Glenn Maxwell: ರೋಹಿತ್ ದಾಖಲೆಯ ಸಮಕ್ಕೆ ನಿಂತ ಮಾಜಿ ಆರ್‌ಸಿಬಿ ಪ್ಲೇಯರ್
ಐಪಿಎಲ್‌ನಲ್ಲಿ ರನ್ ಕಲೆ ಹಾಕುವಲ್ಲಿ ಪರದಾಡಿ, ಕೊನೆಗೆ ಟೂರ್ನಿಯಿಂದ ಹೊರ ನಡೆದಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಇವರು ತಮ್ಮ ಧಮಾಕೆದಾರ್ ಪ್ರದರ್ಶನದಿಂದ ಅಭಿಮಾನಿಗಳ ಮನ ಗೆದ್ದರು. ವಾಶಿಂಗ್ಟನ್ ಫ್ರೀಡಂ ತಂಡದ ನಾಯಕತ್ವ ವಹಿಸಿಕೊಂಡಿರುವ ಮ್ಯಾಕ್ಸ್‌ವೆಲ್ ಧಮಾಕೆದಾರ್ ಬ್ಯಾಟಿಂಗ್ ನಡೆಸಿ, ರೋಹಿತ್ ದಾಖಲೆಯನ್ನು ಸರಿ ಗಟ್ಟಿದರು.
ಮಂಗಳವಾರ ಆಕ್ಲೆಂಡ್‌ನಲ್ಲಿ ನಡೆದ ಎಂಎಲ್‌ಸಿ ಕ್ರಿಕೆಟ್ ಲೀಗ್‌ನ 8ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವಾಶಿಂಗ್ಟನ್ ಫ್ರೀಡಂ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಂದ 208 ರನ್ ಕಲೆ ಹಾಕಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ಲಾಸ್ ಎಂಜಿಲಸ್ ನೈಟ್ ರೈಡರ್ಸ್ ತಂಡ 16.3 ಓವರ್‌ಗಳಲ್ಲಿ 95 ರನ್ ಬಾರಿಸಿ ಆಲೌಟ್ ಆಯಿತು. ಈ ಮೂಲಕ ವಾಶಿಂಗ್ಟನ್ ತಂಡ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿತು.

ಮೊದಲು ಬ್ಯಾಟ್ ಮಾಡಿದ ವಾಶಿಂಗ್ಟನ್ ತಂಡದ ಪರ ಆರಂಭಿಕ ಮಿಚೆಲ್ ಓನ್ 32 ರನ್ ಬಾರಿಸಿದರು. ಇವರನ್ನು ಬಿಟ್ಟರೆ ಉಳಿದ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ಗ್ಲೇನ್ ಮ್ಯಾಕ್ಸ್‌ವೆಲ್ 49 ಎಸೆತಗಳಲ್ಲಿ 2 ಬೌಂಡರಿ, 13 ಸಿಕ್ಸರ್ ಸಹಾಯದಿಂದ ಅಜೇಯ 106 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಮ್ಯಾಕ್ಸ್‌ವೆಲ್ ಈ ಶತಕದ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ಮುಟ್ಟಿದರು.
ರೋಹಿತ್ ದಾಖಲೆ ಸಮ
ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮ್ಯಾಕ್ಸ್‌ವೆಲ್, ರೋಹಿತ್ ಶರ್ಮಾ ದಾಖಲೆಯನ್ನು ಸರಿ ಗಟ್ಟಿದರು. ರೋಹಿತ್ ಶರ್ಮಾ ಒಟ್ಟಾರೆ 463 ಟಿ20 ಪಂದ್ಯಗಳಲ್ಲಿ 8 ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ. ಈ ದಾಖಲೆಯನ್ನು ಈಗ ಗ್ಲೇನ್ ಮ್ಯಾಕ್ಸ್‌ವೆಲ್ ಸರಿಗಟ್ಟಿದ್ದಾರೆ. ಗ್ಲೇನ್ ಮ್ಯಾಕ್ಸ್‌ವೆಲ್ 468 ಟಿ20 ಪಂದ್ಯಗಳಲ್ಲಿ 8 ಶತಕ ಬಾರಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.
Freedom fam, are you entertained? 🤩#FreedomExpress #MLC2025 | @Gmaxi_32 pic.twitter.com/z0yBJVtOpf
— Washington Freedom (@WSHFreedom) June 18, 2025
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್ ನ ಯುನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಇವರು 463 ಪಂದ್ಯಗಳಲ್ಲಿ 22 ಶತಕ ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ಸ್
ಕ್ರಿಸ್ ಗೇಲ್, 463 ಪಂದ್ಯ, 22 ಶತಕ
ಬಾಬರ್ ಅಜಮ್, 320 ಪಂದ್ಯ, 11 ಶತಕ
ರಿಲೀ ರೊಸ್ಸೌ, 378 ಪಂದ್ಯ, 9 ಶತಕ
ವಿರಾಟ್ ಕೊಹ್ಲಿ, 414 ಪಂದ್ಯ, 9 ಶತಕ
ಮೈಕೆಲ್ ಕ್ಲಿಂಗರ್, 206 ಪಂದ್ಯ, 8 ಶತಕ
ಭರ್ಜರಿ ಜಯ
ಸವಾಲಿನ ಗುರಿಯನ್ನು ಹಿಂಬಾಲಿಸಿದ ಲಾಸ್ ಎಂಜಲೀಸ್ ನೈಟ್ ರೈಡರ್ಸ್ ಪರ ಯಾವೊಬ್ಬ ಬ್ಯಾಟರ್ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಲಾಸ್ ಎಂಜಲೀಸ್ ಪರ ಸೈಫ್ ಬದರ್ (32), ನಾಯಕ ಜೇಸನ್ ಹೋಲ್ಡರ್ (23) ಕೊಂಚ ಎದುರಾಳಿ ಬೌಲರ್‌ಗಳು ಕಾಡಿದರು. ಆದರೆ ತಂಡಕ್ಕೆ ಗೆಲುವಿನ ಮಾಲೆ ತೊಡಿಸಲು ಸಾಧ್ಯವಾಗಲಿಲ್ಲ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications