India vs England: ಭಾರತದ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಆರ್‌ಸಿಬಿ ಸ್ಫೋಟಕ ಆಲ್‌ರೌಂಡರ್‌ಗೆ ಅವಕಾಶ

ಭಾರತದ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಹಾಗೂ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಿದೆ. ಜನವರಿ ತಿಂಗಳಿನಲ್ಲಿ ಇಂಗ್ಲೆಂಡ್ ಭಾರತಕ್ಕೆ ಆಗಮಿಸಲಿದ್ದು, ಭಾರತದ ವಿರುದ್ಧ 5 ಟಿ20 ಪಂದ್ಯಗಳು ಮತ್ತು 3 ಏಕದಿನ ಪಂದ್ಯಗಳು ನಡೆಯಲಿವೆ. ಬಳಿಕ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದೆ.

ಏಕದಿನ ತಂಡಕ್ಕೆ ಅನುಭವಿ ಬ್ಯಾಟರ್ ಜೋ ರೂಟ್ ವಾಪಸಾಗಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಬಟ್ಲರ್ ಕೊನೆಯದಾಗಿ ಇಂಗ್ಲೆಂಡ್ ತಂಡಕ್ಕೆ ಆಡಿದ್ದರು. 171 ಏಕದಿನ ಪಂದ್ಯಗಳನ್ನು ಆಡಿದ್ದು, 47.60 ಸರಾಸರಿಯಲ್ಲಿ 6,522 ರನ್ ಗಳಿಸಿದ್ದು ಇದರಲ್ಲಿ 16 ಶತಕಗಳು ಮತ್ತು 39 ಅರ್ಧ ಶತಕ ಸೇರಿವೆ.

England announces squads for india tour and champions trophy 2025

ತಂಡದಿಂದ ಹೊರಗುಳಿದ ಬೆನ್‌ಸ್ಟೋಕ್ಸ್

ನ್ಯೂಜಿಲೆಂಡ್ ವಿರುದ್ಧದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್‌ರೌಂಡರ್ ಬೆನ್‌ಸ್ಟೋಕ್ಸ್‌ರನ್ನು ಆಯ್ಕೆದಾರರು ಪರಿಗಣಿಸಿಲ್ಲ. ಜೋಸ್ ಬಟ್ಲರ್ ಏಕದಿನ ಮತ್ತು ಟಿ20 ಎರಡೂ ಮಾದರಿಯಲ್ಲಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಏಕದಿನ ಮತ್ತು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಮಾತ್ರ ಜೋರೂಟ್‌ಗೆ ಅವಕಾಶ ಪಡೆದಿದ್ದು ಟಿ20 ತಂಡದಿಂದ ಹೊರಗುಳಿದಿದ್ದಾರೆ.

ಐಸಿಸಿ ಮಾಹಿತಿ ಪ್ರಕಾರ ಇಂಗ್ಲೆಂಡ್ ತಂಡ ಜನವರಿ 17ರಂದು ಭಾರತಕ್ಕೆ ಆಗಮಿಸಲಿದೆ. ಜನವರಿ 22ರಂದು ಮೊದಲ ಟಿ20 ಪಂದ್ಯ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ ಜನವರಿ 25ರಂದು ಚೆನ್ನೈ, ಮೂರನೇ ಪಂದ್ಯ ಜನವರಿ 28ರಂದು ರಾಜ್‌ಕೋಟ್, 4ನೇ ಪಂದ್ಯ ಜನವರಿ 31ರಂದು ಪುಣೆಯಲ್ಲಿ ಮತ್ತು ಕೊನೆಯ ಟಿ20 ಪಂದ್ಯ ಫೆಬ್ರವರಿ 2ರಂದು ಮುಂಬೈನಲ್ಲಿ ನಡೆಯಲಿದೆ.

ಫೆಬ್ರವರಿ 6ರಂದು ಮೊದಲನೇ ಏಕದಿನ ಪಂದ್ಯ ನಾಗ್ಪುರದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಫೆಬ್ರವರಿ 9ರಂದು ಕಟಕ್‌ನಲ್ಲಿ ಮತ್ತು ಕೊನೆಯ ಪಂದ್ಯ ಫೆಬ್ರವರಿ 12ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಆರ್‌ಸಿಬಿ ಸ್ಫೋಟಕ ಆಲ್‌ರೌಂಡರ್‌ಗೆ ಅವಕಾಶ

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಆರ್ ಸಿಬಿ ಸೇರಿ ಗಮನ ಸೆಳೆದಿರುವ ಇಂಗ್ಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದು, ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.

ಭಾರತದ ವಿರುದ್ಧ ಏಕದಿನ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹ್ಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಟಿ20 ಸರಣಿಗೆ ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಸಾಕಿಬ್ ಮಹ್ಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+