ODI World Cup 2023: ಈ ಆಟಗಾರನನ್ನು ನಿರ್ಲಕ್ಷಿಸಬಾರದು: ದ್ರಾವಿಡ್ ವಿರುದ್ಧ ಮಾಜಿ ಕ್ರಿಕೆಟಿಗನ ಟೀಕೆ
ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡದ ತಯಾರಿ ಆರಂಭವಾಗಿದೆ. ಪ್ಲೇಯಿಂಗ್ 11 ಅಂತಿಮಗೊಳಿಸಲು ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಹಲವು ಪ್ರಯೋಗ ಮಾಡುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಹಲವು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಯಿತು, ಆದರೆ ಭಾರತ ಈ ಪಂದ್ಯದಲ್ಲಿ ಸೋತಿಹೋಯಿತು. ದ್ರಾವಿಡ್ ಮತ್ತು ರೋಹಿತ್ ಶರ್ಮಾರ ಈ ಪ್ರಯೋಗಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ.

ಭಾರತ ತಂಡದ ಮಾಜಿ ಆಯ್ಕೆಗಾರ ಸುನಿಲ್ ಜೋಶಿ ಕೂಡ ಈ ಬಗ್ಗೆ ಕಿಡಿಕಾರಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ಸರಣಿಯನ್ನು ಬಳಸಿಕೊಳ್ಳುವಲ್ಲಿ ಆಯ್ಕೆಗಾರರು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. ಹೊಸ ಆಟಗಾರರಿಗೆ ಅವಕಾಶ ನೀಡಲು ರಾಹುಲ್ ದ್ರಾವಿಡ್ 2ನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದರು, ಹಾಗಿದ್ದರೆ ಅವರಿಗೆ ಈ ಸರಣಿಯಿಂದಲೇ ವಿಶ್ರಾಂತಿ ನೀಡಬೇಕಿತ್ತು ಎಂದು ಹೇಳಿದರು. ಅಲ್ಲದೇ ವಿಶ್ವಕಪ್‌ಗೆ ಅರ್ಹತೆ ಪಡೆಯದ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಆಡುವುದೇ ಅಪ್ರಸ್ತುತ ಎಂದು ಹೇಳಿದ್ದಾರೆ.
"ಹೊಸ ಆಟಗಾರರಿಗೆ ಅವಕಾಶ ನೀಡುವ ಉದ್ದೇಶ ಇದ್ದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಪ್ರವಾಸಕ್ಕೆ ಆಯ್ಕೆ ಮಾಡಬಾರದಿತ್ತು. ಎರಡನೆಯದಾಗಿ, ವೆಸ್ಟ್ ಇಂಡೀಸ್ ವಿಶ್ವಕಪ್‌ಗೆ ಅರ್ಹತೆಯನ್ನೂ ಪಡೆದಿಲ್ಲ. ಹಾಗಾಗಿ ರೋಹಿತ್ ಮತ್ತು ವಿರಾಟ್ ಈ ಸರಣಿಯಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಈ ಸರಣಿಯೇ ಅಪ್ರಸ್ತುತವಾಗಿಗೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡವನ್ನು ಆಟಗಾರರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ನೋಡಲು ಯುವ ತಂಡವನ್ನು ಕಳುಹಿಸುವ ಬಗ್ಗೆ ಆಯ್ಕೆಗಾರರು ಯೋಚಿಸಬೇಕಿತ್ತು. ಯುವ ನಾಯಕನನ್ನು ಗುರುತಿಸಲು ಇದು ಸೂಕ್ತ ಸಮಯವಾಗಿದೆ" ಎಂದು ಹೇಳಿದ್ದಾರೆ.
ಭಾರತ ತಂಡದಲ್ಲಿ ಗಾಯದ ಸಮಸ್ಯೆಯಿಂದ ರೋಹಿತ್, ದ್ರಾವಿಡ್ ಸಾಧ್ಯವಿರುವ ಎಲ್ಲ ಆಯ್ಕೆಗಳನ್ನು ನೋಡುತ್ತಿದ್ದಾರೆ. ರಿಷಬ್ ಪಂತ್ ಹೊರಗುಳಿದಿದ್ದು, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇನ್ನೂ ಗಾಯದಿಂದ ಮರಳಬೇಕಿದೆ. ವಿಕೆಟ್ ಕೀಪರ್ ಇಶಾನ್ ಕಿಶನ್ ಬ್ಯಾಟಿಂಗ್ ಆರಂಭಿಸಿದ್ದಾರೆ. ಒಂದು ವೇಳೆ ಕೆಎಲ್ ರಾಹುಲ್ ಫಿಟ್ ಆಗದಿದ್ದರೆ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ.
ಶಿಖರ್ ಧವನ್ ಕಡೆಗಣಿಸಿದ್ದಕ್ಕೆ ಟೀಕೆ
ತಂಡಕ್ಕೆ ಶಿಖರ್ ಧವನ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಕೂಡ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐಸಿಸಿ ಪಂದ್ಯಾವಳಿಗಳಲ್ಲಿ ಶಿಖರ್ ಧವನ್ ಅರವ ದಾಖಲೆಗಳನ್ನು ನಿರ್ಲಕ್ಷಿಸಬಾರದು ಎಂದು ಹೇಳಿದ್ದಾರೆ. ಶಿಖರ್ ಧವನ್ ಫಿಟ್ ಆಗಿದ್ದು ವೆಸ್ಟ್ ಇಂಡೀಸ್ ವಿರುದ್ಧ ಸರಣಿಗೆ ಆಯ್ಕೆ ಮಾಡಬಹುದಿತ್ತು ಎಂದು ಹೇಳಿದರು.
"ಏಕದಿನ ಕ್ರಿಕೆಟ್‌ನಲ್ಲಿ ಶಿಖರ್ ಧವನ್ ಅವರ ಸಂಖ್ಯೆಯನ್ನು ನೋಡಿ. ಅವರು ಯಾವಾಗಲೂ ಏಕದಿನ ಸ್ವರೂಪದಲ್ಲಿ, ವಿಶೇಷವಾಗಿ ಭಾರತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಐಸಿಸಿ ಟೂರ್ನಿಗಳಲ್ಲಿ ಅವರ ಅನುಭವ ಮತ್ತು ಅಸಾಧಾರಣ ದಾಖಲೆಯನ್ನು ನಿರ್ಲಕ್ಷಿಸಬಾರದು. ರಾಷ್ಟ್ರೀಯ ಆಯ್ಕೆ ಸಮಿತಿಯೊಂದಿಗಿನ ನನ್ನ ಅಧಿಕಾರಾವಧಿಯಲ್ಲಿ, ನಾವು ಯಾವಾಗಲೂ ಧವನ್ ಅವರನ್ನು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಬ್ಯಾಕ್‌ಅಪ್ ಓಪನರ್ ಆಗಿ ಬೆಂಬಲಿಸುತ್ತೇವೆ ಮತ್ತು ಅದಕ್ಕಾಗಿಯೇ ನಾವು 2021 ರಲ್ಲಿ ಶ್ರೀಲಂಕಾದಲ್ಲಿ ಭಾರತ ತಂಡವನ್ನು ಮುನ್ನಡೆಸುವಂತೆ ಕೇಳಿದ್ದೆವು" ಎಂದು ಜೋಶಿ ಹೇಳಿದರು.
ಭಾರತ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಗಸ್ಟ್ 1ರಂದು ಆಡಲಿದೆ. ಅದಾದ ಬಳಿಕ 5 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications