Jasprit Bumrah: ಬುಮ್ರಾಗೆ ಎಂಟು ದಿನ ವಿಶ್ರಾಂತಿ ಸಾಕಾಗಿಲ್ಲವೇ ಪ್ರಶ್ನಿಸಿದ ಮಾಜಿ ಕೋಚ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ವೇಳೆ ಟೀಮ್ ಇಂಡಿಯಾದ ತಂಡದ ಸಂಯೋಜನೆ ಹೇಗಿರಲಿದೆ ಎಂಬ ಬಗ್ಗೆ ಪ್ರಶ್ನೆಗಳು ಇದ್ದವು. ಇದಕ್ಕೆ ಶುಭಮನ್ ಗಿಲ್ ಉತ್ತರ ನೀಡಿದ್ದಾರೆ. ಗಿಲ್ ತಂಡವನ್ನು ಪ್ರಕಟಿಸಿದಾಗ ಅಭಿಮಾನಿಗಳಿಗೆ ಶಾಕ್ ಕಾದಿತ್ತು. ಕಾರಣ ಟೀಮ್ ಇಂಡಿಯಾದ ಸ್ಟಾರ್ ಬೌಲರ್‌ಗೆ ವಿಶ್ರಾಂತಿ ನೀಡಲಾಗಿತ್ತು.
ಭಾರತದ ಪ್ಲೇಯಿಂಗ್ ಇಲೆವೆನ್ ಘೋಷಿಸಿದಾಗ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲಾಗಿತ್ತು. ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯ ಆಡಿದ ಬಳಿಕ 8 ದಿನಗಳ ವಿಶ್ರಾಂತಿಯನ್ನು ಪಡೆದಿರುತ್ತಾರೆ. ಇಷ್ಟು ವಿಶ್ರಾಂತಿ ಸಾಕಾಗಲಿಲ್ಲವೇ ಎಂಬ ಪ್ರಶ್ನೆಗಳನ್ನು ಅಭಿಮಾನಿಗಳು ಕೇಳ್ತಾ ಇದ್ದಾರೆ. ಟೀಮ್ ಇಂಡಿಯಾವನ್ನು ಸಂಕಷ್ಟದಲ್ಲಿ ಬಿಟ್ಟು ವಿಶ್ರಾಂತಿ ಪಡೆಯುವುದು ಎಷ್ಟು ಸರಿ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಟೀಮ್ ಇಂಡಿಯಾದ ನಾಯಕನ ಸ್ಥಾನದ ಮೇಲೆ ಶುಭಮನ್ ಗಿಲ್ ಹಾಗೂ ಜಸ್ಪ್ರೀತ್ ಬುಮ್ರಾ ಕಣ್ಣು ನೆಟ್ಟಿದ್ದರು. ಆದರೆ ಜಸ್ಪ್ರೀತ್ ಬುಮ್ರಾ ನಾಯಕತ್ವ ಬೇಡ ಎಂದು ತಿಳಿಸಿದ್ದರು. ಇದಕ್ಕೆ ಕಾರಣ ಅವರು ಸರಣಿಯ ಎಲ್ಲ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದ್ದರು. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬುಮ್ರಾ ಕೇವಲ ಮೂರು ಪಂದ್ಯಗಳಲ್ಲಿ ಕಣಕ್ಕೆ ಇಳಿಯುವುದಾಗಿ ತಿಳಿಸಿದ್ದರು. ಹೀಗಾಗಿ ಇವರು ಸರಣಿಯ ಎರಡನೇ ಪಂದ್ಯದಿಂದ ದೂರ ಸರಿದಿದ್ದಾರೆ.
ಅಭಿಮಾನಿಗಳ ಬೇಸರ
ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರ ನಡಿದ್ದರ ಬಗ್ಗೆ ಅಭಿಮಾನಿಗಳು ಪ್ರಶ್ನೆಗಳನ್ನು ಎತ್ತಿದ್ದಾರೆ. ಮೊದಲ ಪಂದ್ಯ ಹಾಗೂ ಎರಡನೇ ಪಂದ್ಯದ ನಡುವೆ ಒಂದು ವಾರದ ಅಂತರವಿತ್ತು. ಇಷ್ಟು ವಿಶ್ರಾಂತಿ ಬುಮ್ರಾ ಅವರಿಗೆ ಸಾಲಲಿಲ್ಲವೇ ಎಂಬ ಪ್ರಶ್ನೆಗಳನ್ನು ಮಾಡಿದ್ದಾರೆ. ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯ ಟೀಮ್ ಇಂಡಿಯಾಕ್ಕೆ ಮಹತ್ವದಾಗಿದೆ. ಈಗಾಗಲೇ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಕಂಡಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಅನಿವಾರ್ಯವಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಬುಮ್ರಾ ತಂಡದಿಂದ ಹೊರ ನಡೆದಿದ್ದರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.
ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಸಹ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದಿದ್ದರ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
"This becomes a very important Test match" 👀
— Sky Sports Cricket (@SkyCricket) July 2, 2025
Ravi Shastri on the impact of Jasprit Bumrah missing the second Test 🇮🇳 pic.twitter.com/df2Y7sXWDA
ಎಡ್ಜ್‌ಬಸ್ಟನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲು ಕಂಡರೆ, ಉಳಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸುವುದು ಕಷ್ಟವಾಗುತ್ತದೆ. ಇನ್ನು ಐಪಿಎಲ್‌ನಲ್ಲಿ ಆಡುವಾಗ ಫ್ರಾಂಚೈಸಿ ತಂಡದ ಪರ ಎರಡು ತಿಂಗಳು ಪೂರ್ತಿ ಆಡಿದ್ದಾರೆ. ಆಗ ಕೆಲಸದ ಹೊರೆಯ ನಿರ್ವಹಣೆ ನೆನಪಾಗಲಿಲ್ಲವೇ ಎಂದು ಅಭಿಮಾನಿಗಳು ಪ್ರಶ್ನೆಗಳು ಮಾಡುತ್ತಿದ್ದಾರೆ.
ಎರಡನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಬದಲಿಗೆ ತಂಡದಲ್ಲಿ ಆಕಾಶ್ ದೀಪ್‌ಗೆ ಸ್ಥಾನ ಲಭಿಸಿದೆ. ಆದರೆ ಬುಮ್ರಾ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ.












Click it and Unblock the Notifications