IPL 2023: ಪಂಜಾಬ್ ವಿರುದ್ಧ ಗೆದ್ದರೂ ಗುಜರಾತ್ ಟೈಟನ್ಸ್ ನಾಯಕನಿಗೆ ಬಿತ್ತು 12 ಲಕ್ಷ ರೂ. ದಂಡ!

ಸದ್ಯ ನಡೆಯುತ್ತಿರುವ 2023ರ ಐಪಿಎಲ್‌ನ 16ನೇ ಋತುವಿನಲ್ಲಿ ಕೆಲವು ಆಟಗಾರರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಇದಕ್ಕಾಗಿ ದಂಡ ತೆರುತ್ತಿದ್ದಾರೆ. ಅತಿ ದೊಡ್ಡ ಕ್ರಿಕೆಟ್ ಪಂದ್ಯಾವಳಿಯಲ್ಲಿ ನ್ಯಾಯಯುತ ಕ್ರೀಡಾ ಮನೋಭಾವವನ್ನು ಉಳಿಸಿಕೊಳ್ಳಲು ಕೆಲವು ನಿಯಮಗಳು ಜಾರಿಯಲ್ಲಿವೆ.

ಇದೀಗ ಗುರುವಾರ, ಏಪ್ರಿಲ್ 13ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​​​ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮತ್ತೊಂದು ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

GT vs PBKS IPL 2023: Hardik Pandya Fined Rs 12 Lakh For Slow Over Rate Against Punjab Kings Match

ಐಪಿಎಲ್ ಪಂದ್ಯಗಳನ್ನು ಮೂರು ಗಂಟೆ 20 ನಿಮಿಷಗಳಲ್ಲಿ ಮುಗಿಸುವ ಗುರಿಯನ್ನು ಹೊಂದಿದೆ. ಆದರೆ ನಿಧಾನಗತಿಯ ಬೌಲಿಂಗ್‌ನಿಂದಾಗಿ ಕೆಲವೊಮ್ಮೆ ಪಂದ್ಯಗಳು ನಾಲ್ಕು ಗಂಟೆಯ ಅವಧಿಯನ್ನು ದಾಟುವುದು ಸಾಬೀತಾಗಿದೆ. ಹೀಗಾಗಿ ದಂಡದ ಮೂಲಕ ತಂಡಗಳ ನಾಯಕರಿಗೆ ಎಚ್ಚರಿಕೆ ನೀಡಲಾಗುತ್ತದೆ.

ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ, ನಿಗದಿತ ಸಮಯದಲ್ಲಿ ಓವರ್ ಮುಗಿಸಲು ವಿಫಲವಾಯಿತು. ಆದ್ದರಿಂದ ನಿಧಾನಗತಿ ಓವರ್-ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

GT vs PBKS IPL 2023: Hardik Pandya Fined Rs 12 Lakh For Slow Over Rate Against Punjab Kings Match

"ಇದು ಐಪಿಎಲ್‌ನ ನೀತಿ ಸಂಹಿತೆಯಡಿಯಲ್ಲಿ ಕನಿಷ್ಠ ಮಿತಿಮೀರಿದ ಅಪರಾಧಗಳಿಗೆ ಸಂಬಂಧಿಸಿದಂತೆ, ಈ ಋತುವಿನಲ್ಲಿ ಗುಜರಾತ್ ಟೈಟನ್ಸ್ ತಂಡದ ಮೊದಲ ಅಪರಾಧವಾಗಿರುವುದರಿಂದ, ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ," ಎಂದು ಶುಕ್ರವಾರದಂದು ಐಪಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಹಾರ್ದಿಕ್ ಪಾಂಡ್ಯ ಅವರು 2023ರ ಐಪಿಎಲ್ ಟೂರ್ನಿಯಲ್ಲಿ ನಿಧಾನಗತಿ ಓವರ್-ರೇಟ್ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ದಂಡ ಕಟ್ಟಿದ ಮೂರನೇ ನಾಯಕನಾಗಿದ್ದಾರೆ. ಇದಕ್ಕೂ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ನಿಧಾನಗತಿ ಬೌಲಿಂಗ್‌ಗೆ ದಂಡ ಕಟ್ಟಿದ ಮತ್ತಿಬ್ಬರು ನಾಯಕರು.

GT vs PBKS IPL 2023: Hardik Pandya Fined Rs 12 Lakh For Slow Over Rate Against Punjab Kings Match

ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಗುಜರಾತ್ ಟೈಟನ್ಸ್

ಗುರುವಾರ ಮೊಹಾಲಿಯಲ್ಲಿ ನಡೆದ ಐಪಿಎಲ್ 2023ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 154 ರನ್‌ಗಳ ಗುರಿ ಬೆನ್ನಟ್ಟಿ, ಒಂದು ಎಸೆತ ಬಾಕಿ ಇರುವಾಗಲೇ ಆರು ವಿಕೆಟ್‌ಗಳ ಗೆಲುವಿನೊಂದಿಗೆ ಹಾರ್ದಿಕ್ ಪಾಂಡ್ಯ ಬಳಗ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿತು.

19ನೇ ಓವರ್‌ನಲ್ಲಿ ಪಂಜಾಬ್ ವೇಗಿ ಅರ್ಶ್‌ದೀಪ್ ಸಿಂಗ್ ಕೇವಲ 6 ರನ್‌ಗಳನ್ನು ಬಿಟ್ಟುಕೊಟ್ಟರು. ಆಗ ಗುಜರಾತ್ ಗೆಲುವಿಗೆ ಅಂತಿಮ ಓವರ್‌ನಲ್ಲಿ 7 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ 49 ಎಸೆತಗಳಲ್ಲಿ 67 ರನ್ ಬಾರಿಸಿದ್ದ ಶುಭ್ಮನ್ ಗಿಲ್ ರನ್-ಔಟ್ ಜೀವದಾನ ಪಡೆದರೂ, ನಂತರದ ಎಸೆತದಲ್ಲಿ ಸ್ಯಾಮ್ ಕರ್ರಾನ್ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಒತ್ತಡ ಹೇರಿದರು.

ನಂತರ ಕೊನೆಯ ಎರಡು ಎಸೆತಗಳಲ್ಲಿ 4 ರನ್‌ಗಳು ಅಗತ್ಯವಿದ್ದಾಗ, ಗುಜರಾತ್ ಟೈಟನ್ಸ್ ಆಲ್‌ರೌಂಡರ್ ರಾಹುಲ್ ತೆವಾಟಿಯಾ ರಿವರ್ಸ್ ಶಾಟ್ ಮೂಲಕ ಬೌಂಡರಿ ಗಳಿಸುವ ಮೂಲಕ ಜಯ ತಂದುಕೊಟ್ಟರು.

ಇದಕ್ಕೂ ಮೊದಲು ಗುಜರಾತ್ ಟೈಟನ್ಸ್ ತಂಡದ ಬಿಗಿ ಬೌಲಿಂಗ್ ದಾಳಿ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವನ್ನು 153 ರನ್‌ಗಳಿಗೆ ಕಟ್ಟಿಹಾಕಿದ್ದರು. ವೇಗಿ ಮೋಹಿತ್ ಶರ್ಮಾ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದಿದ್ದರು.

ಇನ್ನು ಗುಜರಾತ್ ಟೈಟನ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಭಾನುವಾರ, ಏಪ್ರಿಲ್ 16ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+