Gautam Gambhir: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟ್ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ
Gautam Gambhir: ಪೆಹಲ್ಗಾಮ್ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ ಕ್ರಿಕೆಟ್ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಐಸಿಸ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಹಾಗಾದ್ರೆ ಈ ಸಂದೇಶದಲ್ಲಿ ಏನಿದೆ ಹಾಗೂ ಗಂಭೀರ್ ಮನವಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪೆಹಲ್ಗಾಮ್ ಮೇಲೆ ಉಗ್ರರ ದಾಳಿ ಬೆನ್ನಲ್ಲೇ ಎಚ್ಚತ್ತ ಭಾರತ ಸರ್ಕಾರವು ದೇಶದ ಪ್ರಮುಖ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಗಳನ್ನು ಕೈಗೊಂಡಿದೆ. ಈ ನಡುವೆಯೇ ಇಂದು (ಏಪ್ರಿಲ್ 24) ಟೀಂ ಇಂಡಿಯಾ ಕ್ರಿಕೆಟ್ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಬಂದಿದೆ.

ಗೌತಮ್ ಗಂಭೀರ್ ಅವರಿಗೆ ಐಸಿಸ್ ಸಂಘಟನೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇನ್ನು ಈ ಸಂಬಂಧ ಗಂಭೀರ್ ಅವರು ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ತಮ್ಮ ಕುಟುಂಬಕ್ಕೆ ಭದ್ರತೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.
ಮಾಹಿತಿ ಪ್ರಕಾರ, ಏಪ್ರಿಲ್ 22ರಂದು ಗೌತಮ್ ಗಂಭೀರ್‌ಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದೆ. Islamic State ಕಾಶ್ಮೀರ ಘಟಕ ಎಂಬ ಹೆಸರಿನಡಿ ಮೇಲ್ ಬಂದಿವೆ. ಒಂದು ಇ ಮೇಲ್ ಮಧ್ಯಾಹ್ನ ಮತ್ತು ಮತ್ತೊಂದು ಸಂಜೆ ಬಂದಿದೆ. ಎರಡೂ ಸಂದೇಶಗಳಲ್ಲೂ ಮೂರು ಪದ ಬಳಕೆ ಮಾಡಲಾಗಿದೆ. ಐ ಕಿಲ್ ಯು ಅಂತಾ ಮೇಲ್ನಲ್ಲಿ ಬರೆಯಲಾಗಿದೆ ಎಂದು ತಿಳಿದುಬಂದಿದೆ.
ಖಡಕ್ ನಿರ್ಧಾರಗಳು: ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದನೆಯನ್ನು ಭಾರತ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹಾಗಾದ್ರೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಂಪುಟ ಸಮಿತಿ ಸಭೆಯಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕೇಂದ್ರ ಗೃಹಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಈ ಘಟನೆ ಬಗ್ಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಂ ಮಿಶ್ರಿ ಸುದ್ದಿಗೋಷ್ಠಿ ನಡೆಸಿ ಏನೆಲ್ಲಾ ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಇಂಡಸ್ ವ್ಯಾಲಿ ಯೋಜನೆ ಅಂದರೆ ಸಿಂಧೂ ನದಿ ನೀರು ಒಪ್ಪಂದ ರದ್ದು ಮಾಡಲು ಭಾರತ ಕಠಿಣ ನಿರ್ಧಾರ ಕೈಗೊಂಡಿದೆ. 1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವು, ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರನ್ನು ಎರಡೂ ದೇಶಗಳ ನಡುವೆ ಹಂಚಿಕೆಯ ಒಪ್ಪಂದ ಆಗಿತ್ತು. ಆದರೆ ಇದೀಗ ಆ ನದಿ ನೀರನ್ನೇ ಬಂದ್ ಮಾಡಿ ಈ ಮೂಲಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಭಾರತ ಸರ್ಕಾರ ಮುಂದಾಗಿದೆ.
ಪಾಕಿಸ್ತಾನವು ಗಡಿ ಆಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ನದಿ ನೀರು ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪಾಕಿಸ್ತಾನ ಗಡಿ ಆಚೆಗಿನ ಭಯೋತ್ಪಾದನೆಯನ್ನ ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದರು.












Click it and Unblock the Notifications