ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿದಾಯ.. ಕೈವಾಡದ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು?
ರೋಹಿತ್ ಶರ್ಮಾ ಬಳಿಕ ವಿರಾಟ್ ಕೊಹ್ಲಿ ಸಹ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಣೆ ಮಾಡಿದ್ದರು. ಇವರಿಬ್ಬರ ನಿವೃತ್ತಿ ಘೋಷಣೆ ಹಿಂದೆ ಆಯ್ಕೆದಾರರ ಕೈವಾಡ ಇದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದೀಗ ಇದಕ್ಕೆ ಗೌತಮ್ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಗುಡ್ ಬೈ ಹೇಳಿದ್ದರು. ಬಳಿಕ ಇತ್ತೀಚೆಗಷ್ಟೇ ಐಪಿಎಲ್ ನಡೆಯುವ ಸಮಯದಲ್ಲೇ ಟೆಸ್ಟ್ ಕ್ರಿಕೆಟ್‌ಗೂ ದಿಢೀರ್ ವಿದಾಯ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಅದು ವಿದಾಯ ಪಂದ್ಯವಿಲ್ಲದೆ. ಮೊದಲು ರೋಹಿತ್ ಬಳಿಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದು, ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಹಂಚಿಕೊಂಡಿದ್ದರು.

ಇವರಿಬ್ಬರ ದಿಢೀರ್ ನಿವೃತ್ತಿ ನಡೆ ಸಾಕಷ್ಟು ಅನುಮಾಗಳಿಗೂ ಕಾರಣವಾಗಿದ್ದು, ಇದರ ಹಿಂದೆ ಆಯ್ಕೆದಾರರ ಕೈವಾಡವಿದೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿದ್ದವು. ಇದೀಗ ಇದಕ್ಕೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪವನ್ನು ಭಾರತದ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ತಳ್ಳಿಹಾಕಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಟೆಸ್ಟ್‌ಗೆ ನಿವೃತ್ತಿ ಹೊಂದುವಂತೆ ಯಾರೂ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ಮೇ 24, 2025ರಂದು ಭಾರತ ಟೆಸ್ಟ್ ಕ್ರಕೆಟ್‌ಗೆ ಪತ್ರಿಕಾಗೋಷ್ಠಿ ಮೂಲಕ ಬಿಸಿಸಿಐ ಹೊಸ ನಾಯಕನನ್ನು ಘೋಷಿಸಲಿದೆ. ಇದಕ್ಕೂ ಒಂದು ದಿನ ಮುಂಚೆ ಅಂದರೆ ಇಂದು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ನಿವೃತ್ತಿ ವಿಚಾರವಾಗಿ ತಮ್ಮ ಮೇಲೆ ಬಂದಿದ್ದ ಆರೋಪಗಳಿಗೆ ಗೌತಮ್ ಗಂಭೀರ್ ಸ್ಪಷ್ಟನೆ ನೀಡುವ ಮೂಲಕ ಕಳಂಕ ತೊಳೆದುಕೊಳ್ಳುವ ಕೆಲಸವನ್ನು ಮಾಡಿದ್ದಾರೆ.
ಸಂದರ್ಶನವೊಂದರಲ್ಲಿ ವಿರಾಟ್ ಮತ್ತು ರೋಹಿತ್ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಯಾರನ್ನೂ ನಿವೃತ್ತಿ ಕೇಳುವ ಹಕ್ಕು ಯಾರಿಗೂ ಇಲ್ಲ. ಇದು ಅವರ ವೈಯಕ್ತಿಕ ನಿರ್ಧಾರವಾಗಿದೆ ಎಂದು ಹೇಳಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ಅವರನ್ನು ಬಲವಂತವಾಗಿ ನಿವೃತ್ತಿಗೊಳಿಸಲಾಯಿತು ಎನ್ನುವ ಆರೋಪಗಳನ್ನು ತಳ್ಳಿಹಾಕಿದರು.
ನೀವು ಆಟವನ್ನು ಯಾವಾಗ ಪ್ರಾರಂಭಿಸಬೇಕು ಮತ್ತು ಯಾವಾಗ ಮುಗಿಸಬೇಕು ಎಂಬುದು ವೈಯಕ್ತಿಕ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ಕೋಚ್, ಆಯ್ಕೆದಾರ ಅಥವಾ ಯಾರೇ ಆಗಿರಲಿ, ಯಾವಾಗ ನಿವೃತ್ತಿ ಹೊಂದಬೇಕು ಅಥವಾ ಬೇಡ ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಅದು ಅವರವರ ವೈಯಕ್ತಿಕ ನಿರ್ಧಾರವಾಗಿರುತ್ತದೆ ಎಂದು ಗೌತಮ್ ಗಂಭೀರ್ ಹೇಳಿದರು.
ವಿರಾಟ್ ಕೊಹ್ಲಿ ಅವರನ್ನು ಬಿಸಿಸಿಐಯು ನಿವೃತ್ತಿ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳುವಂತೆ ಮನವೊಸಲಿಸುವ ಪ್ರಯತ್ನ ಮಾಡಿತ್ತು. ಆದರೆ, ನಿವೃತ್ತಿ ಘೋಷಣೆ ಮಾಡಿಯೇ ಬಿಟ್ಟರು. ಆಗ ಅದು ಅವರ ವೈಯಕ್ತಿಕ ನಿರ್ಧಾರವಾಗಿದೆ ಎಂದು ಪರಿಗಣಿಸಲಾಯಿತು ಎಂದು ಗೌತಮ್ ಗಂಭೀರ್ ಅವರು ಹೇಳಿದರು.
ಇನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಿವೃತ್ತಿ ಬಳಿಕ ಇತರ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ ಎಂದು ಗೌತಮ್ ಗಂಭೀರ್ ಅವರು ಅಭಿಪ್ರಾಯಪಟ್ಟರು. ಇನ್ನೂ ಟೆಸ್ಟ್ ಕ್ರಿಕೆಟ್‌ಗೆ ನಾಯಕ ಯಾರೆಂದು ನಾಳೆ ಅಂದರೆ ಮೇ 24ರಂದು ಬಿಸಿಸಿಐ ಪತ್ರಿಗೋಷ್ಠಿ ಮೂಲಕ ಘೋಷಣೆ ಮಾಡಲಿದೆ. ಇದೀಗ ನಾಯಕತ್ವ ಸ್ಥಾನದ ರೇಸ್‌ನಲ್ಲಿ ಶುಭ್ ಗಿಲ್, ಜಸ್‌ಪ್ರೀತ್ ಬುಮ್ರಾ ಅವರು ಮುಂಚೂಣಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೂ, ನಾಳೆ ಬಿಸಿಸಿಐ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.












Click it and Unblock the Notifications