ಕೊಲ್ಕತ್ತಾದಲ್ಲಿ ವಿಶ್ವಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ನೋಡಲು ಬಿಡದಿದ್ದಕ್ಕೆ ಬಾಟಲಿ ಬೀಸಿದ ಅಭಿಮಾನಿಗಳು
Lionel Messi: ಅರ್ಜೆಂಟೈನಾದ ವಿಶ್ವಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಇಂದು (ಡಿಸೆಂಬರ್ 13) ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆ ವಿವೇಕಾನಂದ ಯುವಭಾರತಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಆದರೆ. ಈ ವೇಳೆ ಬಾಟಲಿಗಳ ತೂರಿದ ಘಟನೆ ನಡೆದಿದ್ದು, ಇದು ಇಡೀ ದೇಶದ ಗಮನ ಸೆಳದಿದೆ.
ಫುಟ್‌ಬಾಲ್ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿಯವರ ಬಹುನಿರೀಕ್ಷಿತ ಕೋಲ್ಕತ್ತಾ ಪ್ರವಾಸ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳು ಆಕ್ರೋಶಗೊಂಡು ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಮೆಸ್ಸಿ ಅವರನ್ನು ವೀಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಕೋಪಗೊಂಡ ವೀಕ್ಷಕರು ಮೈದಾನಕ್ಕೆ ಬಾಟಲಿಗಳನ್ನು ಎಸೆದು, ಬ್ಯಾನರ್‌ಗಳು ಮತ್ತು ಆಸನಗಳನ್ನು ಸಹ ಕಿತ್ತೆಸೆದಿರುವ ಘಟನೆ ನಡೆದಿದೆ. ಇದೇ ವೇಳೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದ್ದಾರೆ. ತಾವು ಮಾತ್ರ ಅವರನ್ನು ಭೇಟಿ ಮಾಡಿ ಹಸ್ತಕ್ಷಾರ ಪಡೆಯಬಹುದು. ಆದರೆ, ನಾವು ಅವರನ್ನು ನೋಡಲು ಕೂಡ ಅವಕಾಶ ಮಾಡಿಕೊಡದಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಅಭಿಮಾನಿಗಳ ಆಕ್ರೋಶದಿಂದ ಸ್ಥಳದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಯಿತು. ಮೆಸ್ಸಿ ಅವರನ್ನು 10 ನಿಮಿಷಗಳಿಗಿಂತ ಕಡಿಮೆ ಕಾಲ ಕ್ರೀಡಾಂಗಣದೊಳಗೆ ಇರಿಸಲಾಗಿತ್ತು. ಬಳಿಕ ಅವರನ್ನು ಹೊರಗಡೆ ಕರೆದುಕೊಂಡು ಬರಲಾಯಿತು. ಇದೇ ವಿಚಾರಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ಬಾಟಲಿ ಹಾಗೂ ಕಲ್ಲುಗಳನ್ನು ತೂರಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
#WATCH | Kolkata, West Bengal: Angry fans resort to vandalism at the Salt Lake Stadium in Kolkata, alleging poor management of the event.
— ANI (@ANI) December 13, 2025
Star footballer Lionel Messi has left the Salt Lake Stadium in Kolkata.
A fan of star footballer Lionel Messi said, "Absolutely terrible… pic.twitter.com/TOf2KYeFt9
ಅರ್ಜೆಂಟೀನಾದ ಫುಟ್‌ಬಾಲ್ ಐಕಾನ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಗಂಟೆಗಟ್ಟಲೇ ಕಾದಿದ್ದಾರೆ. ಆದರೆ, ಕೆಲ ಸಮಯದವರೆಗೆ ಮಾತ್ರ ಅವರನ್ನು ಕ್ರೀಡಾಂಗಣದಲ್ಲಿ ಇರಿಸಿಕೊಂಡು ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಸ್ತಾಕ್ಷರ ಪಡೆದು ಹೊರಗಡೆ ಕಳುಹಿಸಿದ್ದಾರೆ. ಆದರೆ, ನಮಗೆ ನೋಡಲೂ ಕೂಡ ಅವಕಾಶ ಮಾಡಿಕೊಡಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಾಟಲಿ ತೂರಿದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಹೈದರಾಬಾದ್‌ನಲ್ಲಿ ಮೆಸ್ಸಿ: ಭಾರತ ಪ್ರವಾಸದಲ್ಲಿರುವ ವಿಶ್ವಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಅವರು, ಹೈದರಾಬಾದ್‌ನಲ್ಲಿ ತಮ್ಮ ಕಾಲ್ಚಳಕವನ್ನು ತೋರಿ ಗಮನ ಸೆಳದರು. ಗೋಟ್ ಇಂಡಿಯಾ ಟೂರ್ನ (GOAT India Tour) ಅಂಗವಾಗಿ ಹೈದರಾಬಾದ್‌ಗೆ ಆಗಮಿಸಿದ್ದ ಲಿಯೋನಲ್ ಮೆಸ್ಸಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಜೊತೆ ಫುಟ್‌ಬಾಲ್ ಆಡಿದರು. ಬಳಿಕ ಸ್ಟೇಡಿಯಂ ಸುತ್ತು ಹಾಕಿದ ಮೆಸ್ಸಿ ಅಭಿಮಾನಿಗಳತ್ತ ಚೆಂಡನ್ನ ಕಿಕ್ ಮಾಡಿದರು.
ಈ ಕ್ಷಣವನ್ನು ಹತ್ತಿರದಿಂದ ಕಣ್ತುಂಬಿಕೊಂಡ ಹೈದರಾಬಾದ್ ಜನ ಹಾಗೂ ಅಭಿಮಾನಿಗಳು ಸಂಸತಸಗೊಂಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕೊಲ್ಕತ್ತಾ ಭೇಟಿ ಬಳಿಕ ಲಿಯೋನಲ್ ಮೆಸ್ಸಿ ಅವರು ಸಂಜೆ ಸಂಜೆ 4:30ರ ಸುಮಾರಿಗೆ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅಲ್ಲಿಂದ ನೇರವಾಗಿ ತಾಜ್ ಫಲಕ್ನುಮಾ ಪ್ಯಾಲೆಸ್‌ಗೆ ಆಗಮಿಸಿದರು. ಈ ವೇಲೆ ಮೆಸ್ಸಿ ಅವರನ್ನ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಸ್ವಾಗತಿಸಿದರು. ನಂತರ, ಮೆಸ್ಸಿ ಉಪ್ಪಲ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ರೇವಂತ್ ರೆಡ್ಡಿ ಅವರೊಂದಿಗೆ ಫುಟ್‌ಬಾಲ್ ಆಡಿ ಗಮನ ಸೆಳೆದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications