Hardik Pandya: ಆರ್ಸಿಬಿಗೆ ಹಾರ್ದಿಕ್ ಪಾಂಡ್ಯ ನಾಯಕ?
ಐಪಿಎಲ್ 2025ರ ಮುನ್ನ ಮೆಗಾ ಹರಾಜು ನಡೆಯಲಿದ್ದು ಎಲ್ಲಾ ಫ್ರಾಂಚೈಸಿಗಳು ಬಲಿಷ್ಠ ತಂಡವನ್ನು ಕಟ್ಟುವ ಲೆಕ್ಕಾಚಾರದಲ್ಲಿವೆ. ಹಲವು ಫ್ರಾಂಚೈಸಿಗಳು 8 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿವೆ. ಆದರೆ ಬಿಸಿಸಿಐ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆ ಇದೆ. ಇನ್ನು ಪ್ರಮುಖ ಆಟಗಾರರು ಈ ಬಾರಿ ಮೆಗಾ ಹರಾಜಿಗೆ ಮುನ್ನ ತಮ್ಮ ತಂಡವನ್ನು ತೊರೆಯಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ತೊರೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈಗ ಹಾರ್ದಿಕ್ ಪಾಂಡ್ಯ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.

2024 ರ ಐಪಿಎಲ್‌ಗೆ ಮುನ್ನ ಗುಜರಾತ್ ಟೈಟಾನ್ಸ್ ತೊರೆದು ಮುಂಬೈ ಇಂಡಿಯನ್ಸ್ ಸೇರಿಕೊಂಡಿದ್ದ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದರು. ಇದು ರೋಹಿತ್ ಶರ್ಮಾ ಅವರ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ತಂಡದ ಪ್ರದರ್ಶನದ ಮೇಲೂ ಇದು ಪರಿಣಾಮ ಬೀರಿತ್ತು.
ರೋಹಿತ್ ಶರ್ಮಾಗೆ ನಾಯಕತ್ವ
ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ ಆಗಿತ್ತು. ಮುಂದಿನ ಐಪಿಎಲ್‌ನಲ್ಲಿ ಮತ್ತೆ ರೋಹಿತ್ ಶರ್ಮಾ ಅವರಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಕೊಡಲಾಗುತ್ತದೆ ಎಂದು ಹೇಳಲಾಗಿದ್ದು, ಒಂದು ವೇಳೆ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಕೊಟ್ಟರೆ ಹಾರ್ದಿಕ್ ಪಾಂಡ್ಯ ತಂಡವನ್ನು ತೊರೆಯುವುದು ಖಚಿತವಾಗಲಿದೆ.
ಭವಿಷ್ಯದ ನಾಯಕನಿಗಾಗಿ ಹುಡುಕುತ್ತಿರುವ ಆರ್ ಸಿಬಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ಉತ್ತಮ ಆಯ್ಕೆಯಾಗಲಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಆರ್ ಸಿಬಿ ಕೂಡ ಪಾಂಡ್ಯ ಬರಲು ಒಪ್ಪಿಕೊಂಡರೆ ದೊಡ್ಡ ಮೊತ್ತ ಕೊಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಆರ್ ಸಿಬಿ ಫ್ರಾಂಚೈಸಿಯಾಗಲಿ, ಹಾರ್ದಿಕ್ ಪಾಂಡ್ಯ ಆಗಲಿ ಖಚಿತಪಡಿಸಿಲ್ಲ. ಐಪಿಎಲ್ ಹರಾಜು ವೇಳೆಗೆ ಇದೆಲ್ಲಾ ಅಂತಿಮವಾಗಲಿದೆ.
ರೋಹಿತ್ ಶರ್ಮಾ ಬೇರೆ ತಂಡಕ್ಕೆ
ಮತ್ತೊಂದೆಡೆ ರೋಹಿತ್ ಶರ್ಮಾ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಕೊಡಲು ಮುಂದಾಗಿವೆ ಎನ್ನಲಾಗಿದೆ. ಇನ್ನು ಆರ್ ಸಿಬಿ ಕೂಡ ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಆಯ್ಕೆ ಬಗ್ಗೆ ನೋಡುತ್ತಿದೆ.












Click it and Unblock the Notifications