Kite Festival: ಕೊಪ್ಪಳದಲ್ಲಿ ಮೊದಲ ಬಾರಿಗೆ ಗಾಳಿಪಟ ಉತ್ಸವ, ವಿಶೇಷತೆಗಳು

ಕೊಪ್ಪಳ 2025ರ ಗವಿಮಠದ ಜಾತ್ರೆಗೆ ಸಿದ್ದವಾಗುತ್ತಿದೆ. ಲಕ್ಷಾಂತರ ಭಕ್ತರು ಸೇರುವ ಈ ಅಜ್ಜನ ಜಾತ್ರ ಮಹಾದಾಸೋಹ ಸೇರಿದಂತೆ ವಿವಿಧ ಕಾರಣಕ್ಕೆ ಪ್ರಸಿದ್ಧಿಯಾಗಿದೆ. ಇದನ್ನು ದಕ್ಷಿಣದ ಕುಂಭಮೇಳ ಎಂದು ಸಹ ಕರೆಯಲಾಗುತ್ತದೆ. ಜನವರಿಯಲ್ಲಿ ನಡೆಯಲಿರುವ ಗವಿಶ್ರೀ ಜಾತ್ರೆಯ ಅಂಗವಾಗಿ ಮೊದಲ ಬಾರಿಗೆ ಕೊಪ್ಪಳದಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ.

ಈ ಕುರಿತು ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಮಾಹಿತಿ ನೀಡಿದ್ದಾರೆ. ಜನವರಿಯಲ್ಲಿ ನಡೆಯಲಿರುವ ಗವಿಶ್ರೀ ಜಾತ್ರೆಯ ಅಂಗವಾಗಿ ಕೊಪ್ಪಳ ನಗರದಲ್ಲಿ ಗವಿಶ್ರೀ ಕ್ರೀಡಾ ಉತ್ಸವ-2025 ಅನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

First Time Kite Festival In Koppal On January 16

ಗಾಳಿಪಟ ಉತ್ಸವ: ಸಂಸದರು ಮಾತನಾಡಿ, "ಪ್ರಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಗಾಳಿಪಟ ಉತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಹರ್ಯಾಣದಿಂದ ಅನುಭವಿ ನುರಿತ ತಂಡಗಳು ಗವಿಶ್ರೀ ಮೈದಾನದಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಳ್ಳಲಿವೆ" ಎಂದರು.

"ಸುಮಾರು 100ಕ್ಕೂ ಅಧಿಕ ಗಾಳಿಪಟಗಳ ಪ್ರದರ್ಶನವನ್ನು ಜನವರಿ 16ರಂದು ನಡೆಸಲಾಗುತ್ತದೆ. ಮಕ್ಕಳು, ಯುವಕರಿಗೆ ಸ್ಫೂರ್ತಿ ತುಂಬುವಂತೆ ಮಕರ ಸಂಕ್ರಾತಿಯ ವಿಶೇಷವಾಗಿಯೇ ಬೃಹತ್ ಪ್ರಮಾಣದ ಗಾಳಿಪಟ ಉತ್ಸವವನ್ನು ಆಯೋಜಿಸಲಾಗಿದೆ" ಎಂದು ಸಂಸದರು ತಿಳಿಸಿದರು.

ಜಿಲ್ಲೆಯಲ್ಲಿ ಐತಿಹಾಸಿಕವಾಗಿ, ಧಾರ್ಮಿಕವಾಗಿ ಹಾಗೂ ಭಕ್ತಿಯಿಂದ ಜಿಲ್ಲೆ, ರಾಜ್ಯ, ವಿದೇಶಗಳಿಂದಲೂ ಕೂಡ ಭಕ್ತರು ಆಗಮಿಸಿ ನೇರವೆರಿಸುವ ಅಂದಾಜ 25 ಲಕ್ಷ ಅಧಿಕ ಭಕ್ತಾದಿಗಳು, ಜನರು ಸೇರುವಂತಹ ಗವಿಶ್ರೀ ಜಾತ್ರ ಮಹೋತ್ಸವ ಅಂಗವಾಗಿ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ. ಯುವಜನರು, ಮಹಿಳೆಯರು, ರೈತರು, ಮಕ್ಕಳು, ಎಲ್ಲಾ ವರ್ಗದವರು ಕೂಡ ಸೇರಿಕೊಂಡು ಜಾನಪದ ಶೈಲಿಯ ಹಾಗೂ ಪ್ರಸ್ತುತ ಪ್ರಚಲಿತವಿರುವ ಆಟಗಳನ್ನು ಸೇರಿಸಿ ಜಾತ್ರೆಯ ಅಂಗವಾಗಿ ಗವಿಶ್ರೀ ಕ್ರೀಡಾ ಉತ್ಸವ-2025 ಅನ್ನು ಆಯೋಜಿಸಲಾಗಿದೆ.

ಕ್ರೀಡಾಕೂಟದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಶಿಯೇಶನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಕುಸ್ತಿ ಸಂಘ, ಬ್ಯಾಡ್ಮಿಂಟನ್ ಅಸೋಶಿಯೇಶನ್, ಕಬಡ್ಡಿ ಹಾಗೂ ವಾಲಿಬಾಲ್ ಅಸೋಶಿಯೇಶನ್ ಮತ್ತು ಹಲವಾರು ಸಂಘ ಸಂಸ್ಥೆಗಳನ್ನ ಒಳಗೊಂಡು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ವರ್ಗದವರು ಮುಕ್ತವಾಗಿ ಭಾಗವಹಿಸುವ ಹಾಗೇ ಗವಿಶ್ರೀ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ 17 ವಿವಿಧ ರೀತಿಯ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ.

