ಬ್ಲ್ಯೂ ಜೆರ್ಸಿ ಹಾಕಿಕೊಂಡರೆ ಅಪ್‌ಡೇಟ್‌ ವರ್ಷನ್‌: ಟಿ20 ವಿಶ್ವಕಪ್‌ನಲ್ಲಿ ಲಯಕ್ಕೆ ಮರಳಿದ ಆಲ್‌ರೌಂಡರ್‌

ಟೀಮ್ ಇಂಡಿಯಾ ಸದ್ಯ ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಸಂಘಟಿತ ಆಟದ ನೆರವಿನಿಂದ ಲೀಗ್‌ ಹಂತದ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಭಾರತ, ಸೂಪರ್‌ 8ಕ್ಕೆ ಅರ್ಹತೆ ಪಡೆದಿದೆ. ಡ್ರಾಪ್ ಒನ್ ಪಿಚ್‌ಗಳಲ್ಲಿ ಆಡಿದ ಅನುಭವವೇ ಇಲ್ಲದ ರೋಹಿತ್ ಪಡೆ, ಸ್ಥಿರ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾ ಪ್ರದರ್ಶನ ನೋಡಿದರೆ, ಕಪ್‌ ಗೆಲ್ಲುವ ಹಾಟ್ ಫೆವರೀಟ್ ತಂಡ ಎನಿಸುತ್ತಿದೆ.

ಅಮೆರಿಕಾ ಪಿಚ್‌ಗಳಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ಸೊಗಸಾದ ಪ್ರದರ್ಶನ ನೀಡಿದ್ದಾರೆ. ವಿದೇಶಿ ವಾತಾವರಣದ ಲಾಭ ಪಡೆದ ಪೇಸರ್ಸ್‌ ವಿಕೆಟ್‌ ಬೇಟೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಸಖತ್ ಲೈನ್ ಹಾಗೂ ಲೆಂಥ್‌ನಲ್ಲಿ ಬೌಲಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಸ್ಟಾರ್ಸ್‌ ಅಬ್ಬರಿಸುತ್ತಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಬೌಲರ್ಸ್‌ ವಿಕೆಟ್‌ ಬೇಟೆ ನಡೆಸಿ ತಂಡ ಗೆಲುವಿನಲ್ಲಿ ಮಿಂಚುತ್ತಿದ್ದಾರೆ.

Hardik Pandya finds his rhythm to shake off the blues

ತಂಡದ ಗೆಲುವಿನಲ್ಲಿ ಮಿಂಚುತ್ತಿರುವ ಪೇಸರ್ಸ್‌

ಅಮೆರಿಕ ಅಂಗಳದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಗಳು ಧಮಾಕೆದಾರ ಪ್ರದರ್ಶನ ನೀಡಿದ್ದಾರೆ. ಐರ್ಲೆಂಡ್ ಹಾಗೂ ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಜಸ್ಪ್ರಿತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರೆ, ಯುಎಸ್‌ಎ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್‌ ಅಮೋಘ ಪ್ರದರ್ಶನ ನೀಡಿ ಪ್ಲೇಯರ್ ಆಫ್‌ ದಿ ಮ್ಯಾಚ್‌ ಪ್ರಶಸ್ತಿ ಪಡೆದಿದ್ದಾರೆ. ಇದು ಟೀಮ್ ಇಂಡಿಯಾದ ಪ್ರದರ್ಶನಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನು ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡದೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗಿ ಅಭಿಮಾನಿಗಳ ಚಿಂತೆ ಹೆಚ್ಚಿಸಿದ್ದ ಆಲ್‌ರೌಂಡರ್‌ ಒಬ್ಬ ಟಿ20 ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ. ಸದ್ಯ ಟೀಮ್ ಇಂಡಿಯಾ ಪರ ಗರಿಷ್ಠ ವಿಕೆಟ್‌ ಪಡೆದ ಸಾಧಕರ ಪಟ್ಟಿಯಲ್ಲಿ ಇವರಿಗೆ ಮೊದಲ ಸ್ಥಾನ. ಈ ಪ್ಲೇಯರ್ ಬೌಲಿಂಗ್ ಮಾಡ್ತಾರಾ ಇಲ್ಲವಾ ಎಂಬ ಪ್ರಶ್ನೆಗಳೇ ಹೆಚ್ಚಾಗಿತ್ತು. ಏಕೆಂದರೆ ಗಾಯದಿಂದ ಚೇತರಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.

Hardik Pandya finds his rhythm to shake off the blues

ತಂಡಕ್ಕೆ ನೆರವಾದ ಆಲ್‌ರೌಂಡರ್

ಬಿಸಿಸಿಐ ಹಾಗೂ ರೋಹಿತ್ ಶರ್ಮಾ ಅವರ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಈ ಪ್ಲೇಯರ್ ಸಫಲರಾಗಿದ್ದಾರೆ. ಅವರೇ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ. ಇವರ ಬೌಲಿಂಗ್ ಎದುರಿಸುವಲ್ಲಿ ಎದುರಾಳಿ ಆಟಗಾರರು ಮಂಕಾಗಿದ್ದಾರೆ. ಐಪಿಎಲ್‌ನಲ್ಲಿ ಬೌಲಿಂಗ್ ಮಾಡುವಾಗ ಹೆಚ್ಚಾಗಿ ಕಾಣದ ಹಾರ್ದಿಕ್‌, ಟಿ20 ವಿಶ್ವಕಪ್‌ನಲ್ಲಿ ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬ ಪ್ರಶ್ನೆಗಳು ಇದ್ದವು. ಈ ಎಲ್ಲ ಪ್ರಶ್ನೆಗಳಿಗೆ ಅಂಗಳದಲ್ಲೇ ಹಾರ್ದಿಕ್ ಉತ್ತರ ನೀಡಿದ್ದಾರೆ.

ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಏಳು ವಿಕೆಟ್‌ ಪಡೆದು ಅಬ್ಬರಿಸಿದ್ದಾರೆ. ಅರ್ಷದೀಪ್‌ ಸಿಂಗ್ ಸಹ ಇಷ್ಟೇ ವಿಕೆಟ್‌ ಪಡೆದು ಮಿಂಚಿದ್ದಾರೆ. ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಐದು ವಿಕೆಟ್‌ ಪಡೆದು ಅಬ್ಬರಿಸಿದ್ದಾರೆ. ಟೀಮ್ ಇಂಡಿಯಾ ಗೆಲುವಿನಲ್ಲಿ ಬೌಲರ್‌ಗಳು ಕಾಣಿಕೆ ನೀಡುತ್ತಿರುವುದು ತಂಡಕ್ಕೆ ಸಮಾಧಾನ ತಂದಿದೆ.

Hardik Pandya finds his rhythm to shake off the blues

ಟೀಮ್ ಇಂಡಿಯಾ ಉಪನಾಯಕ ಮುಂದಿನ ಪಂದ್ಯಗಳಲ್ಲೂ ಇದೇ ರೀತಿಯ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿ ಎಂಬುದೇ ಅಭಿಮಾನಿಗಳ ಆಶಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+