Gautam Gambhir: ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ: ಜಯ್ ಶಾ
ಕನ್ನಡಿಗ ರಾಹುಲ್ ದ್ರಾವಿಡ್ ಅವರಿಂದ ತೆರವಾದ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚಿಗೆ ಅಮೆರಿಕ-ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರ ಅವಧಿ ಮುಗಿದಿದ್ದು, ಗೌತಮ್ ಟೀಮ್ ಇಂಡಿಯಾದ ಗುರುವಿನ ಸ್ಥಾನವನ್ನು ತುಂಬಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ತಾಣದಲ್ಲಿ ತಿಳಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್, ಟಿ20 ವಿಶ್ವಕಪ್ 2024 ಸೆಮಿಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್ ತಲುಪಿದ ಸಾಧನೆ ಮಾಡಿದೆ. ದ್ರಾವಿಡ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ 2007ರ ಬಳಿಕ, ಎರಡನೇ ಬಾರಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಚಾಂಪಿಯನ್ ತಂಡದ ಕೋಚ್ ಆಗಿ ದ್ರಾವಿಡ್ ನಿರ್ಗಮಿಸಿದ್ದಾರೆ. ಇವರ ಸ್ಥಾನವನ್ನು ಟೀಮ್ ಇಂಡಿಯಾ ಮಾಜಿ ಓಪನರ್ ಗೌತಮ್ ಗಂಭೀರ್ ತುಂಬಲಿದ್ದಾರೆ.

ಗೌತಮ್ ಗಂಭೀರ್ ಐಪಿಎಲ್ ನಲ್ಲಿ ಸೊಗಸಾದ ಕೌಶಲ್ಯಗಳನ್ನು ಮೆರೆದಿದ್ದರು. ಅಲ್ಲದೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ ಪ್ರಶಸ್ತಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಲೀಗ್ ಚಾಂಪಿಯನ್ ಕೋಚ್, ಟೀಮ್ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ.
ಗಂಭೀರ್ ಮೂರು ಸ್ವರೂಪಕ್ಕೂ ಗುರು
ಗಂಭೀರ್ ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ಟೀಮ್ ಇಂಡಿಯಾದ ಕೋಚ್ ಆಗಿ ನೇಮಿಸಲಾಗಿದೆ. ಇದೇ ವೇಳೆ ಪ್ರತ್ಯೇಕ ಕೋಚ್‌ಗಳನ್ನು ನೇಮಿಸುವುದಿಲ್ಲ ಎಂದು ಜಯ್ ಶಾ ಈಗಾಗಲೇ ಹೇಳಿದ್ದಾರೆ. ಗಂಭೀರ್ ಅವರ ಅಧಿಕಾರಾವಧಿ 3.5 ವರ್ಷಗಳ ಕಾಲ ಇರಲಿದೆ. ರಾಹುಲ್ ದ್ರಾವಿಡ್ ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿಸಿಐ ಮೇನಲ್ಲಿ ಅರ್ಜಿಯನ್ನು ಆಹ್ವಾನಿಸಿತ್ತು. ಈ ಸ್ಥಾನಕ್ಕೆ ಹಲವು ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಭಾರತದ ಇಬ್ಬರನ್ನು ಸಂದರ್ಶನಕ್ಕೆ ಕರೆಯಲಾಗಿತ್ತು. ಇದರಲ್ಲಿ ಗೌತಮ್ ಗಂಭೀರ್ ಒಬ್ಬರಾದರೆ, ಇನ್ನೊಬ್ಬರು ಭಾರತ ಮಹಿಳಾ ತಂಡದ ಮಾಜಿ ಕೋಚ್ ಡಬ್ಲ್ಯುವಿ ರಾಮನ್.

