ಬೆಂಗಳೂರಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆತ್ಮಹತ್ಯೆಗೆ ಶರಣು, ಕನ್ನಡಿಗನ ಸಾವಿಗೆ ಕಾರಣವೇನು?
ಟೀಮ್ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ಡೇವಿಡ್ ಜಾನ್ಸನ್ ( 52 ವರ್ಷ) ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮ್ಮುಕಿ ಆತ್ಮಹತ್ಯೆಗೆ ಮುಂದಾದ ಘಟನೆ ನಡೆದಿದೆ.
ಹಾಸನದ ಅರಿಸಿಕೇರೆ ಮೂಲದವರಾದ ಡೇವಿಡ್ ಜಾನ್ಸನ್ ಬೆಂಗಳೂರಿನ ಕೊತ್ತನೂರಿನಲ್ಲಿರುವ ಎಸ್‌ಎಲ್‌ವಿ ಪ್ಯಾರೇಡೆಸ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 11.15ಕ್ಕೆ ಈ ಘಟನೆ ಸಂಭವಿಸಿದ್ದು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ.

ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ಆಟಗಾರರು ಸಂತಾಪು ಸೂಚಿಸಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಟೀಮ್ ಇಂಡಿಯಾ ಪರ ಇವರು ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ ಕೀರ್ತಿ ತಮ್ಮದಾಗಿಸಿಕೊಂಡಿದ್ದಾರೆ. 1996ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಡೇವಿಡ್ ಜಾನ್ಸನ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಕಾಲದಲ್ಲಿ ಅವರು ಟೀಮ್ ಇಂಡಿಯಾದ ವೇಗದ ಬೌಲರ್ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದ್ದರು. ಇವರು ಗಂಟೆಗೆ 157.8 ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ನಿರ್ಮಿಸಿದ್ದರು. ಅಲ್ಲದೆ ಇದೇ ಎಸೆತದಲ್ಲಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
Saddened to hear the passing of my cricketing colleague David Johnson. Heartfelt condolences to his family. Gone too soon “ Benny”!
— Anil Kumble (@anilkumble1074) June 20, 2024
ಟೀಮ್ ಇಂಡಿಯಾ ಪರ ಇವರು 2 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 3 ವಿಕೆಟ್ ಪಡೆದಿದ್ದಾರೆ. ಅಲ್ಲದೆ 8 ರನ್ ಬಾರಿಸಿದ್ದಾರೆ. ಲೀಸ್ಟ್ ಎ ಕ್ರಿಕೆಟ್‌ನಲ್ಲಿ ಇವರು 33 ಪಂದ್ಯಗಳನ್ನು ಆಡಿದ್ದು, 41 ವಿಕೆಟ್ ಪಡೆದಿದ್ದಾರೆ. ಡೇವಿಡ್ ಜಾನ್ಸನ್ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ 125 ವಿಕೆಟ್ ಕಬಳಿಸಿ ಮಿಂಚಿದ್ದರು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications