Ind vs Aus: ಗಬ್ಬಾ ಟೆಸ್ಟ್‌ನಲ್ಲಿ ಆತ ಆಡಲೇಬೇಕು ಎಂದ ಫ್ಯಾನ್ಸ್

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಕೆಟ್ಟ ಸೋಲು ಕಂಡಿದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಅವಕಾಶದ ಮೇಲೆ ಪರಿಣಾಮ ಬೀರಿದೆ. ಡಿಸೆಂಬರ್ 14ರಂದು ಮೂರನೇ ಟೆಸ್ಟ್ ಆರಂಭವಾಗಲಿದ್ದು ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತಕ್ಕೆ ಫೈನಲ್ ತಲುಪಲು ಅವಕಾಶವಿರುತ್ತದೆ. ಮೂರನೇ ಪಂದ್ಯದಲ್ಲಿ ಭಾರತ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಬದಲಾವಣೆ ಮಾಡುತ್ತಾ ಎನ್ನುವ ಪ್ರಶ್ನೆಗಳಿದ್ದು, ಹಿರಿಯ ವೇಗಿ ಮೊಹಮ್ಮದ್ ಶಮಿ ಆಡಲೇಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

ಗಾಯಗೊಂಡಿದ್ದ ಮೊಹಮ್ಮದ್ ಶಮಿ ಚೇತರಿಸಿಕೊಂಡಿದ್ದು ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ಬಂಗಾಳ ತಂಡಕ್ಕಾಗಿ ಆಡುತ್ತಿರುವ ಅವರು ತಾನು ಫಿಟ್ ಆಗಿದ್ದೇನೆ ಎನ್ನುವ ಸಂದೇಶ ಕೊಟ್ಟಿದ್ದಾರೆ. ಸೋಮವಾರ ನಡೆದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚಂಡೀಗಢ ವಿರುದ್ಧ ಶಮಿ ಬೌಲಿಂಗ್‌ನಲ್ಲಿ ಅಷ್ಟೇ ಅಲ್ಲದೆ ಬ್ಯಾಟಿಂಗ್‌ನಲ್ಲಿ ಕೂಡ ಮಿಂಚಿದರು.

Fans wants Mohammed shami should play in gabba test bgt australia

ಬಂಗಾಳ ತಂಡ ಸಂಕಷ್ಟದಲ್ಲಿದ್ದಾಗ ಸ್ಫೋಟಕ ಬ್ಯಾಟಿಂಗ್ ಮಾಡಿದ ಶಮಿ 17 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 32 ರನ್ ಗಳಿಸಿ ಗಮನ ಸೆಳೆದರು. ಬಳಿಕ ಬಿಗಿ ಬೌಲಿಂಗ್ ಮಾಡಿದ ಅವರು 4 ಓವರ್ ಗಳಲ್ಲಿ 25 ರನ್ ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದುಕೊಂಡರು. ಚಂಡೀಗಢ ವಿರುದ್ಧ 3 ರನ್‌ಗಳ ರೋಚಕ ಗೆಲುವು ಸಾಧಿಸಿದ ಬಂಗಾಳ ಕ್ವಾರ್ಟರ್ ಫೈನಲ್ ತಲುಪಿದೆ.

ಶಮಿ ಆಡಬೇಕು ಎಂದ ಫ್ಯಾನ್ಸ್

ಅಡಿಲೇಡ್ ಟೆಸ್ಟ್‌ನಲ್ಲಿ ಭಾರತ ಸೋತ ಬಳಿಕ ಮೂರನೇ ಟೆಸ್ಟ್‌ನಲ್ಲಿ ಮೊಹಮ್ಮದ್ ಶಮಿ ಆಡಬೇಕು ಎನ್ನುವ ಕೂಗು ಜೋರಾಗಿದೆ. ಜಸ್ಪ್ರೀತ್ ಬುಮ್ರಾ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಿದ್ದು, ಉಳಿದ ಬೌಲರ್ ಗಳ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಬರುತ್ತಿಲ್ಲ. ಶಮಿ ಅಪಾರ ಅನುಭವ ಹೊಂದಿದ್ದ ಅವರು ತಂಡದಲ್ಲಿದ್ದರೆ ಭಾರತದ ಬೌಲಿಂಗ್‌ಗೆ ಮತ್ತಷ್ಟು ಬಲ ಬರಲಿದೆ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+