Ind vs Aus: ರೋಹಿತ್ - ಗಂಭೀರ್ ನಡುವೆ ಮನಸ್ತಾಪ?
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೇಲಿದ್ದ ಅಭಿಮಾನಿಗಳ ಸಿಟ್ಟು ಇದೀಗ ಕೋಚ್ ಗಂಭೀರ್ ಕಡೆಗೂ ತಿರುಗಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆದ ಬಳಿಕ ಭಾರತ ಹಲವು ಅವಮಾನಕರ ಸೋಲುಗಳನ್ನು ಕಂಡಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಪಂದ್ಯ ಮುಗಿದ ಬಳಿಕ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು ಊಹಾಪೋಹಗಳಿಗೆ ಕಾರಣವಾಗಿತ್ತು. ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಅನುಮಾನವಿತ್ತು, ಗಂಭೀರ್ ಬಂದಾಗಿನಿಂದ ತಂಡದಲ್ಲಿ ಒಡಕು ಇದ್ದು ಇದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಾಗಿದೆ. ಸಿಡ್ನಿಯಲ್ಲಿ ಶುಕ್ರವಾರ ಕೊನೆಯ ಟೆಸ್ಟ್ ಆರಂಭಾಗಲಿದ್ದು ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ.

ರೋಹಿತ್ ಬದಲಾಗಿ ಬುಮ್ರಾ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದೆಲ್ಲದರ ನಡುವೆ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ನಡುವೆ ಮನಸ್ತಾಪ ಉಂಟಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಗುರುವಾರ ಅಭ್ಯಾಸದ ವೇಳೆ ಇಬ್ಬರೂ ನಡೆದುಕೊಂಡ ರೀತಿಯೇ ಈ ಅನುಮಾನಗಳಿಗೆ ಕಾರಣವಾಗಿದೆ.
ಮಾಧ್ಯಮ ಗೋಷ್ಠಿಗೆ ಬಂದ ಗಂಭೀರ್
ಟೆಸ್ಟ್ ಪಂದ್ಯದ ಆರಂಭಕ್ಕೆ ಮುನ್ನಾದಿನ ನಡೆದ ಮಾಧ್ಯಮಗೋಷ್ಠಿಗೆ ನಾಯಕ ರೋಹಿತ್ ಶರ್ಮಾ ಬದಲಾಗಿ ಕೋಚ್ ಗೌತಮ್ ಗಂಭೀರ್ ಬಂದಿದ್ದು ಅನೇಕ ಪ್ರಶ್ನೆಗಳಿಗೆ ಕಾರಣವಾಯಿತು. ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಾರಾ ಎನ್ನುವ ಪ್ರಶ್ನೆಗೆ ಗಂಭೀರ್ ಉತ್ತರ ನೀಡಲಿಲ್ಲ. ಪಿಚ್ ನೋಡಿ ತಂಡವನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
ಮಾಧ್ಯಮಗೋಷ್ಠಿ ಬಳಿಕ ಗೌತಮ್ ಗಂಭೀರ್ ತಂಡ ಅಭ್ಯಾಸ ಮಾಡುತ್ತಿದ್ದ ಕಡೆ ಹೋದರು. ಅಭ್ಯಾಸದ ವೇಳೆ ಗಂಭೀರ್ ಬುಮ್ರಾ ಬಳಿ ಚರ್ಚೆ ಮಾಡುತ್ತಿದ್ದರು. ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಯಾವುದೇ ಚರ್ಚೆ ನಡೆಸದೇ ಇರುವುದು ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಅನುಮಾನ ಹೆಚ್ಚಲು ಕಾರಣವಾಗಿದೆ.
ಸತತ ಸೋಲುಗಳ ಬಳಿಕ ಗೌತಮ್ ಗಂಭೀರ್ ಆಟಗಾರರ ವಿಚಾರದಲ್ಲಿ ಕಠಿಣವಾಗಿದ್ದಾರೆ. ಉತ್ತಮ ಪ್ರದರ್ಶನ ನೀಡದೇ ಇರುವ ಆಟಗಾರರನ್ನು ಹೊರಗಿಟ್ಟು ಬೇರೆ ಆಟಗಾರರಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ರೋಹಿತ್, ಕೊಹ್ಲಿ ವಿಚಾರದಲ್ಲೂ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸೂಚನೆ ಕೊಟ್ಟಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆಗೆ ರಿಷಬ್ ಪಂತ್ ಅವರ ಅಸ್ಥಿರ ಪ್ರದರ್ಶನ ಕೂಡ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಪಂತ್ ಬದಲಾಗಿ ಧ್ರುವ್ ಜುರೇಲ್ ಅವಕಾಶ ಪಡೆದರೂ ಅಚ್ಚರಿ ಪಡಬೇಕಿಲ್ಲ. ಆಕಾಶ್ ದೀಪ್ ಗಾಯಗೊಂಡಿದ್ದು ಅವರ ಬದಲಾಗಿ ಧ್ರುವ್ ಜುರೆಲ್ ಅಥವಾ ಪ್ರಸಿದ್ಧ್ ಕೃಷ್ಣ ಅವಕಾಶ ಪಡೆಯಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications