Ind vs Eng: ಎರಡನೇ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದ ಇಂಗ್ಲೆಂಡ್; ಪಿಚ್ ವರದಿ
ಭಾರತದ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ ಎರಡನೇ ಟಿ20 ಪಂದ್ಯವನ್ನು ಗೆಲ್ಲಲು ರಣತಂತ್ರ ರೂಪಿಸಿದೆ. ಒಂದು ದಿನ ಮೊದಲೇ ಪ್ಲೇಯಿಂಗ್ ಇಲೆವೆನ್ ಅನೌನ್ಸ್ ಮಾಡಿದ್ದು ತಂಡದಲ್ಲಿ ಒಂದು ಬದಲಾವಣೆ ಮಾಡಿದೆ.
ಜನವರಿ 25ರಂದು ಶನಿವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ನಡೆಯಲಿದ್ದು ಈಗಾಗಲೇ ಎರಡೂ ತಂಡಗಳು ಕಠಿಣ ಅಭ್ಯಾಸ ನಡೆಸುತ್ತಿವೆ. ಇಂಗ್ಲೆಂಡ್ ಎರಡನೇ ತಂಡಕ್ಕಾಗಿ ಒಂದು ಬದಲಾವಣೆ ಮಾಡಿದ್ದು ವೇಗದ ಬೌಲರ್ ಗಸ್ ಅಟ್ಕಿನ್‌ಸನ್ ಬದಲಾಗಿ ಬ್ರೈಡನ್ ಕಾರ್ಸ್ ಅವಕಾಶ ಪಡೆದುಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಗಸ್ ಅಟ್ಕಿನ್ಸನ್ ಎರಡು ಓವರ್ ಗಳಲ್ಲಿ 38 ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದರು. ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ 34 ಎಸೆತಗಳಲ್ಲಿ 79 ರನ್ ಗಳಿಸಿದ್ದರು. ಭಾರತ ಇನ್ನೂ 43 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿತ್ತು.
ಜೋಸ್ ಬಟ್ಲರ್ ಹೇಳಿದ್ದೇನು?
ಮೊದಲನೇ ಪಂದ್ಯ ಸೋಲಿನ ಬಳಿಕ ಮಾತನಾಡಿದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್, ಆರಂಭದಲ್ಲಿ ವಿಕೆಟ್ ಅರ್ಥ ಮಾಡಿಕೊಳ್ಳುವುದು ಕಷ್ಟವಾಗಿತ್ತು, ನಮಗೆ ಹೆಚ್ಚು ಸಮಯ ಸಿಗಲಿಲ್ಲ, ಸೆಟಲ್ ಆಗಿದ್ದರೆ ಈ ಪಿಚ್‌ನಲ್ಲಿ ಹೆಚ್ಚು ಸ್ಕೋರ್ ಮಾಡಬಹುದಿತ್ತು. ಭಾರತ ತಂಡದಲ್ಲಿ ಉತ್ತಮ ಆಟಗಾರರು ಇದ್ದಾರೆ. ಜೋಫ್ರಾ ಆರ್ಚರ್ ಉತ್ತಮವಾಗಿ ಬೌಲ್ ಮಾಡಿದರು. ಮಾರ್ಕ್‌ವುಡ್ ಕೂಡ ಉತ್ತಮ ಪ್ರದರ್ಶನ ನೀಡಿದರು. ನಾನು ಬ್ರೆಂಡನ್ ಮೆಕಲಂ ಅವರ ಅಭಿಮಾನಿ, ಅವರ ಜೊತೆ ಕೆಲಸ ಮಾಡುವುದನ್ನು ಆನಂದಿಸುತ್ತೇನೆ" ಎಂದು ಹೇಳಿದರು.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಕಬ್ ಬೆಥೆಲ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಮೊದಲನೇ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ ಎರಡನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಚೆನ್ನೈನಲ್ಲಿ ಪಿಚ್ ಸ್ಪಿನ್ನರ್ ಗಳಿಗೆ ಸಹಕಾರ ನೀಡುವುದರಿಂದ ವರುಣ್ ಚಕ್ರವರ್ತಿ ಇಂಗ್ಲೆಂಡ್ ಬ್ಯಾಟರ್ ಗಳಿಗೆ ಮಾರಕವಾಗುವ ಸಾಧ್ಯತೆ ಇದೆ.
ಮೊದಲ ಪಂದ್ಯದಲ್ಲಿ ಆಡಿದ್ದ ತಂಡವೇ ಎರಡನೇ ಪಂದ್ಯದಲ್ಲಿ ಕೂಡ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಮೊಹಮ್ಮದ್ ಶಮಿ ಫಿಟ್ ಆಗಿದ್ದರೂ ಅವರು ಬೆಂಚ್ ಕಾಯಬೇಕಾಗುತ್ತದೆ.
ಭಾರತ ಸಂಭಾವ್ಯ ಆಡುವ ಬಳಗ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.












Click it and Unblock the Notifications