ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಗುಜರಾತ್ ಟೈಟಾನ್ಸ್‌ ಬೌಲಿಂಗ್ ಆಯ್ಕೆ

RCB Vs GT IPL 2026: ಧರ್ಮಶಾಲಾದಲ್ಲಿ ಮಂಗಳವಾರ (ಮೇ 26) ನಡೆಯುತ್ತಿರುವ ಐಪಿಎಲ್‌ 2026ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಗುಜರಾತ್ ಟೈಟಾನ್ಸ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಧರ್ಮಶಾಲಾದಲ್ಲಿ ಮಳೆಯ ಆತಂಕದ ನಡುವೆಯೂ ಸಕಾಲಕ್ಕೆ ಟಾಸ್ ಪ್ರಕ್ರಿಯೆ ನಡೆದಿದೆ. ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್‌ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಮೋಡ ಕವಿದ ವಾತಾವರಣ ಮತ್ತು ಪಿಚ್‌ನಲ್ಲಿರುವ ತೇವಾಂಶದ ಲಾಭ ಪಡೆಯಲು ಜಿಟಿ ಈ ತೀರ್ಮಾನ ಕೈಗೊಂಡಿದೆ.

Gujarat Titans Opt To Bowl Against RCB In Indian Premier League 2026 Qualifier 1 At Dharamsala

ಆರ್‌ಸಿಬಿ ಬ್ಯಾಟರ್‌ಗಳಿಗೆ ಸವಾಲಾದ ರಬಾಡ, ಸಿರಾಜ್

ಮೊದಲು ಬ್ಯಾಟಿಂಗ್ ಮಾಡುವ ಸವಾಲು ಪಡೆದಿರುವ ಆರ್‌ಸಿಬಿ ಪರವಾಗಿ ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಅವರು ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನೂ ಧರ್ಮಶಾಲಾದ ಪಿಚ್ ವೇಗಿಗಳಿಗೆ ಪೂರಕವಾಗಿದ್ದು, ಆರಂಭದಲ್ಲಿ ಚೆಂಡು ಸ್ವಿಂಗ್ ಆಗುವ ಸಾಧ್ಯತೆಯಿದೆ. ಜಿಟಿ ತಂಡದ ಕಗಿಸೊ ರಬಾಡ ಮತ್ತು ಮೊಹಮ್ಮದ್ ಸಿರಾಜ್ ಆರ್‌ಸಿಬಿ ಬ್ಯಾಟರ್‌ಗಳಿಗೆ ದೊಡ್ಡ ಸವಾಲಾಗಿದ್ದಾರೆ.

ಪಂದ್ಯ ರದ್ದಾದ್ರೆ ಮುಂದಿನ ನಿರ್ಧಾರವೇನು?

ಮಳೆಯ ಮುನ್ಸೂಚನೆ ಇರುವುದರಿಂದ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ರದ್ದಾದರೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ಸೋತ ತಂಡ ಗುಜರಾತ್ ಟೈಟಾನ್ಸ್‌ಗೆ ಫೈನಲ್‌ ಪ್ರವೇಶ ಮಾಡಲು ಮೊತ್ತೊಂದುಅವಕಾಶ ಇರಲಿದೆ.

ಚೇಸಿಂಗ್ ತಂಡ ಮೇಲುಗೈ

ಈ ಕ್ರೀಡಾಂಗಣದಲ್ಲಿ ಈ ವರ್ಷ ನಡೆದ ಎರಡೂ ರಾತ್ರಿ ಪಂದ್ಯಗಳಲ್ಲಿ ಗುರಿ ಬೆನ್ನಟ್ಟಿದ ತಂಡಗಳೇ ಜಯಗಳಿಸಿವೆ. ವಿಶೇಷ ಅಂದ್ರೆ ಈ ಸೀಸನ್‌ನಲ್ಲಿ ಈ ಎರಡು ತಂಡಗಳ ನಡುವೆ ನಡೆದ ಹಿಂದಿನ ಎರಡೂ ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ಮಾಡಿದ ತಂಡವೇ ಗೆಲುವು ಸಾಧಿಸಿತ್ತು.

ತಂಡದ ಮೊದಲ ಆಯ್ಕೆಯ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಗಾಯದ ಕಾರಣ ಇನ್ನೂ ತಂಡಕ್ಕೆ ಮರಳಿಲ್ಲ. ಅವರ ಅನುಪಸ್ಥಿತಿಯಲ್ಲಿ ವೆಂಕಟೇಶ್ ಅಯ್ಯರ್ ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಕಾರಣ ಆರ್‌ಸಿಬಿ ತಂಡವು ರೊಮಾರಿಯೋ ಶೆಫರ್ಡ್ ಬದಲಿಗೆ ಜೇಕಬ್ ಡಫಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಒಂದು ವೇಳೆ ಬ್ಯಾಟಿಂಗ್‌ನಲ್ಲಿ ಅಗತ್ಯವಿದ್ದರೆ ಶೆಫರ್ಡ್ ಅವರನ್ನು ಬಳಸಿಕೊಳ್ಳುವ ಅಥವಾ ಪರಿಸ್ಥಿತಿಗೆ ತಕ್ಕಂತೆ ಲೆಗ್‌ ಸ್ಪಿನ್ನರ್ ಸುಯಶ್ ಶರ್ಮಾ ಅವರನ್ನು ಕಣಕ್ಕಿಳಿಸುವ ಆಯ್ಕೆ ಆರ್‌ಸಿಬಿ ಮುಂದಿದೆ.

ವೇಗಿಗಳಿಗೆ ಹೆಚ್ಚು ಅನುಕೂಲ

ಏಪ್ರಿಲ್ 9ರ ನಂತರ ಮೊದಲ ಬಾರಿಗೆ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಜಿಟಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪ್ರಸಿದ್ಧ್ ಕೃಷ್ಣ ಅವರನ್ನು ಆಡುವ 11ರ ಬಳಗದಲ್ಲಿ ಉಳಿಸಿಕೊಳ್ಳಲಾಗಿದೆ. ಇದು ಧರ್ಮಶಾಲಾದ ಪಿಚ್ ಸ್ಪಿನ್ನರ್‌ಗಳಿಗಿಂತ ವೇಗಿಗಳಿಗೆ ಹೆಚ್ಚು ಸಹಕಾರಿ ಎಂಬುದನ್ನು ಸಾಬೀತುಪಡಿಸಿದೆ.

ಧರ್ಮಶಾಲಾದ ಪಿಚ್ ಚೇಸಿಂಗ್ ಮಾಡುವ ತಂಡಕ್ಕೆ ಪೂರಕವಾಗಿವೆ. ಆದರೆ ಆರ್‌ಸಿಬಿ ತಂಡವು ಡಫಿ ಅವರ ಸೇರ್ಪಡೆಯೊಂದಿಗೆ ಬೌಲಿಂಗ್ ಬಲಪಡಿಸಿಕೊಂಡು ಮೊದಲು ಬ್ಯಾಟಿಂಗ್ ಮಾಡುವ ಸವಾಲನ್ನು ಹೇಗೆ ಎದುರಿಸಲಿದೆ ಎಂಬುದೇ ಕುತೂಹಲಕಾರಿ ಸಂಗತಿಯಾಗಿದೆ.

ಆರ್‌ಸಿಬಿ ಹಾಗೂ ಜಿಟಿ ಪ್ಲೇಯಿಂಗ್ 11

ಆರ್‌ಸಿಬಿ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಜೇಕಬ್ ಡಫಿ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ರಸಿಖ್ ದಾರ್ ಸಲಾಮ್.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್‌ 11: ಶುಭ್‌ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ನಿಶಾಂತ್ ಸಿಂಧು, ರಶೀದ್ ಖಾನ್, ಕುಲ್ವಂತ್ ಖೆಜ್ರೋಲಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+