IND vs ENG: 6,6,6,6,6.. 4,4,4,4,4.. ಇಂಗ್ಲೆಂಡ್ ವಿರುದ್ಧ ಭಾರತ ಗೆಲುವಿಗೆ ಮುಳುವಾದ ಆರ್‌ಸಿಬಿ ಯಂಗ್ ಸ್ಟಾರ್

India vs England 2nd T20I: ಮ್ಯಾಂಚೆಸ್ಟರ್‌ನಲ್ಲಿ ಶನಿವಾರ (ಜುಲೈ 04) ನಡೆದ ಟಿ20 ಸರಣಿಯ ಎಡರನೇ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವು ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಆಕ್ರಮಣಕಾರಿ ಆಟದಿಂದ ಟೀಮ್ ಇಂಡಿಯಾ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆತಿಥೇಯ ಇಂಗ್ಲೆಂಡ್ ತಂಡವು 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿತ್ತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆಯೇ ಮೊದಲು ಬ್ಯಾಟ್‌ ಬೀಸಿದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 190 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆದರೆ ಈ ಬೆಟ್ಟದಂತಹ 191 ರನ್‌ಗಳ ಗುರಿಯನ್ನು ಇಂಗ್ಲೆಂಡ್‌ 19 ಓವರ್‌ಗಳಲ್ಲಿ ಮುಗಿಸಿ ಜಯಭೇರಿ ಬಾರಿಸಿತು. ಇದಕ್ಕೆ ಪ್ರಮುಖ ಕಾರಣವೇ ಯಂಗ್ ಸ್ಟಾರ್ ಜೇಕಬ್ ಬೆಥೆಲ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ. ಇವರು ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡುತ್ತಾರೆ.

England Beat India by 4 Wickets in 2nd T20 Jacob Bethell Stars Vaibhav Sooryavanshi Debuts

ಬೆಥೆಲ್‌ ಸ್ಫೋಟಕ ಬ್ಯಾಟಿಂಗ್, ಇಂಗ್ಲೆಂಡ್‌ಗೆ ಗೆಲುವು

ಭಾರತ ನೀಡಿದ್ದ 191 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಇನ್ನು ಒಂದು ಓವರ್ ಬಾಕಿ ಇರುವಂತೆಯೇ (19 ಓವರ್‌ಗಳಲ್ಲಿ) 6 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರದಿತು. ಯುವ ಸ್ಟಾರ್ ಬ್ಯಾಟರ್ ಜೇಕಬ್ ಬೆಥೆಲ್ ಕೇವಲ 46 ಎಸೆತಗಳಲ್ಲಿ 5 ಬೌಂಡರಿ, 5 ಭರ್ಜರಿ ಸಿಕ್ಸರ್‌ಗಳ ಸಹಿತ ಅಜೇಯ 76 ರನ್ ಸಿಡಿಸಿ ಇಂಗ್ಲೆಂಡ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಉಳಿದಂತೆ ಇಂಗ್ಲೆಂಡ್‌ ಪರ ನಾಯಕ ಹ್ಯಾರಿ ಬ್ರೂಕ್ 39(15), ಟಾಮ್ ಬಂಟನ್ 39(32), ಜೋಪ್ರಾ ಆರ್ಚರ್ ಅಜೇಯ 10 ರನ್‌ಗಳ ಕೊಡುಗೆ ನೀಡಿದರು.

ದುಬಾರಿಯಾದ ಟೀಮ್ ಇಂಡಿಯಾ ಬೌಲರ್ಸ್‌

ಭಾರತದ ಪರ ರವಿ ಬಿಷ್ಣೋಯಿ ಅವರು ನಾಲ್ಕು ಓವರ್‌ ಬೌಲಿಂಗ್ ಮಾಡಿ ಯಾವುದೇ ವಿಕೆಟ್‌ ಇಲ್ಲದೆ ಬರೋಬ್ಬರಿ 60 ರನ್‌ ನೀಡಿ ದುಬಾರಿಯಾದರು. ಉಳಿದಂತೆ ಅರ್ಷದೀಪ್‌ 40 ರನ್‌ ಬಿಟ್ಟುಕೊಟ್ಟು 3 ವಿಕೆಟ್‌ ಕಿತ್ತರೆ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್‌ ಕಬಳಿಸಿದರು. ಆದರೆ ಬೌಲಿಂಗ್ ವಿಭಾಗದಲ್ಲಿ ನಿರೀಕ್ಷಿತ ಪ್ರದರ್ಶನ ಕಂಡುಬರದ ಕಾರಣ ಟೀಮ್ ಇಂಡಿಯಾ ಸೋಲನುಭವಿಸಿತು.

ಉತ್ತಮ ಆರಂಭ ತಂದುಕೊಟ್ಟ ಅಭಿಷೇಕ್, ಇಶಾನ್ ಕಿಶನ್

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 190 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (24 ಎಸೆತಗಳಲ್ಲಿ 43 ರನ್) ಮತ್ತು ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (40 ಎಸೆತಗಳಲ್ಲಿ 49 ರನ್) ಜವಾಬ್ದಾರಿಯುತ ಆಟವಾಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಬಳಿಕ ನಾಯಕ ಶ್ರೇಯಸ್ ಅಯ್ಯರ್ ಕೂಡ ಕೇವಲ 22 ಎಸೆತಗಳಲ್ಲಿ 37 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸಲು ನೆರವಾದರು.

3 ಪ್ರಮುಖ ವಿಕೆಟ್ ಕಿತ್ತ ಸ್ಯಾಮ್ ಕರನ್

ಇಂಗ್ಲೆಂಡ್ ಪರ ಮಾರಕ ಬೌಲಿಂಗ್ ದಾಳಿ ನಡೆಸಿದದ ಎಡಗೈ ವೇಗಿ ಸ್ಯಾಮ್ ಕರನ್ 33 ರನ್ ನೀಡಿ 3 ಪ್ರಮುಖ ವಿಕೆಟ್ ಕಡಿಯುವ ಮೂಲಕ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಉಳಿದಂತೆ ಜೋಫ್ರಾ ಆರ್ಚರ್, ವಿಲ್ ಜಾಕ್ಸ್‌, ಲಿಯಾನ್ ಡಾವ್ಸನ್ ತಲಾ ಒಂದು ವಿಕೆಟ್ ಕಬಳಿಸಿದರು.

ಇಡೀ ಕ್ರಿಕೆಟ್ ಲೋಕವೇ ಕುತೂಹಲದಿಂದ ಕಾಯುತ್ತಿದ್ದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಈ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆದರೆ ತಮ್ಮ ಚೊಚ್ಚಲ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಆಡಲು ವಿಫಲರಾದ ಅವರು 10 ಎಸೆತಗಳಲ್ಲಿ ಎರಡು ಭರ್ಜರಿ ಸಿಕ್ಸರ್‌ಗಳ ಸಹೊತ ಕೇವಲ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮುಂದಿನ ಪಂದ್ಯಗಳಲ್ಲಿ ಇವರ ಆಟ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಟೀಮ್ ಇಂಡಿಯಾ ಸೋಲಿಗೆ ಬೌಲಿಂಗ್ ವಿಭಾಗದ ವೈಫಲ್ಯ ಎಂದರೆ ತಪ್ಪಾಗಲಾರದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+