Glenn Maxwell: ಡಕೌಟ್ ಆಗುವುದರಲ್ಲಿ ದಾಖಲೆ ಬರೆದ ಮ್ಯಾಕ್ಸ್‌ವೆಲ್; ಸಿಕ್ಕಾಪಟ್ಟೆ ಟ್ರೋಲ್!
ಆರ್ ಸಿಬಿ ಮಾಜಿ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿ ಮತ್ತೆ ಪಂಜಾಬ್ ಕಿಂಗ್ಸ್‌ಗೆ ಆಡಲು ಸಜ್ಜಾಗಿದ್ದಾರೆ. ಆಡಿದ ಮೊದಲನೇ ಪಂದ್ಯದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಮೊದಲ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಆಡಿದ್ದನ್ನು ನೋಡಿ ಆರ್ ಸಿಬಿ ಅಭಿಮಾನಿಗಳು ಇವ್ರನ್ನು ಬಿಟ್ಟಿದ್ದೇ ಒಳ್ಳೆಯದಾಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಆಡಿದ ಮೊದಲನೇ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟ್ ಆಗುವ ಮೂಲಕ ಕೆಟ್ಟ ದಾಖಲೆ ಬರೆದಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಹೆಚ್ಚು ಬಾರಿ ಡಕೌಟ್ ಆದ ಕೆಟ್ಟ ದಾಖಲೆ ಮಾಡಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಬರೋಬ್ಬರಿ 19 ಬಾರಿ ಡಕೌಟ್ ಆಗಿದ್ದು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ 18 ಬಾರಿ ಡಕೌಟ್ ಆಗಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ 18 ಬಾರಿ ಡಕೌಟ್ ಆಗಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಪಿಯುಶ್ ಚಾವ್ಲಾ ಮತ್ತು ಸುನಿಲ್ ನರೈನ್ ತಲಾ 16 ಬಾರಿ ಔಟಾಗಿದ್ದು 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್
ಗ್ಲೆನ್ ಮ್ಯಾಕ್ಸ್‌ವೆಲ್ ಸ್ಫೋಟಕ ಬ್ಯಾಟರ್ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ, ಆದರೆ ಅವರ ನಿರಂತರವಾಗಿ ಪ್ರದರ್ಶನ ಕೊಡುವುದಿಲ್ಲ ಎನ್ನುವುದೇ ದೊಡ್ಡ ಸಮಸ್ಯೆ. 2023ರ ಬಳಿಕ ಐಪಿಎಲ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕೆಟ್ಟ ದಾಖಲೆ ಹೊಂದಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಡಕೌಟ್ ಆಗುವ ರೇಸ್‌ನಲ್ಲಿ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.
ಬೃಹತ್ ಮೊತ್ತ ಕಲೆಹಾಕಿದ ಪಂಜಾಬ್
ಗ್ಲೆನ್ ಮ್ಯಾಕ್ಸ್‌ವೆಲ್ ಸೊನ್ನೆಗೆ ಔಟ್ ಆದರೂ ಪಂಜಾಬ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು.
ನಾಯಕ ಶ್ರೇಯಸ್ ಅಯ್ಯರ್ 42 ಎಸೆತಗಳಲ್ಲಿ 5 ಬೌಂಡರಿ 9 ಸಿಕ್ಸರ್ ಸಹಿತ ಅಜೇಯ 97 ರನ್ ಗಳಿಸಿದರು. ಪ್ರಿಯಾಂಶ್ ಆರ್ಯ 23 ಎಸೆತಗಳಲ್ಲಿ 47 ರನ್ ಗಳಿಸಿದರು. ಶಶಾಂಕ್ ಸಿಂಗ್ 16 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿದರು.












Click it and Unblock the Notifications