Hardik Pandya: ಐಪಿಎಲ್‌ 2026ರ ನಡುವೆಯೇ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ ಎರಡನೇ ಮದುವೆ ವದಂತಿ

Hardik Pandya marriage rumors: ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಹಾಗೂ ಐಪಿಎಲ್‌ನ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಐಪಿಎಲ್‌ 2026ರ ನಡುವೆಯೇ ಅವರ ಎರಡನೇ ವಿವಾಹದ ವದಂತಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ.

ಐಪಿಎಲ್ 2026 ನಡೆಯುತ್ತಿರುವ ಸಮಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಮಾಹಿಕಾ ಶರ್ಮಾ ಅವರ ವಿವಾಹದ ಕುರಿತಾದ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿವೆ. ಈ ಕುರಿತು ಅನೇಕರು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ರೆಡ್ಡಿಟ್‌ನಲ್ಲಿ ಪ್ರತಿಕ್ರಿಯೆಗಳು, ಮೀಮ್‌ಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ.

Hardik Pandya Marriage Rumors Is Mumbai Indians Captain Set to Marry Mahieka Sharma on May 22

ಹಾರ್ದಿಕ್ ಪಾಂಡ್ಯ ಎರಡನೇ ವಿವಾಹದ ವದಂತಿ

ಹಾರ್ದಿಕ್ ಪಾಂಡ್ಯ ಅವರು ಮೇ 22ರಂದು ಉದಯಪುರದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಮಾಹಿಕಾ ಅವರನ್ನು ವಿವಾಹವಾಗಲಿದ್ದಾರೆ ಎಂಬ ಪೋಸ್ಟ್‌ಗಳು ವೈರಲ್ ಆದ ನಂತರ ಈ ಚರ್ಚೆ ಶುರುವಾಯಿತು. ಆದರೆ ಹಾರ್ದಿಕ್ ಪಾಂಡ್ಯ ಆಗಲು, ಮಾಹಿಕಾ ಶರ್ಮಾ ಅವರಿಂದ ಆಗಲಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಅಧಿಕೃತ ಮಾಹಿತಿ ಇಲ್ಲದಿದ್ದರೂ ಜೋರಾಯ್ತು ಚರ್ಚೆ

ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲದಿದ್ದರೂ ಸಹ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಹಾರ್ದಿಕ್ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಹಂತಕ್ಕೆ ಕಾಲಿಡುತ್ತಿರುವುದು ತಂಬಾ ಸಂತಸ ವಿಷಯವಾಗಿದೆ ಎಂದು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2026ರ ಅಭಿಯಾನದಲ್ಲಿ ತೊಡಗಿರುವಾಗ ಇಂತಹ ವದಂತಿಗಳು ಹರಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ

ಕೆಲವರು "ಹಾರ್ದಿಕ್ ಪಾಂಡ್ಯ ಅವರು ಮೈದಾನದಲ್ಲಿರಲಿ ಅಥವಾ ಮೈದಾನದ ಹೊರಗಿರಲಿ ಅವರು ಒಂದಲ್ಲ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ," ಎಂದು ಹೇಳಿದ್ದಾರೆ. ಇನ್ನು ಕೆಲವರು "ಅವರ ವೈಯಕ್ತಿಕ ಜೀವನವು ಅವರ ಕ್ರಿಕೆಟ್ ಬದುಕನ್ನು ಮರೆಮಾಚಬಾರದು," ಎಂದು ಹೇಳಿದ್ದಾರೆ.

ಯಾವುದೇ ಅಧಿಕೃತ ಸ್ಪಷ್ಟನೆ ಇಲ್ಲ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಬಹುದಿನಗಳ ಗೆಳತಿ ಮಹಿಕಾ ಶರ್ಮಾ ಅವರನ್ನು ಇದೇ ಮೇ 22ರಂದು ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನ ಪಡೆದ ನಂತರ ಹಾರ್ದಿಕ್ ಮತ್ತು ಮಹಿಕಾ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಮುಂಬೈ ಇಂಡಿಯನ್ಸ್ ಪಂದ್ಯಗಳ ವೇಳೆ ಮಹಿಕಾ ಕ್ರೀಡಾಂಗಣದಲ್ಲಿ ಕಾಣಿಸಿಕೊಳ್ಳುತ್ತಿದ್ದುದು ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಆದರೆ ಈ ಮದುವೆಯ ವಿಚಾರವಾಗಿ ಹಾರ್ದಿಕ್ ಅಥವಾ ಅವರ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಸದ್ಯ ಮುಂಬೈ ಇಂಡಿಯನ್ಸ್‌ ತಂಡದಿಂದ ಹೊರಗುಳಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರ್ದಿಕ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಈ ಬಾರಿ ಕೇವಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಆಟಗಾರನಾಗಿಯೂ ಅವರು ಮಿಂಚಲು ವಿಫಲರಾಗಿದ್ದಾರೆ. ಆಡಿದ 8 ಪಂದ್ಯಗಳಲ್ಲಿ ಕೇವಲ 107 ರನ್ ಮತ್ತು 4 ವಿಕೆಟ್ ಪಡೆಯುವ ಮೂಲಕ ನಿರಾಶೆ ಮೂಡಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ಸದ್ಯ ಹಬ್ಬುತ್ತಿರುವ ವಿವಾಹದ ಸುದ್ದಿ ಕೇವಲ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಸೀಮಿತವಾಗಿದೆಯೇ ಅಥವಾ ನಿಜವಾಗಿಯೂ ಅವರು ಮೇ 22ರಂದು ಹಸೆಮಣೆ ಏರುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+