಗೆ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಹಾಗಿದ್ದರೆ ಇಂಗ್ಲೆಂಡ್ ತಂಡದಲ್ಲಿ ಏನೆಲ್ಲಾ ಬದಲಾವಣೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಲೀಡ್ಸ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿರುವ ಇಂಗ್ಲೆಂಡ್ ಭರ್ಜರಿ ಜಯ ದಾಖಲಿಸಿದೆ. ಎರಡನೇ ಇನಿಂಗ್ಸ್‌ನಲ್ಲಿ ಸವಾಲು ಎಂದು ಪರಿಗಣಿಸುವ 371 ರನ್‌ಗಳನ್ನು ಚೇಸ್ ಮಾಡಿ ಅಬ್ಬರಿಸಿದೆ. ಈ ಮೂಲಕ ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗ ಎರಡನೇ ಟೆಸ್ಟ್ ಗೆದ್ದ ಸರಣಿಯ ಮೇಲೆ ಬಿಗ ಹಿಡಿತ ಸಾಧಿಸುವ ಪ್ಲ್ಯಾನ್ ಇಂಗ್ಲೆಂಡ್ ತಂಡದ್ದಾಗಿದೆ.

ಲೀಡ್ಸ್ ಅಂಗಳದಲ್ಲಿ ಜಯದ ನಗೆ ಬೀರಿದ ತಂಡವನ್ನೇ ಎರಡನೇ ಟೆಸ್ಟ್‌ಗೂ ಉಳಿಸಿಕೊಳ್ಳಲಾಗಿದೆ. ಈ ವೇಳೆ ನಾಲ್ಕು ವರ್ಷದ ಬಳಿಕ ತಂಡದಲ್ಲಿ ಸ್ಥಾನ ಪಡೆದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂಬ ಸಂಶಯಗಳು ಇದ್ದವು. ಆದರೆ ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದ ಇಂಗ್ಲೆಂಡ್ ಮೊದಲ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಸಿದ ತಂಡವನ್ನೇ ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ
ಇಂಗ್ಲೆಂಡ್ ತಂಡದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಇಂಗ್ಲೆಂಡ್ ಬೌಲಿಂಗ್ ಕೊಂಚ ವೀಕ್ ಎಂದು ಹೇಳಲಾಗುತ್ತಿತ್ತು. ಆದರೆ ಇದೇ ಬೌಲರ್‌ಗಳು ಭಾರತದ ಮಧ್ಯಮ ಕ್ರಮಾಂಕಕ್ಕೆ ಖೆಡ್ಡಾ ತೋಡಿ ಅಬ್ಬರಿಸಿದ್ದಾರೆ. ಹೀಗಾಗಿ ಇದೇ ಬೌಲಿಂಗ್ ಲೈನ್ ಅಪ್ ಮೇಲೆ ತಂಡ ನಂಬಿಕೆಯನ್ನು ಇಟ್ಟಿದೆ. ತಂಡದ ಬ್ಯಾಟಿಂಗ್ ಕ್ರಮಾಂಕ ಬಲಾಢ್ಯವಾಗಿದೆ. ಎಲ್ಲ ಸ್ಟಾರ್ ಆಟಗಾರರು ಲಯಕ್ಕೆ ಮರಳಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ. ನಿಜಕ್ಕೂ ಇಂಗ್ಲೆಂಡ್ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳೇ ಇಲ್ಲ. ಎಂಟನೇ ಕ್ರಮಾಂಕದ ವರೆಗೂ ಬ್ಯಾಟ್ ಬೀಸಬಲ್ಲ ಬೌಲರ್‌ಗಳು ತಂಡದಲ್ಲಿದ್ದಾರೆ. ಅಲ್ಲದೆ ಇವರು ಅಗತ್ಯ ರನ್ ಕಲೆ ಹಾಕಿ ತಂಡಕ್ಕೆ ನೆರವಾಗಿದ್ದರಿಂದ ಯಾವುದೇ ಬದಲಾವಣೆ ಇಲ್ಲ.

ಆರಂಭಿಕ ಬೆನ್ ಡಕೆಟ್, ಮಧ್ಯಮ ಕ್ರಮಾಂಕದಲ್ಲಿ ಓಲಿ ಪೋಪ್, ಭರವಸೆಯ ಬ್ಯಾಟರ್ ಜೋ ರೂಟ್, ಮೊದಲ ಟೆಸ್ಟ್‌ನಲ್ಲಿ ಅಗತ್ಯ ರನ್ ಕಲೆ ಹಾಕಿ ತಂಡಕ್ಕೆ ನೆರವಾಗಿದ್ದರು.
ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.












Click it and Unblock the Notifications