Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ
Hardik Pandya: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತರೆ. ಹಾಗೆಯೇ ಇದೀಗ ಮುಂಬೈನ ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತನ್ನು ಉಳಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇದೀಗ ಐಪಿಎಲ್ 2026 ಹಬ್ಬ ಆರಂಭವಾಗಿದೆ. ಈ ನಡುವೆಯೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಮತ್ತು ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಮುಂಬೈನ ವಾಂಖೆಡೆ ಕ್ರೀಡಾಂಗಣದ ಮೈದಾನದ ಸಿಬ್ಬಂದಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮೈದಾನದ ಸಿಬ್ಬಂದಿಗೆ ಸಹಾಯ ಮಾಡುವುದಾಗಿ ಭರವಸೆ
2026ರ ಟಿ20 ವಿಶ್ವಕಪ್ಗೆ ಮುನ್ನ ಹಾರ್ದಿಕ್ ಪಾಂಡ್ಯ ಅವರು ವಾಂಖೆಡೆ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದರು. ಈ ಸಮಯದಲ್ಲಿ ಮೈದಾನದ ಸಿಬ್ಬಂದಿ ಮಧ್ಯರಾತ್ರಿಯವರೆಗೂ ಹಾರ್ದಿಕ್ಗೆ ನೆರವಾಗುತ್ತಿದ್ದರು. ಈ ಸಹಾಯಕ್ಕಾಗಿ ತಾನು ಅವರಿಗೆ ಏನಾದರೂ ಕೊಡುಗೆ ನೀಡುವುದಾಗಿ ಹಾರ್ದಿಕ್ ಆ ಸಂದರ್ಭದಲ್ಲಿ ಭರವಸೆ ನೀಡಿದ್ದರು.
ಕೊಟ್ಟ ಮಾತು ಉಳಿಸಿಕೊಂಡ ಪಾಂಡ್ಯ
ಈಗ ವಿಶ್ವಕಪ್ ಮುಗಿದು ಐಪಿಎಲ್ 2026 ಪ್ರಾರಂಭವಾಗುವ ಮೊದಲು ಹಾರ್ದಿಕ್ ವಾಂಖೆಡೆಗೆ ಭೇಟಿ ನೀಡಿ, ಅಲ್ಲಿನ ಸುಮಾರು 10-11 ಮೈದಾನದ ಸಿಬ್ಬಂದಿಯನ್ನು ಭೇಟಿ ಮಾಡಿ ಉಡುಗೊರೆಗಳನ್ನು ನೀಡಿದ್ದಾರೆ. ಹಾರ್ದಿಕ್ ಅವರು ಪ್ರತಿಯೊಬ್ಬ ಸಿಬ್ಬಂದಿಗೆ ತಲಾ 10 ಲಕ್ಷ ರೂಪಾಯಿಗಳ ಚೆಕ್ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಮೊತ್ತದ ಬಗ್ಗೆ ಹಾರ್ದಿಕ್ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಇನ್ನೂ ಹಾರ್ದಿಕ್ ಪಾಂಡ್ಯ ಅವರು ಮಹಿಕಾ ಶರ್ಮಾ ಅವರ ಬಗ್ಗೆ ಮಾತನಾಡಿದ್ದಾರೆ. 'ಮಹಿಕಾ' ಬಂದಾಗಿನಿಂದ ಜೀವನದಲ್ಲಿ ಒಳ್ಳೆಯದ್ದೇ ಆಗುತ್ತಿದೆ ಎಂದು ಅವರು ಭಾವನಾತ್ಮಕವಾಗಿ ಹೇಳಿದ್ದಾರೆ. ಅಲ್ಲದೆ, ಇನ್ನು 10 ವರ್ಷಗಳ ಕಾಲ ಕ್ರಿಕೆಟ್ ಆಡುವ ಮತ್ತು 10 ಐಸಿಸಿ ಟ್ರೋಫಿಗಳನ್ನು ಗೆಲ್ಲುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
-
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications