RCB vs DC: ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಿಕ್ತು ಖುಷಿ ಸುದ್ದಿ!

ಏಪ್ರಿಲ್ 27ರಂದು ಭಾನುವಾರ ಐಪಿಎಲ್ 2025ರ ಪಂದ್ಯದಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ. ಸಂಜೆ 7.30ಕ್ಕೆ ನಡೆಯುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಆರ್ ಸಿಬಿ ವಿರುದ್ಧ ಪಂದ್ಯಕ್ಕೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಂತಸದ ಸುದ್ದಿ ಸಿಕ್ಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಐಪಿಎಲ್ 2025 ರ ನಿರ್ಣಾಯಕ ಪಂದ್ಯಕ್ಕೂ ಮುನ್ನ ಫಾಫ್ ಡು ಪ್ಲೆಸಿಸ್ ತಂಡಕ್ಕೆ ಮರಳಿದ್ದಾರೆ. ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್‌ಗೆ ಮತ್ತಷ್ಟು ಬಲ ತಂದಿದ್ದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.

Faf du plessis fit for match against dc vs rcb ipl 2025

ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟರ್ ಫಾಫ್ ಡುಪ್ಲೆಸಿಸ್ ಗಾಯದ ಸಮಸ್ಯೆಯಿಂದಾಗಿ ಐದು ಪಂದ್ಯಗಳಿಂದ ಹೊರಗುಳಿದಿದ್ದಾರೆ, ಆದರೆ ತಂಡದ ಸಹ ಆಟಗಾರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಪ್ರಕಾರ, ಅವರು ಭಾನುವಾರ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆಯಿದೆ. ನನಗೆ ಗೊತ್ತಿರುವ ಪ್ರಕಾರ ಫಾಫ್ ಡುಪ್ಲೆಸಿಸ್ ಭಾನುವಾರ ಪಂದ್ಯಕ್ಕೆ ಲಭ್ಯವಿದ್ದಾರೆ ಎನಿಸುತ್ತದೆ ಎಂದು ಫ್ರೇಸರ್-ಮೆಕ್‌ಗುರ್ಕ್ ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡು ಪ್ಲೆಸಿಸ್ ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿದ್ದು, ಅವರ ಮರಳುವಿಕೆಯ ಭರವಸೆಯನ್ನು ಮತ್ತಷ್ಟು ಹೆಚ್ಚಿಸಿದೆ. ಫಾಫ್ ಡುಪ್ಲೆಸಿಸ್ ಉತ್ತಮ ಫಾರ್ಮ್‌ನಲ್ಲಿದ್ದು ಅವರು ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ. ಅವರು ಆಡದೇ ಇದ್ದಾಗ 5 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತಿದ್ದು ಮೂರು ಪಂದ್ಯಗಳನ್ನು ಗೆದ್ದಿದೆ.

ಫಾಫ್ ತಮ್ಮ ಹಿಂದಿನ ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ವಿರುದ್ಧ ಆಡುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಆಡಿದರು ಆದರೆ 2 ರನ್ ಗಳಿಸಿ ಔಟಾಗಿದ್ದರು.

ಉಭಯ ತಂಡಗಳ ಆಡುವ ಬಳಗ

ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.

ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡುಪ್ಲೆಸಿಸ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (‍ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+