Ind vs Eng 5th Test: ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಿದ ಇಂಗ್ಲೆಂಡ್
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಗುರುವಾರದಿಂದ ಪ್ರಾರಂಭವಾಗುವ ಭಾರತ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ಗಾಗಿ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದೆ.
ನಾಲ್ಕನೇ ಟೆಸ್ಟ್‌ನಲ್ಲಿ ಆಡಿದ್ದ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಆಲಿ ರಾಬಿನ್ಸನ್ ಬದಲಿಗೆ ಬಲಗೈ ವೇಗಿ ಮಾರ್ಕ್ ವುಡ್ ತಂಡಕ್ಕೆ ವಾಪಸಾಗಿದ್ದಾರೆ. ಮಾರ್ಕ್ ವುಡ್ ಇದುವರೆಗೆ ನಡೆಯುತ್ತಿರುವ ಸರಣಿಯಲ್ಲಿ ಎರಡು ಪಂದ್ಯಗಳನ್ನು ಆಡಿದ್ದಾರೆ, ಎರಡು ಪಂದ್ಯಗಳಲ್ಲಿ 55.50 ಸರಾಸರಿಯಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಐದು ಪಂದ್ಯಗಳ ಸರಣಿಯಲ್ಲಿ ಭಾರತವು 3-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ, ನಾಯಕ ಬೆನ್ ಸ್ಟೋಕ್ಸ್ ಮತ್ತು ಕೋಚ್ ಮೆಕಲಮ್ ನಾಯಕತ್ವದಲ್ಲಿ ಇಂಗ್ಲೆಂಡ್‌ಗೆ ಮೊದಲ ಸರಣಿ ಸೋತಿದೆ.
ಎರಡೂ ತಂಡಗಳಿಗೂ ಗೆಲುವು ಬೇಕು!
ಸರಣಿ ಗೆದ್ದಿದ್ದರೂ ಭಾರತ ತಂಡಕ್ಕೆ ಧರ್ಮಶಾಲಾ ಟೆಸ್ಟ್ ಗೆಲ್ಲುವುದು ಮುಖ್ಯವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳ ದೃಷ್ಟಿಯಿಂದ ಭಾರತಕ್ಕೆ ಈ ಗೆಲುವು ಅಗತ್ಯವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ ಇಂಗ್ಲೆಂಡ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಪಂದ್ಯವನ್ನು ಗೆದ್ದರೆ ತಂಡವು 12 ನಿರ್ಣಾಯಕ ಅಂಕಗಳನ್ನು ಗಳಿಸುತ್ತದೆ ಮತ್ತು ಡ್ರಾದಲ್ಲಿ ಕೊನೆಯಾದರೆ ನಾಲ್ಕು ಅಂಕಗಳನ್ನು ಗಳಿಸುತ್ತದೆ.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ) ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್, ಶೋಯೆಬ್ ಬಶೀರ್.
ಭಾರತ ತಂಡದಲ್ಲಿ ಬದಲಾವಣೆ?
ಫಿಟ್‌ನೆಸ್‌ಗೆ ಒಳಪಟ್ಟಿರುವ ಭಾರತ ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್, ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ, ವೇಗಿ ಜಸ್ಪ್ರೀತ್ ಬುಮ್ರಾ ತಂಡದೊಂದಿಗೆ ಸೇರಿಕೊಂಡಿದ್ದಾರೆ.
5ನೇ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ಕೂಡ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಬುಮ್ರಾ ಆಡುವುದು ಖಚಿತವಾಗಿದ್ದು, ಕುಲದೀಪ್ ಯಾದವ್ ಅಥವಾ ಆಕಾಶ್ ದೀಪ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ. ಇನ್ನು ಈ ಸರಣಿಯಲ್ಲಿ ವಿಫಲವಾಗಿರುವ ರಜತ್ ಪಾಟಿದಾರ್ ಬದಲಾಗಿ ಕನ್ನಡಿಗ ದೇವದತ್ ಪಡಿಕ್ಕಲ್ ಅವಕಾಶ ಪಡೆಯುವ ಸಾಧ್ಯತೆ ಇದೆ.
5 ನೇ ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.












Click it and Unblock the Notifications