ಪುರುಷ ಮತ್ತು ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಮ್ಯಾರಾಥಾನ್, ಶೆಟಲ್ ಬ್ಯಾಡ್ಮಿಂಟನ್, ಛದ್ನವೇಷ, ದೇಹದಾರ್ಡ್ಯ, ಪಂದ್ಯಾವಳಿ ಏರ್ಪಡಿಸಲಾಗಿದೆ. ಪುರುಷರ ಆಹ್ವಾನಿತ ಕ್ರೀಡೆಗಳಾಗಿ ಕ್ರಿಕೆಟ್, ಗಾಳಿಪಟ, ಮಲ್ಲಕಂಬ, ಕುಸ್ತಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಪುರುಷರಿಗಾಗಿ ಜಿಲ್ಲಾ ಮಟ್ಟದಲ್ಲಿ ಎತ್ತಿನ ಬಂಡಿ ಶೃಂಗಾರ ಸ್ಪರ್ಧೆ, ಯುವಕರಿಂದ ಎತ್ತಿನ ಬಂಡಿ ಜಗ್ಗುವುದು, ಸಂಗ್ರಾಣಿ ಕಲ್ಲು ಎತ್ತುವದು ಮತ್ತು ವಿಕಲಚೇತನರ ವಾಲಿಬಾಲ್ ಪಂದ್ಯಾವಳಿ. ಪುರುಷರ ಹಾಗೂ ಮಹಿಳೆಯರಿಗಾಗಿ ಜಿಲ್ಲಾ ಮಟ್ಟದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ, ಮಹಿಳೆಯರಿಗೆ ಜಿಲ್ಲಾ ಮಟ್ಟದ ರಂಗೋಲಿ ಹಾಗೂ ಥ್ರೋಬಾಲ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಜನವರಿ 14ರಂದು ಸಂಜೆ 3.30 ಗಂಟೆಗೆ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಗವಿಮಠ ಆವರಣದಲ್ಲಿ ಆಯೋಜಿಸಲಾಗಿದೆ. ಗವಿಶ್ರೀ ಕ್ರೀಡಾಕೂಟದಲ್ಲಿ ರೈತರನ್ನು ಗಮನದಲ್ಲಿ ಇಟ್ಟುಕೊಂಡು ರೈತರ ಜೀವನ ಅವಿಭಾಜ್ಯ ಅಂಗವಾದ ಎತ್ತು, ಚಕ್ಕಡಿ, ಇವುಗಳ ಅಲಂಕಾರದ ಸ್ಪರ್ಧೆಯನ್ನು ಜನವರಿ 17ರಂದು ತಾಲ್ಲೂಕು ಕ್ರೀಡಾಂಗಣದಿಂದ ಗವಿಮಠದವರೆಗೆ ನಡೆಯಲಿದೆ. ರೈತ ಮಕ್ಕಳು ಮತ್ತು ಯುವಜನರಿಗಾಗಿ ಎತ್ತಿನ ಬಂಡಿ ಜಗ್ಗುವ ಸ್ಪರ್ಧೆಯನ್ನು ನಡೆಸಲಾಗುತ್ತದೆ.

ಜನವರಿ 14ರಂದು ಪುರುಷ ಹಾಗೂ ಮಹಿಳೆಯರಿಗಾಗಿ ಮ್ಯಾರಥಾನ್ ಸ್ಪರ್ಧೆ. ಜನವರಿ 15ರಂದು ಗವಿಮಠದ ಆವರಣದಲ್ಲಿ ವಿಶೇಷಚೇತನ ಮಕ್ಕಳಿಂದ ಮಲ್ಲಕಂಬ ಪ್ರದರ್ಶನ ಮತ್ತು ಯುವಕರಿಂದ ಎತ್ತಿನ ಬಂಡಿ ಜಗ್ಗುವ ಸ್ಪರ್ಧೆಗಳು ಇರಲಿವೆ. ಜನವರಿ 16ರಂದು ಗವಿಮಠದ ಆವರಣದಲ್ಲಿ ಕುಸ್ತಿ ಸ್ಪರ್ಧೆ ಮತ್ತು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶೆಟಲ್ ಬ್ಯಾಡ್ಮಿಂಟನ್ (ಡಬಲ್ಸ್) ಸ್ಪರ್ಧೆ, ಹಗ್ಗ-ಜಗ್ಗಾಟ, ಗಾಳಿಪಟ ಉತ್ಸವ ಮತ್ತು ತಾಲ್ಲೂಕು ಕ್ರೀಡಾಂಗಣದಲ್ಲಿ ಬಾಲಿಬಾಲ್, ವಿಕಲಚೇತನರ ಬಾಲಿಬಾಲ್, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕಬಡ್ಡಿ, ಛದ್ಮವೇಷ ಸ್ಪರ್ಧೆ, ಪುರುಷರಿಗಾಗಿ ದೇಹದಾರ್ಡ್ಯತೆ ಸ್ಪರ್ಧೆ ಹಾಗೂ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+