ಕಾಮನ್‌ವೆಲ್ತ್ ಗೇಮ್ಸ್ 2022 : ಭಾರತದ ಧ್ವಜಧಾರಿಗಳಾಗಿ ಪಿ.ವಿ.ಸಿಂಧು, ಮನ್‌ಪ್ರೀತ್ ಸಿಂಗ್ ಆಯ್ಕೆ
ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ 2022ರ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಗ್ರ ಷಟ್ಲರ್ ಮತ್ತು ಒಲಂಪಿಕ್ ಪದಕ ವಿಜೇತೆ ಪಿ.ವಿ ಸಿಂಧು ಭಾರತದ ಅಥ್ಲಿಟ್‌ಗಳ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತದ ತಂಡದ ಧ್ವಜದಾರಿಯಾಗಿ ಆಯ್ಕೆಯಾದ ಬಗ್ಗೆ ಪಿ.ವಿ ಸಿಂಧು ಸಂತಸ ವ್ಯಕ್ತಪಡಿಸಿದ್ದಾರೆ.
ಬರ್ಮಿಂಗ್‌ಹ್ಯಾಮ್ 2022 ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಷಟಲ್ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರನ್ನು ಟೀಮ್ ಇಂಡಿಯಾದ ಧ್ವಜಧಾರಿ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಘೋಷಿಸಿದೆ. ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಎರಡನೇ ಧ್ವಜಧಾರಿಯಾಗಲಿದ್ದಾರೆ.
"ಇಂತಹ ಕೂಟದಲ್ಲಿ ತಂಡವನ್ನು ಮುನ್ನಡೆಸುವ ಮತ್ತು ಧ್ವಜಾರೋಹಣ ಮಾಡುವ ಜವಾಬ್ದಾರಿಯನ್ನು ನೀಡಿರುವುದು ಒಂದು ದೊಡ್ಡ ಗೌರವವಾಗಿದೆ. ನಾನು ತುಂಬಾ ಸಂತೋಷವಾಗಿದ್ದೇನೆ ಮತ್ತು ನನ್ನ ಎಲ್ಲಾ ಸಹವರ್ತಿಗಳಿಗೆ ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತೇನೆ. ನನ್ನನ್ನು ಧ್ವಜಧಾರಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಧನ್ಯವಾದ." ಎಂದು ಸಿಂಧು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಮಾಧ್ಯಮದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂತಿಮವಾಗಿ ಪಿ.ವಿ.ಸಿಂಧುಗೆ ಒಲಿದ ಅದೃಷ್ಟ
ರಿಯೊ 2016 ರ ಒಲಿಂಪಿಕ್ಸ್ ಮತ್ತು ಟೋಕಿಯೊ 2020 ರ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಸಿಂಧು ಜೊತೆಗೆ, ಇನ್ನಿಬ್ಬರು ಒಲಿಂಪಿಕ್ ಪದಕ ವಿಜೇತರಾದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮತ್ತು ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿತ್ತು.
ಐಒಎ ಹಂಗಾಮಿ ಅಧ್ಯಕ್ಷ ಅನಿಲ್ ಖನ್ನಾ, ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ, ಐಒಎ ಖಜಾಂಚಿ ಆನಂದೇಶ್ವರ್ ಪಾಂಡೆ ಮತ್ತು ಟೀಮ್ ಇಂಡಿಯಾ ಚೆಫ್ ಡಿ ಮಿಷನ್ ರಾಜೇಶ್ ಭಂಡಾರಿ ಅವರನ್ನೊಳಗೊಂಡ ನಾಲ್ಕು ಸದಸ್ಯರ ಸಮಿತಿಯು ಮೂವರು ಅಥ್ಲೀಟ್‌ಗಳನ್ನು ಹೆಸರಿಸಿತ್ತು. ಅಂತಿಮವಾಗಿ, ಖನ್ನಾ ಮತ್ತು ಮೆಹ್ತಾ ಪಿ.ವಿ ಸಿಂಧು ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಧ್ವಜಧಾರಿಯಾಗಿ ಆಯ್ಕೆ ಮಾಡಿದರು.

