Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ

Hardik Pandya: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರ್ದಿಕ್‌ ಪಾಂಡ್ಯ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತರೆ. ಹಾಗೆಯೇ ಇದೀಗ ಮುಂಬೈನ ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತನ್ನು ಉಳಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದೀಗ ಐಪಿಎಲ್‌ 2026 ಹಬ್ಬ ಆರಂಭವಾಗಿದೆ. ಈ ನಡುವೆಯೇ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಮತ್ತು ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮುಂಬೈನ ವಾಂಖೆಡೆ ಕ್ರೀಡಾಂಗಣದ ಮೈದಾನದ ಸಿಬ್ಬಂದಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Hardik Pandya Fulfills Promise to Mumbai Wankhede Ground Staff Ahead of IPL 2026 Know details

ಮೈದಾನದ ಸಿಬ್ಬಂದಿಗೆ ಸಹಾಯ ಮಾಡುವುದಾಗಿ ಭರವಸೆ

2026ರ ಟಿ20 ವಿಶ್ವಕಪ್‌ಗೆ ಮುನ್ನ ಹಾರ್ದಿಕ್ ಪಾಂಡ್ಯ ಅವರು ವಾಂಖೆಡೆ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದರು. ಈ ಸಮಯದಲ್ಲಿ ಮೈದಾನದ ಸಿಬ್ಬಂದಿ ಮಧ್ಯರಾತ್ರಿಯವರೆಗೂ ಹಾರ್ದಿಕ್‌ಗೆ ನೆರವಾಗುತ್ತಿದ್ದರು. ಈ ಸಹಾಯಕ್ಕಾಗಿ ತಾನು ಅವರಿಗೆ ಏನಾದರೂ ಕೊಡುಗೆ ನೀಡುವುದಾಗಿ ಹಾರ್ದಿಕ್ ಆ ಸಂದರ್ಭದಲ್ಲಿ ಭರವಸೆ ನೀಡಿದ್ದರು.

ಕೊಟ್ಟ ಮಾತು ಉಳಿಸಿಕೊಂಡ ಪಾಂಡ್ಯ

ಈಗ ವಿಶ್ವಕಪ್ ಮುಗಿದು ಐಪಿಎಲ್ 2026 ಪ್ರಾರಂಭವಾಗುವ ಮೊದಲು ಹಾರ್ದಿಕ್ ವಾಂಖೆಡೆಗೆ ಭೇಟಿ ನೀಡಿ, ಅಲ್ಲಿನ ಸುಮಾರು 10-11 ಮೈದಾನದ ಸಿಬ್ಬಂದಿಯನ್ನು ಭೇಟಿ ಮಾಡಿ ಉಡುಗೊರೆಗಳನ್ನು ನೀಡಿದ್ದಾರೆ. ಹಾರ್ದಿಕ್ ಅವರು ಪ್ರತಿಯೊಬ್ಬ ಸಿಬ್ಬಂದಿಗೆ ತಲಾ 10 ಲಕ್ಷ ರೂಪಾಯಿಗಳ ಚೆಕ್ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಮೊತ್ತದ ಬಗ್ಗೆ ಹಾರ್ದಿಕ್‌ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಇನ್ನೂ ಹಾರ್ದಿಕ್ ಪಾಂಡ್ಯ ಅವರು ಮಹಿಕಾ ಶರ್ಮಾ ಅವರ ಬಗ್ಗೆ ಮಾತನಾಡಿದ್ದಾರೆ. 'ಮಹಿಕಾ' ಬಂದಾಗಿನಿಂದ ಜೀವನದಲ್ಲಿ ಒಳ್ಳೆಯದ್ದೇ ಆಗುತ್ತಿದೆ ಎಂದು ಅವರು ಭಾವನಾತ್ಮಕವಾಗಿ ಹೇಳಿದ್ದಾರೆ. ಅಲ್ಲದೆ, ಇನ್ನು 10 ವರ್ಷಗಳ ಕಾಲ ಕ್ರಿಕೆಟ್ ಆಡುವ ಮತ್ತು 10 ಐಸಿಸಿ ಟ್ರೋಫಿಗಳನ್ನು ಗೆಲ್ಲುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+