Glenn Maxwell: ಐಪಿಎಲ್‌ನಿಂದಲೇ ಹೊರಬಿದ್ದ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ 2025ರ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದ ಅವರು ಈ ವರ್ಷ ಕಳಪೆ ಪ್ರದರ್ಶನದಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ ಅವರು ಗಾಯದ ಸಮಸ್ಯೆಯಿಂದ ಪಂದ್ಯಾವಳಿಯಿಂದಲೇ ಹೊರಗುಳಿಯಲಿದ್ದಾರೆ.

ಕಳಪೆ ಫಾರ್ಮ್ ಹೊಂದಿದ್ದರೂ ಅವರಿಗೆ ತಂಡದಲ್ಲಿ ಸತತವಾಗಿ ಅವಕಾಶ ಸಿಗುತ್ತಿತ್ತು. ಬುಧವಾರ ಚೆನ್ನೈನಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಅವರು ಅವಕಾಶ ಪಡೆಯುವ ಸಾಧ್ಯತೆ ಇತ್ತು, ಆದರೆ ಅವರು ಗಾಯದ ಸಮಸ್ಯೆಯಿಂದಾಗಿ ಆಡುತ್ತಿಲ್ಲ ಎಂದು ನಾಯಕ ಶ್ರೇಯಸ್ ಅಯ್ಯರ್ ಹೇಳಿದರು. ಸದ್ಯ ಗ್ಲೆನ್‌ ಮ್ಯಾಕ್ಸ್‌ವೆಲ್ ಪಂದ್ಯಾವಳಿಯಿಂದಲೇ ಹೊರಬಿದ್ದಿರುವುದಾಗಿ ಫ್ರಾಂಚೈಸಿ ದೃಢಪಡಿಸಿದೆ. ಆದರೆ ಗ್ಲೆನ್ ಮ್ಯಾಕ್ಸ್‌ವೆಲ್‌ ಬದಲಿ ಆಟಗಾರನನ್ನು ಇನ್ನೂ ಘೋಷಿಸಿಲ್ಲ.

glenn maxwell ruled out of ipl 2025 with fracture

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಸಮಯದಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, "ಮ್ಯಾಕ್ಸ್‌ವೆಲ್ ಅವರ ಬೆರಳು ಮುರಿದಿರುವುದು ದುರದೃಷ್ಟಕರ. ಇಲ್ಲಿಯವರೆಗೆ ಬದಲಿ ಆಟಗಾರನನ್ನು ನಿರ್ಧರಿಸಿಲ್ಲ" ಎಂದು ದೃಢಪಡಿಸಿದರು.

ಕಳಪೆ ಫಾರ್ಮ್‌ನಲ್ಲಿದ್ದ ಮ್ಯಾಕ್ಸ್‌ವೆಲ್

ಚೆಪಾಕ್‌ನಲ್ಲಿ ನಡೆದ ಪಂಜಾಬ್ ಕಿಂಗ್ಸ್‌ನ ತರಬೇತಿ ಅವಧಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಗೈರುಹಾಜರಾಗಿದ್ದರು. ಪಂದ್ಯಕ್ಕೆ ಮುಂಚಿನ ಅಭ್ಯಾಸದ ಸಮಯದಲ್ಲಿಯೂ ಅವರು ಗೈರುಹಾಜರಾಗಿದ್ದರು, ಆದರೆ ಅವರ ಅನುಪಸ್ಥಿತಿಯನ್ನು ದೃಢಪಡಿಸಿದರು.

ಗ್ಲೆನ್ ಮ್ಯಾಕ್ಸ್‌ವೆಲ್ ಈ ಐಪಿಎಲ್‌ನಲ್ಲಿ ಫಾರ್ಮ್‌ ಕಂಡುಕೊಳ್ಳಲು ಹೆಣಗಾಡುತ್ತಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಆಡಿರುವ 8 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಅವರು ಆಡಿದ್ದಾರೆ. ಮ್ಯಾಕ್ಸ್‌ವೆಲ್ 6 ಇನ್ನಿಂಗ್ಸ್‌ಗಳಲ್ಲಿ 8 ಸರಾಸರಿ ಮತ್ತು 97.95 ಸ್ಟ್ರೈಕ್‌ರೇಟ್‌ನಲ್ಲಿ ಕೇವಲ 48 ರನ್‌ಗಳನ್ನು ಗಳಿಸಿದ್ದಾರೆ.

ಬ್ಯಾಟಿಂಗ್‌ನಲ್ಲಿ ವಿಫಲವಾದರೂ ಬೌಲಿಂಗ್‌ನಲ್ಲಿ ತಕ್ಕಮಟ್ಟಿಗೆ ಪ್ರದರ್ಶನ ನೀಡಿದ್ದರು. ಕೆಕೆಆರ್ ವಿರುದ್ಧ 112 ರನ್‌ಗಳನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಮ್ಯಾಕ್ಸ್‌ವೆಲ್ ಕೂಡ ಪ್ರಮುಖ ಕೊಡುಗೆ ನೀಡಿದ್ದರು. 6 ಇನ್ನಿಂಗ್ಸ್‌ಗಳಲ್ಲಿ ಅವರು 4 ವಿಕೆಟ್ ಪಡೆದಿದ್ದಾರೆ.

ಪಂಜಾಬ್ ಕಿಂಗ್ಸ್ ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಪ್ಲೇಆಫ್‌ ತಲುಪುವ ವಿಶ್ವಾಸದಲ್ಲಿದೆ. ಆಡಿರುವ 10 ಪಂದ್ಯಗಳಲ್ಲಿ 6 ಪಂದ್ಯ ಗೆದ್ದಿದ್ದು 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಕೆಕೆಆರ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಕಾರಣ ಒಂದು ಅಂಕ ಸಿಕ್ಕಿದ್ದು 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದೆ. ಉಳಿದ 4 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಪ್ಲೇಆಫ್‌ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+