RCB: ಆರ್‌ಸಿಬಿ ದೊಡ್ಡ ಆತಂಕ ದೂರ: 20 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದ ಫಾಫ್ ಡು ಪ್ಲೆಸಿಸ್
ಐಪಿಎಲ್ ಆರಂಭಕ್ಕೆ ಮುನ್ನ ಆರ್ ಸಿಬಿ ತಂಡಕ್ಕಿದ್ದ ದೊಡ್ಡ ಆತಂಕವೊಂದು ದೂರವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಎಸ್‌ಎ20 ಟೂರ್ನಿಯಲ್ಲಿ ರನ್ ಗಳಿಸದೆ ನಿರಾಸೆ ಮೂಡಿಸಿದ್ದ ಜೋಬರ್ಗ್ ಸೂಪರ್ ಕಿಂಗ್ಸ್ (ಜೆಎಸ್‌ಕೆ) ನಾಯಕ ಫಾಫ್ ಡು ಪ್ಲೆಸಿಸ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ.
ನ್ಯೂಲ್ಯಾಂಡ್ಸ್‌ನಲ್ಲಿ ಎಂಐ ಕೇಪ್ ಟೌನ್ (ಎಂಐಸಿಟಿ) ವಿರುದ್ಧದ ಪಂದ್ಯದಲ್ಲಿ 20 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. ಈ ಮೂಲಕ ಜೋಬರ್ಗ್ ಸೂಪರ್ ಕಿಂಗ್ಸ್ ಎಸ್‌ಎ 20 ಲೀಗ್‌ನಲ್ಲಿ 10 ವಿಕೆಟ್‌ಗಳ ಜಯ ಸಾಧಿಸಿದೆ.

ಜೋಬರ್ಗ್‌ನ ಆರಂಭಿಕಾರದ ಡುಪ್ಲೆಸಿಸ್ ಮತ್ತು ಲೆಯುಸ್ ಡು ಪ್ಲೂಯ್, ಎಂಐ ಕೇಪ್ ಟೌನ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಮಳೆಯಿಂದ ಮೊಟಕುಗೊಂಡ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ 98 ರನ್‌ಗಳ ಗುರಿಯನ್ನು ಕೇವಲ 5.4 ಓವರ್‌ಗಳಲ್ಲಿ ಬೆನ್ನಟ್ಟಿತು.
ಫಾರ್ಮ್‌ಗೆ ಮರಳಿದ ಡುಪ್ಲೆಸಿಸ್
ಎಂಐ ಕೇಪ್ ಟೌನ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಜೋಬರ್ಗ್ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮಳೆ ಪಂದ್ಯಕ್ಕೆ ಅಡ್ಡಿ ಪಡಿಸಿದ ಕಾರಣ, 8 ಓವರ್ ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಎಂಐ ಕೇಪ್ ಟೌನ್ ಮೂರು ವಿಕೆಟ್ ಕಳೆದುಕೊಂಡು 80 ರನ್ ಗಳಿಸಿತು. ನಾಯಕ ಕೀರನ್ ಪೊಲಾರ್ಡ್ 10 ಎಸೆತಗಳಲ್ಲಿ 33 ರನ್ ಗಳಿಸಿದರು. ಡಕ್‌ವರ್ಥ್ ಲೂಯಿಸ್ ನಿಯಮದ ಪ್ರಕಾರ ಜೋಬರ್ಗ್ ಸೂಪರ್ ಕಿಂಗ್ಸ್ 8 ಓವರ್ ಗಳಲ್ಲಿ 98 ರನ್ ಗಳಿಸಬೇಕಾಗುತ್ತದೆ.
ಈ ಮೊತ್ತವನ್ನು ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ಕೇವಲ 5.4 ಓವರ್ ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 98 ರನ್ ಗಳಿಸುವ ಮೂಲಕ ಸುಲಭ ಗೆಲುವು ಸಾಧಿಸಿದೆ. ನಾಯಕ ಫಾಫ್ ಡುಪ್ಲೆಸಿಸ್ 20 ಓವರ್ ಗಳಲ್ಲಿ 4 ಬೌಂಡರಿ ಮತ್ತು ಮೂರು ಸಿಕ್ಸರ್ ಸಹಿತ 50 ರನ್ ಗಳಿಸಿದರು. ಲಿಯುಸ್ ಡು ಪ್ಲೂಯ್ 14 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ ಸಹಿತ 41 ರನ್ ಗಳಿಸಿದರು.
ಜೋಬರ್ಗ್ ಸೂಪರ್ ಕಿಂಗ್ಸ್ ಹಿಂದಿನ ಏಳು ಪಂದ್ಯಗಳಲ್ಲಿ ಎರಡು ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿದ್ದರೆ. ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತ್ತು. ಡು ಪ್ಲೆಸಿಸ್ ಬ್ಯಾಟ್‌ನೊಂದಿಗೆ ಫಾರ್ಮ್‌ಗೆ ಮರಳಿದ್ದು, ನಾಕೌಟ್ ಹಂತಗಳ ಓಟದಲ್ಲಿ ಅವರ ತಂಡವನ್ನು ಜೀವಂತವಾಗಿಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.












Click it and Unblock the Notifications