Ind vs Eng: ಪ್ಲೇಯಿಂಗ್ ಇಲೆವೆನ್ ಘೋಷಿಸಿದ ಇಂಗ್ಲೆಂಡ್; ಭಾರತದ ಪ್ಲೇಯಿಂಗ್ ಹೇಗಿರಲಿದೆ?
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋಲಿನ ಬಳಿಕ ಭಾರತ ಟಿ20 ಸರಣಿ ಆಡಲು ಸಜ್ಜಾಗಿದೆ. ಅನುಭವಿ ಆಟಗಾರರ ಜೊತೆಗೆ ಹಲವು ಯುವ ಆಟಗಾರರು ಈ ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದು ಇಂಗ್ಲೆಂಡ್ ವಿರುದ್ಧ ಮಿಂಚಲು ಸಜ್ಜಾಗಿದ್ದಾರೆ. ಜನವರಿ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸರಣಿಯ ಮೊದಲ ಪಂದ್ಯ ನಡೆಯಲಿದ್ದು ಇಂಗ್ಲೆಂಡ್ ಒಂದು ದಿನ ಮೊದಲೇ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ.
ಜೋಸ್ ಬಟ್ಲರ್ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಫಿಲ್ ಸಾಲ್ಟ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ. ಜೋಫ್ರಾ ಆರ್ಚರ್, ಮಾರ್ಕ್ ವುಡ್, ಗಸ್ ಆಟ್ಕಿನ್ಸನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಆರ್ ಸಿಬಿ ತಂಡಕ್ಕೆ ಹರಾಜಾಗುವ ಮೂಲಕ ಗಮನ ಸೆಳೆದಿರುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಮೊದಲ ಬಾರಿಗೆ ಭಾರತದಲ್ಲಿ ಆಡಲು ಸಜ್ಜಾಗಿದ್ದಾರೆ.

ಫಿಲ್ ಸಾಲ್ಟ್, ಜೋಸ್ ಬಟ್ಲರ್, ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್ ದೊಡ್ಡ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರು ವಾಸಿಯಾಗಿದ್ದು ಈಡನ್ ಗಾರ್ಡನ್ಸ್‌ನಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆ ಇದೆ. ಭರವಸೆಯ ಆಲ್‌ರೌಂಡರ್ ಜೇಕಬ್ ಬೆಥೆಲ್ ಕೂಡ ಭಾರತದಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಕಬ್ ಬೆಥೆಲ್, ಜೇಮೀ ಓವರ್ಟನ್, ಗಸ್ ಆಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಇಂಗ್ಲೆಂಡ್ ಒಂದು ದಿನ ಮೊದಲೇ ಪ್ಲೇಯಿಂಗ್ ಇಲೆವೆನ್ ಘೋಷಣೆ ಮಾಡಿದ್ದರೆ ಭಾರತ ಮಾತ್ರ ಟಾಸ್ ಬಳಿಕ ಪ್ಲೇಯಿಂಗ್ ಇಲೆವೆನ್ ಬಹಿರಂಗಪಡಿಸುವ ಸಾಧ್ಯತೆ ಇದೆ. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಆಡಲಿದ್ದಾರೆ ಎಂದು ಉಪನಾಯಕ ಅಕ್ಷರ್ ಪಟೇಲ್ ಈಗಾಗಲೇ ಖಚಿತಪಡಿಸಿದ್ದಾರೆ.
ಉಳಿದಂತೆ ನಾಯಕ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಬ್ಯಾಟಿಂಗ್‌ಗೆ ಬಲ ತುಂಬಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ಜಸ್ಪ್ರೀತ್ ಬುಮ್ರಾ ಅನುಪಸ್ಥಿಯಲ್ಲಿ ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ ಭಾರತದ ಪ್ರಮುಖ ವೇಗಿಗಳಾಗಿದ್ದು, ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ರೆಡ್ಡಿ ಕೂಡ ಬೌಲಿಂಗ್ ಆಯ್ಕೆಯಾಗಿದ್ದಾರೆ.
ಭಾರತದ ಸಂಭಾವ್ಯ ಆಡುವ ಬಳಗ
ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.












Click it and Unblock the Notifications