Maharaja Trophy: ಸ್ಮರಣ್‌ ರವಿಚಂದ್ರನ್ ಭರ್ಜರಿ ಶತಕ; ಮೈಸೂರು ವಾರಿಯರ್ಸ್ ವಿರುದ್ಧ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್

ಮಹಾರಾಜ ಟ್ರೋಫಿ 2024ರ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಸ್ಮರಣ್‌ ರವಿಚಂದ್ರನ್ ಅಜೇಯ ಶತಕ ಗಳಿಸುವ ಮೂಲಕ ಗುಲ್ಬರ್ಗ ತಂಡಕ್ಕೆ ಗೆಲುವು ತಂದುಕೊಟ್ಟರು. ಮೈಸೂರು ವಾರಿಯರ್ಸ್ ನೀಡಿದ 197 ರನ್‌ಗಳ ಗುರಿಯನ್ನು ಬೆನ್ನತ್ತಿದ ಗುಲ್ಬರ್ಗ ಮಿಸ್ಟಿಕ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ವಾರಿಯರ್ಸ್ 20 ಓವರ್ ಗಳಲ್ಲಿ 196 ರನ್ ಕಲೆಹಾಕಿತು. ನಾಯಕ ಕರುಣ್ ನಾಯರ್ 35 ಎಸೆತಗಳಲ್ಲಿ 66 ರನ್ ಗಳಿಸಿದರು. ಸಮಿತ್ ದ್ರಾವಿಡ್ 24 ಎಸೆತಗಳಲ್ಲಿ 33 ರನ್ ಗಳಿಸಿದರು. ಜಗದೀಶ್ ಸುಚಿತ್ 13 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆಹಾಕಲು ನೆರವಾದರು.

Maharaja Trophy

ಗುಲ್ಬರ್ಗ ಮಿಸ್ಟಿಕ್ಸ್ ಪರ ಮೊನಿಷ್ ರೆಡ್ಡಿ, ಪೃಥ್ವಿರಾಜ್ ಶೆಖಾವತ್ ಮತ್ತು ಯಶೋವರ್ಧನ್ ಪರಂತಪ್ ತಲಾ 2 ವಿಕೆಟ್ ಪಡೆದರು. ವಿಜಯ್‌ಕುಮಾರ್ ವೈಶಾಖ್ ಮತ್ತು ಶರಣ್ ಗೌಡ್ ತಲಾ ಒಂದು ವಿಕೆಟ್ ಪಡೆದರು.

ಸಮರನ್ ಭರ್ಜರಿ ಶತಕ

197 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಲವನಿತ್ ಸಿಸೋಡಿಯಾ 4 ರನ್ ಗಳಿಸಿ ಔಟಾದರೆ, ನಾಯಕ ದೇವದತ್ ಪಡಿಕ್ಕಲ್ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅನೀಶ್ ಕೆವಿ 24 ರನ್ ಗಳಿಸಿ ಔಟಾದರು. ಸಂಕಷ್ಟದಲ್ಲಿ ಸಿಲುಕಿದ್ದ ತಂಡಕ್ಕೆ ಸ್ಮರಣ್‌ ರವಿಚಂದ್ರನ್ ಆಸರೆಯಾದರು.

60 ಎಸೆತಗಳಲ್ಲಿ 11 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ ಅಜೇಯ 104 ರನ್ ಗಳಿಸುವ ಮೂಲಕ ಸ್ಮರಣ್‌ ರವಿಚಂದ್ರನ್ ತಂಡವನ್ನು ಗೆಲುವಿನ ದಡ ಸೇರಿಸಿದರು. ವಹಿದ್ ಫೈಜನ್ 11 ಎಸೆತಗಳಲ್ಲಿ 18 ರನ್ ಗಳಿಸಿದರೆ, ಪ್ರವೀಣ್ ದುಬೆ 21 ಎಸೆತಗಳಲ್ಲಿ 37 ರನ್ ಗಳಿಸಿದರು.

ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಗುಲ್ಬರ್ಗ ಮಿಸ್ಟಿಕ್ಸ್‌ಗೆ ಈ ಆವೃತ್ತಿಯಲ್ಲಿ ಇದು ಮೊದಲ ಗೆಲುವಾಗಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಪ್ಲೇಆಫ್ ತಲುಪಲು ಮುಂದಿನ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+