Team India: ಗೌತಮ್ ಗಂಭೀರ್ ಅಸಮಾಧಾನ; ಟೀಂ ಇಂಡಿಯಾ ಆಟಗಾರರಿಗೆ ಶಾಕ್ ಕೊಡಲು ಸಜ್ಜಾದ ಬಿಸಿಸಿಐ
ಕಳೆದ ಕೆಲವು ತಿಂಗಳಿನಿಂದ ಟೀಂ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನಲೆಯಲ್ಲಿ ಹಲವು ನಿಯಮಗಳ ಬದಲಾವಣೆ ಮಾಡಲು ಬಿಸಿಸಿಐ ಸಜ್ಜಾಗಿದೆ. ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಹಿರಿಯ ಆಟಗಾರರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಠಿಣ ಕ್ರಮಕ್ಕೆ ಮುಂದಾಗಿದೆ.
ಇದುವರೆಗೂ ಟೀಂ ಇಂಡಿಯಾ ಆಟಗಾರರು ಪಂದ್ಯಾವಳಿ, ಸರಣಿಗಾಗಿ ವಿದೇಶಕ್ಕೆ ತೆರಳಿದಾಗ ಕುಟುಂಬದ ಸದಸ್ಯರನ್ನು ಕರೆದುಕೊಂಡು ಹೋಗಲು, ಜೊತೆಯಲ್ಲಿ ತಂಗಲು ಅವಕಾಶ ನೀಡಲಾಗಿತ್ತು. ಈಗ ಆ ಸವಲತ್ತನ್ನು ನಿಲ್ಲಿಸುವ ಸಾಧ್ಯತೆ ಇದೆ. ಭಾರತದ ಕೋಚ್ ಗೌತಮ್ ಗಂಭೀರ್ ತಂಡದೊಳಗೆ ಇರುವ ಅಶಿಸ್ತನ್ನು ಪರಿಹರಿಸಬೇಕು ಎಂದು ಹೇಳಿದ ನಂತರ ಹಲವು ನಿಯಮ ಬದಲಾವಣೆಗೆ ಬಿಸಿಸಿಐ ಗಂಭೀರವಾಗಿ ಚಿಂತಿಸುತ್ತಿದೆ.

ಟೀಂ ಇಂಡಿಯಾದಲ್ಲಿರುವ ಆಟಗಾರರು ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ ಎಂದು ಗೌತಮ್ ಗಂಭೀರ್ ಅಸಮಾಧಾನಗೊಂಡಿದ್ದಾರೆ ಮತ್ತು ಇದಕ್ಕೆ ಕಡಿವಾಣ ಹಾಕಲು ಕಠಿಣ ನಿಯಮಗಳನ್ನು ತರಲು ನಿರ್ಧರಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಸತತ ಸೋಲಿನ ಸುಳಿಯಲ್ಲಿ ಭಾರತ
ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಬಳಿಕ ಭಾರತ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಸೋತ ಬಳಿಕ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸೋಲು ಬಿಸಿಸಿಐ ಸಿಟ್ಟಿಗೆ ಕಾರಣವಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋಲಿನ ಬಳಿಕ ಬಿಸಿಸಿಐ ಪರಿಶೀಲನಾ ಸಭೆ ನಡೆಸಿದೆ. ಸಭೆಯಲ್ಲಿ ಗೌತಮ್ ಗಂಭೀರ್ ಭಾರತ ತಂಡದ ಡ್ರೆಸ್ಸಿಂಗ್ ರೂಂನಲ್ಲಿರುವ ಅಶಿಸ್ತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ.
2019ರ ಮೊದಲು ಇದ್ದ ನಿಯಮಗಳನ್ನು ಮತ್ತೆ ಜಾರಿ ಮಾಡಲು ಬಿಸಿಸಿಗೆ ಮನವಿ ಮಾಡಿದ್ದಾರೆ. ಈ ನಿಯಮದ ಪ್ರಕಾರ ಟೀಂ ಇಂಡಿಯಾ ವಿದೇಶ ಪ್ರವಾಸದ ವೇಳೆ ಎರಡು ವಾರಗಳು ಮಾತ್ರ ಕುಟುಂಬದ ಸದಸ್ಯರು ಜೊತೆಗಿರಲು ಅವಕಾಶ ಮಾಡಿಕೊಡುತ್ತದೆ. ಈಗಲೂ ಅದೇ ನಿಯಮ ಜಾರಿಗೆ ಗಂಭೀರ್ ಒತ್ತಾಯಿಸಿದ್ದಾರೆ.
ಪಂದ್ಯದ ಶುಲ್ಕ ನೀಡದಂತೆ ಮನವಿ
ಸಭೆಯಲ್ಲಿ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಜೊತೆಗೆ ಭಾರತ ತಂಡದ ಹಿರಿಯ ಆಟಗಾರ ಕೂಡ ಹಾಜರಿದ್ದರು. ಟೀಂ ಇಂಡಿಯಾ ಆಟಗಾರರಿಗೆ ಪಂದ್ಯ ಶುಲ್ಕ ಹಣವನ್ನು ರಕ್ಷಣ ವಿತರಣೆ ಮಾಡದಂತೆ ಬಿಸಿಸಿಐ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಣ ನೀಡುವ ಮೊದಲು ಆಟಗಾರರ ಪ್ರದರ್ಶನವನ್ನು ನೋಡಬೇಕು ಎಂದು ಹೇಳಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಅವಕಾಶ ಕಳೆದುಕೊಂಡಿರುವ ಭಾರತ ತಂಡ ಇದೀಗ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಪ್ರಮುಖವಾಗಿದೆ. ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿ ಮುಗಿದ ಬಳಿಕ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ.












Click it and Unblock the Notifications