ಗಂಭೀರ್ ಆದರ್ಶ ವ್ಯಕ್ತಿ
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗಂಭೀರ್ ಹೆಸರನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅವರನ್ನು ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಸನ್ನಿವೇಶವನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಕಷ್ಟಗಳನ್ನು ಸಹಿಸಿಕೊಂಡು ವಿವಿಧ ಪಾತ್ರಗಳಲ್ಲಿ ಮಿಂಚಿರುವ ಗೌತಮ್ ಅವರು ಭಾರತೀಯ ಕ್ರಿಕೆಟ್‌ನ್ನು ಮುನ್ನಡೆಸಲು ಆದರ್ಶ ವ್ಯಕ್ತಿ ಎಂಬ ವಿಶ್ವಾಸವಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
ಗೌತಮ್ ಗಂಭೀರ್ ಕೋಚ್ ಅನುಭವ
ಗಂಭೀರ್ ಐಪಿಎಲ್‌ನಲ್ಲಿ ಕೆಕೆಆರ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ತಂಡದ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ನಾಯಕತ್ವದಲ್ಲಿ ಎರಡು ಬಾರಿ ಕೆಕೆಆರ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.. ಅಲ್ಲದೆ, ಅವರು ಎರಡು ಋತುಗಳಲ್ಲಿ (2022, 2023) ಲಕ್ನೋವನ್ನು ಪ್ಲೇಆಫ್‌ಗೆ ಕೊಂಡೊಯ್ಯುವಲ್ಲಿ ಸಫಲರಾಗಿದ್ದರು. 2024 ರಲ್ಲಿ, ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ನ ಮಾರ್ಗದರ್ಶಕರಾಗಿದ್ದಾಗ, ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಗಂಭೀರ್ ಅವರ ಅಧಿಕಾರಾವಧಿಯು ಜುಲೈ 2024 ರಿಂದ ಡಿಸೆಂಬರ್ 31, 2027 ರವರೆಗೆ ಇರಲಿದೆ. ಇವರ ಕೋಚಿಂಗ್ ಅಡಿಯಲ್ಲಿ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ 2025, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್ 2025 ಮತ್ತು 2027, ಟಿ20 ವಿಶ್ವಕಪ್ 2026 ಮತ್ತು ODI ವಿಶ್ವಕಪ್ 2027 ಅನ್ನು ಆಡಲಿದೆ. ಅಂದರೆ ಮೂರು ಸೀಮಿತ ಓವರ್‌ಗಳ ವಿಶ್ವಕಪ್ ಮತ್ತು ಎರಡು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವ ಸವಾಲು ಗಂಭೀರ್‌ಗೆ ಇದೆ.
ಗಂಭೀರ್ ಸವಾಲು
ಜುಲೈನಲ್ಲಿ ಶ್ರೀಲಂಕಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯೊಂದಿಗೆ ಗಂಭೀರ್ ಅಧಿಕಾರಾವಧಿ ಆರಂಭವಾಗಲಿದೆ. ಇದರ ನಂತರ ಟೀಂ ಇಂಡಿಯಾ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಸರಣಿಗಳನ್ನು ಆಡಲಿದೆ. ವರ್ಷದ ಕೊನೆಯಲ್ಲಿ, ಭಾರತವು ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಬೆಳೆಸಲಿದೆ. ಮತ್ತು ಐದು ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ. ನಂತರ 2025 ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಹೊರತುಪಡಿಸಿ, ಆ ವರ್ಷದ ಮಧ್ಯದಲ್ಲಿ ಇಂಗ್ಲೆಂಡ್ ಪ್ರವಾಸವನ್ನು ತಂಡ ಕೈ ಗೊಳ್ಳಲಿದೆ.
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ 2026 ರಲ್ಲಿ T20 ವಿಶ್ವಕಪ್ ಅನ್ನು ಆಯೋಜಿಸಲಿವೆ ಮತ್ತು 2027 ODI ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. ಕೋಚ್ ಗಂಭೀರ್ ಅವರು ತಮ್ಮ ವೃತ್ತಿಜೀವನದ ಅಂತಿಮ ಹಂತದಲ್ಲಿರುವ ಭಾರತದ ಇಬ್ಬರು ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (35 ವರ್ಷ) ಮತ್ತು ಪ್ರಸ್ತುತ ನಾಯಕ ರೋಹಿತ್ ಶರ್ಮಾ (37 ವರ್ಷ) ಅವರ ವಿಶ್ವಾಸವನ್ನು ಪಡೆದು ತಂಡವನ್ನು ಮುನ್ನಡೆಸಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications