Hardik Pandya: ಸಿಎಸ್‌ಕೆ ಸೇರಲು ಒಪ್ಪಿದ್ರಾ ಹಾರ್ದಿಕ್ ಪಾಂಡ್ಯ? ಮಹತ್ವದ ಸುಳಿವು ಬಿಚ್ಚಿಟ್ಟ ಆರ್‌.ಅಶ್ವಿನ್

Hardik Pandya: ಐಪಿಎಲ್‌ 2027ರ ಮಿನಿ ಹರಾಜಿಗೂ ಮುನ್ನವೇ ಆಟಗಾರರ ವಿನಿಮಯ ಪ್ರಕ್ರಿಯೆಗಳು ನಡೆಯುತ್ತಿವೆ. ಈ ನಡುವೆಯೇ ಮುಂಬೈ ಇಂಡಿಯನ್ಸ್‌ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಚೆನ್ನೈ ಸೂಪರ್ ಕಿಂಗ್ಸ್‌ ಸೇರಲಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಲಣದಲ್ಲಿ ಹರಿದಾಡುತ್ತಿದೆ. ಇದೀಗ ಈ ಕುರಿತು ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐಕಾನ್ ಹಾಗೂ ಮಾಜಿ ನಾಯಕ ಎಂ.ಎಸ್. ಧೋನಿ ಅವರೇ ಸ್ವತಃ ಹಾರ್ದಿಕ್ ಪಾಂಡ್ಯ ಅವರನ್ನು ಸಿಎಸ್‌ಕೆ ತಂಡಕ್ಕೆ ಬರಲು ಒಪ್ಪಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಇದಕ್ಕೆ ಆರ್.ಅಶ್ವಿನ್ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿದ್ದಾರೆ.

Hardik Pandya to Chennai Super Kings Ravichandran Ashwin Reveals Rajasthan Royals Trade Interest

ಆರ್‌.ಅಶ್ವಿನ್ ಹೇಳಿದ್ದೇನು?

ಈ ಕುರಿತು ಪ್ರತಿಕ್ರಿಯಿಸಿರುವ ಆರ್‌.ಅಶ್ವಿನ್, 'ಎಂ.ಎಸ್‌.ಧೋನಿ ಅವರು ಹಾರ್ದಿಕ್ ಪಾಂಡ್ಯರನ್ನು ಸಿಎಸ್‌ಕೆಗೆ ತರಲು ವೈಯಕ್ತಿಕವಾಗಿ ಮನವೊಲಿಸಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವುದು ನಿಜ. ಹಾರ್ದಿಕ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸೇರಿದರೆ ತಂಡದ ಬಲ ಹೆಚ್ಚುವುದರಲ್ಲಿ ಸಂಶಯವಿಲ್ಲ. ಆದರೆ ನನ್ನ ಪ್ರಕಾರ ಇದು ಸಾಧ್ಯವಾಗುವುದು ಅತ್ಯಂತ ಕಷ್ಟ ಮತ್ತು ದೂರದ ಮಾತು,' ಎಂದು ಹೇಳಿದ್ದಾರೆ.

ಹಾರ್ದಿಕ್ ಸ್ವಾಗತಿಸುವ ರೇಸ್‌ನಲ್ಲಿರುವ ತಂಡ ಯಾವುದು?

ಕೋಲ್ಕತಾ ನೈಟ್ ರೈಡರ್ಸ್ ಅಥವಾ ಸಿಎಸ್‌ಕೆಗಿಂತ ಹೆಚ್ಚಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಹಾರ್ದಿಕ್ ಪಾಂಡ್ಯ ಅವರನ್ನು ಪಡೆಯುವ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ ಎಂದು ಅಶ್ವಿನ್ ಸುಳಿವು ನೀಡಿದ್ದಾರೆ. 'ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಟ್ರೇಡಿಂಗ್ ವಿಚಾರದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವೇ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದೆ,' ಎಂದು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳು

ಮುಂಬೈ ಇಂಡಿಯನ್ಸ್ ತಂಡದಲ್ಲಿ ಇತ್ತೀಚೆಗೆ ಪ್ರಮುಖ ಬದಲಾವಣೆಗಳು ನಡೆಯುತ್ತಿದ್ದು, ಮುಖ್ಯ ಕೋಚ್ ಹುದ್ದೆಯಿಂದ ಮಹೇಲ ಜಯವರ್ಧನೆ ನಿರ್ಗಮಿಸಿದ್ದಾರೆ. ಮುಂಬೈ ತಂಡದ ಹೊಸ ಮುಖ್ಯ ಕೋಚ್ ಹುದ್ದೆಗೆ ಮೈಕೆಲ್ ಹಸ್ಸಿ, ಆರೋನ್ ಫಿಂಚ್, ಇಯಾನ್ ಮಾರ್ಗನ್, ಮಾರ್ಕ್ ಬೌಚರ್ ಮತ್ತು ಆಡ್ರಿಯನ್ ಬಿರೆಲ್ ಸೇರಿದಂತೆ ಐದು ಪ್ರಮುಖ ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಹಾರ್ದಿಕ್ ಪಾಂಡ್ಯ ಸಿಎಸ್‌ಕೆ ತಂಡಕ್ಕೆ ಸೇರುತ್ತಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಆದರೂ ಅವರು ರಾಜಸ್ಥಾನ್ ರಾಯಲ್ಸ್ ತಂಡದತ್ತ ಹೆಜ್ಜೆ ಹಾಕುವ ಸಾಧ್ಯತೆಗಳು ಹೆಚ್ಚಿವೆ ಎಂದು ರವಿಚಂದ್ರನ್ ಅಶ್ವಿನ್ ಅವರ ಹೇಳಿಕೆ ಸ್ಪಷ್ಟಪಡಿಸಿದೆ. ಈ ಹಿಂದೆ ಹಾರ್ದಿಕ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎನ್ನುವ ಸುದ್ದಿಗಳು ಸಹ ಹರಿದಾಡಿದ್ದವು. ಆದರೆ ಅವರು ಇನ್ನೂ ಯಾವ ತಂಡಕ್ಕೆ ಸೇರ್ಪಡೆಯಾಗಲ್ಲ. ಮುಂಬರುವ ದಿನಗಳಲ್ಲಿ ಏನಾದರೂ ಈ ಬದಲಾವಣೆಯಾಗುತ್ತಾ ಎಂದು ಕಾದುನೋಡಬೇಕಿದೆ ಅಷ್ಟೇ.

ಹಾರ್ದಿಕ್ ಪಾಂಡ್ಯ ಪ್ರದರ್ಶನ

ಹಾರ್ದಿಕ್ ಪಾಂಡ್ಯ ಭಾರತೀಯ ಕ್ರಿಕೆಟ್‌ನ ಪ್ರಮುಖ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದು, ಐಪಿಎಲ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮತ್ತು ವೇಗದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಮೂಲಕ ಐಪಿಎಲ್ ವೃತ್ತಿಜೀವನ ಆರಂಭಿಸಿದ ಅವರು, ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ 2022ರಲ್ಲಿ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆಲ್ಲುವ ಸಾಧನೆ ಮಾಡಿದರು.

2024ರಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡರು. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ ಪಾಂಡ್ಯ ಪಂದ್ಯಗಳ ಫಲಿತಾಂಶ ಬದಲಿಸಬಲ್ಲ ಆಟಗಾರರಾಗಿದ್ದಾರೆ. ಒತ್ತಡದ ಸಂದರ್ಭಗಳಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸುವ ಅವರ ಸಾಮರ್ಥ್ಯ ತಂಡಕ್ಕೆ ನೆರವಾಗುತ್ತದೆ. ಐಪಿಎಲ್‌ನಲ್ಲಿ ಅವರ ನಾಯಕತ್ವ, ಆಲ್‌ರೌಂಡ್ ಪ್ರದರ್ಶನ ಮತ್ತು ಪಂದ್ಯ ಮುಗಿಸುವ ಕೌಶಲ ಗಮನ ಸೆಳೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+