IPL 2026: ಆರ್‌ಸಿಬಿ ವಿರುದ್ಧ ಫೈನಲ್ ಆಡುವ ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು

RR Vs GT: ಮುಲ್ಲನ್‌ಪುರದಲ್ಲಿ ಶುಕ್ರವಾರ (ಮೇ 29) ನಡೆದ ಐಪಿಎಲ್ 2026ರ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭ್‌ಮನ್ ಗಿಲ್ ಅವರ ಆಕರ್ಷಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ತಂಡವು ಮೇ 31ರಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಟಾಸ್‌ ಗೆದ್ದ ರಾಜಸ್ಥಾನ್ ರಾಯಲ್ಸ್‌ ತಂಡದ ನಾಯಕ ರಿಯಾನ್ ಪರಾಗ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆಯೇ ಮೊದಲು ಬ್ಯಾಟ್‌ ಬೀಸಿದ ಆರ್‌ಆರ್ ತಂಡವು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 214 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆದರೆ ಬಳಿಕ ಬ್ಯಾಟಿಂಗ್‌ಗಿಳಿದ ಗುಜರಾತ್ ಟೈಟಾನ್ಸ್‌ 18.4 ಓವರ್‌ಗಳಲ್ಲಿ 219 ರನ್‌ ಗಳಿಸಿ ಭರ್ಜರಿ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಶುಭ್‌ಮನ್ ಗಿಲ್ ಸ್ಫೋಟಕ ಶತಕ

GT vs RR Qualifier 2 Shubman Gill Century Powers Gujarat Titans Into IPL 2026 Final Know details

ಆರ್‌ಆರ್ ನೀಡಿದ 215 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್ ತಂಡಕ್ಕೆ ನಾಯಕ ಶುಭಮನ್ ಗಿಲ್ ಆಸರೆಯಾದರು. ಅವರು ಕೇವಲ 53 ಎಸೆತಗಳಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 104 ರನ್ ಸಿಡಿಸಿದರು. ಸಾಯಿ ಸುದರ್ಶನ್ ಅವರು 32 ಎಸೆತಗಳಲ್ಲಿ 58 ರನ್ ಗಳಿಸಿ ಗಿಲ್ ಅವರಿಗೆ ಉತ್ತಮ ಸಾಥ್ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 167 ರನ್‌ಗಳ ಬೃಹತ್ ಜೊತೆಯಾಟವಾಡಿತು. ಉಳಿಂತೆ ವಾಷಿಂಗ್ಟನ್‌ ಸುಂದರ್ 16(9), ಜೋಸ್ ಬಟ್ಲರ್ ಅಜೇಯ 9(9), ರಾಹುಲ್‌ ತೆವಾಟಿಯಾ ಅಜೇಯ 17 ರನ್‌ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ವೈಭವ್ ಆಕರ್ಷಕ ಅರ್ಧಶತಕ ವ್ಯರ್ಥ

ಇದಕ್ಕೂ ಮೊದಲು ಬ್ಯಾಟ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 214 ರನ್ ಪೇರಿಸಿತ್ತು. ತಂಡದ ಪರ ವೈಭವ್ ಸೂರ್ಯವಂಶಿ ಅವರು ಕೇವಲ 47 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್‌ಗಳೊಂದಿಗೆ 96 ರನ್ ಸಿಡಿಸಿ ತಂಡ ಬೃಹತ್ ಮೊತ್ತ ಕಲೆಹಾಕಲು ಪ್ರಮುಖ ಪಾತ್ರವಹಿಸಿದರು. ಉಳಿದಂತೆ ರವೀಂದ್ರ ಜಡೇಜಾ 45(35), ಡೊನೊವನ್ ಫೆರೆರಾ ಅಜೇಯ 38(11) ರನ್‌ಗಳ ಕೊಡುಗೆ ನೀಡಿದರು. ಅದರಲ್ಲೂ ಈ ಪಂದ್ಯದಲ್ಲಿ ಗಮನ ಸೆಳೆದಿದ್ದು ಅಂದ್ರೆ ವೈಭವ್ ಅವರು ತಂಡಕ್ಕಾಗಿ ಜವಾಬ್ದಾರಿಯುತ ಆಟ ಆಡಿದ್ದು. ಆದರೆ ಅವರ ಈ ಆಟ ವ್ಯರ್ಥವಾಗಿದ್ದು, ಆರ್‌ಸಿಬಿ ವಿರುದ್ಧ ಆಡುವ ಫೈನಲ್‌ ಕನಸು ನುಚ್ಚುನೂರಾಗಿದೆ.

ದಾಖಲೆ ಬರೆದ ವೈಭವ್ ಸೂರ್ಯವಂಶಿ

ಎದುರಿಸಿದ ಎಸೆತಗಳ ಲೆಕ್ಕಾಚಾರದಲ್ಲಿ ಐಪಿಎಲ್‌ನಲ್ಲಿ ಅತಿ ವೇಗವಾಗಿ 1,000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ಬರೆದರು. ಕೇವಲ 440 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಆಂಡ್ರೆ ರಸೆಲ್ (545 ಎಸೆತ) ಅವರ ದಾಖಲೆಯನ್ನು ಮುರಿದರು. ಅಲ್ಲದೆ, ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್‌ನ ಪವರ್‌ಪ್ಲೇನಲ್ಲಿ 500 ರನ್ ಚಚ್ಚಿದ ಮೊದಲ ಬ್ಯಾಟರ್ ಎನಿಸಿಕೊಂಡರು.

ಗುಜರಾತ್ ಟೈಟಾನ್ಸ್ Vs ಆರ್‌ಸಿಬಿ

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಬೃಹತ್ ಮೊತ್ತ ಕಲೆಹಾಕಿದರೂ ಸಹ ಶುಭ್‌ಮನ್ ಗಿಲ್‌ ಸ್ಫೋಟಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿತು. ಮೇ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ಗಿಲ್‌ ನಾಯಕತ್ವದ ಜಿಟಿ ತಂಡವು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಆಡಲಿದೆ. ಎರಡೂ ತಂಡಗಳು ಸಹ ಬಲಿಷ್ಠವಾಗಿದ್ದು, ಯಾವ ತಂಡ ಚಾಂಪಿಯನ್‌ ಆಗಲಿದೆ ಎನ್ನುವುದೇ ಕುತೂಹಲದ ವಿಚಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+