ಪಿ.ವಿ.ಸಿಂಧು ಆಯ್ಕೆಯಿಂದ ಸಂತಸ
ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಪ್ರತಿಕ್ರಿಯೆ ನೀಡ, "ಸಿಂಧು ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಧ್ವಜಧಾರಿಯಾಗಿ ಆಯ್ಕೆ ಮಾಡಲು ನಮಗೆ ತುಂಬಾ ಸಂತೋಷವಾಗಿದೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಪಿ.ವಿ ಸಿಂಧು ಮತ್ತು ಟೀಮ್ ಇಂಡಿಯಾದ ಇತರ ಅಥ್ಲೀಟ್‌ಗಳು ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತೇವೆ."
ಇದರ ಜೊತೆಗೆ, ಬರ್ಮಿಂಗ್‌ಹ್ಯಾಮ್ 2022 ಕಾಮನ್‌ವೆಲ್ತ್ ಗೇಮ್ಸ್‌ನ ಟೀಮ್ ಇಂಡಿಯಾ ಚೆಫ್ ಡಿ ಮಿಷನ್ ರಾಜೇಶ್ ಭಂಡಾರಿ, ಜುಲೈ 28, 2022 ರಂದು ನಿಗದಿಪಡಿಸಲಾದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಗಳ ಪರೇಡ್‌ನಲ್ಲಿ ಭಾರತೀಯ ತಂಡದಿಂದ ಗರಿಷ್ಠ 164 ಭಾಗವಹಿಸಬಹುದು ಎಂದು ಹೇಳಿದ್ದಾರೆ.

ಎರಡನೇ ಧ್ವಜಧಾರಿಯಾಗಿ ಮನ್‌ಪ್ರೀತ್ ಸಿಂಗ್ ಆಯ್ಕೆ
ಭಾರತ ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರನ್ನು ಬರ್ಮಿಂಗ್‌ಹ್ಯಾಮ್ 2022 ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಷಟ್ಲರ್ ಪಿವಿ ಸಿಂಧು ಅವರೊಂದಿಗೆ ಟೀಮ್ ಇಂಡಿಯಾದ ಧ್ವಜಧಾರಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಎಂದು ಘೋಷಿಸಿತು.
ಟೋಕಿಯೊ 2020 ಒಲಿಂಪಿಕ್ಸ್‌ನಲ್ಲಿ ಮನ್‌ಪ್ರೀತ್ ಸಿಂಗ್ ನಾಯಕತ್ವದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲೂ ಅವರ ನಾಯಕತ್ವದಲ್ಲಿ ಭಾರತ ಹಾಕಿ ತಂಡ ಪದಕ ಗೆಲ್ಲುವ ಭರವಸೆ ಮೂಡಿಸಿದೆ.

ಮಹಿಳಾ ಕ್ರಿಕೆಟ್ ತಂಡಕ್ಕೆ ಕೊರೊನಾ ಆಘಾತ
ಇದೇ ಮೊದಲ ಬಾರಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ಗೆ ಅವಕಾಶ ನೀಡಲಾಗಿದೆ. ಆದರೆ ಕ್ರೀಡಾಕೂಟ ಆರಂಭಕ್ಕೂ ಮುನ್ನವೆ ಮಹಿಳಾ ಕ್ರಿಕೆಟ್ ತಂಡದ ಇಬ್ಬರು ಆಟಗಾರರಾದ ಬ್ಯಾಟರ್ ಎಸ್ ಮೇಘನಾ ಮತ್ತು ಆಲ್‌ರೌಂಡರ್ ಪೂಜಾ ವಸ್ತ್ರಕರ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಶುಕ್ರವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ದೇಶಕ್ಕೆ ಮರಳಿದ್ದಾರೆ.
ಇಬ್ಬರಿಗೂ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ನಂತರವೇ ತಂಡವನ್ನು ಸೇರಿಕೊಳ್ಳಲು ಅವಕಾಶವಿದೆ. ಹೀಗಾಗಿ ಶುಕ್ರವಾರ ನಡೆಯಲಿರುವ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ. ಜುಲೈ 31 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಎರಡನೇ ಪಂದ್ಯ ಮತ್ತು ಆಗಸ್ಟ್ 3 ರಂದು ಬಾರ್ಬಡೋಸ್ ವಿರುದ್ಧ ಅಂತಿಮ ಲೀಗ್ ಪಂದ್ಯ ನಡೆಯಲಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications