Hardik Pandya: ಹಾರ್ದಿಕ್ ಪಾಂಡ್ಯ ಮತ್ತು ಮಹೀಕಾ ಶರ್ಮಾ ಬೆಂಗಳೂರಿನಲ್ಲಿ ವಿವಾಹ.. ವದಂತಿ ಭಾರಿ ವೈರಲ್
Hardik Pandya: ಭಾರತೀಯ ಕ್ರಿಕೆಟರ್ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇನ್ನೂ ಇದೀಗ ಅವರು ಕರ್ನಾಟಕದ ಬೆಂಗಳೂರಿನಲ್ಲಿ ಮಾಡೆಲ್ ಮಹಿಕಾ ಶರ್ಮಾ ಅವರೊಂದಿಗೆ ವಿವಾಹ ಆಗಲಿದ್ದಾರೆ ಎನ್ನುವ ಸುದ್ದಿಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಈಗಾಗಲೇ ಐಪಿಎಲ್ 2026 ನಡೆಯುತ್ತಿರುವ ಸಮಯದಲ್ಲೇ ಹಾರ್ದಿಕ್ ಪಾಂಡ್ಯ ಮತ್ತು ಮಾಹಿಕಾ ಶರ್ಮಾ ಅವರ ವಿವಾಹದ ಕುರಿತಾದ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದವು. ಇದೀಗ ಮತ್ತೆ ಇವರಿಬ್ಬರು ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಹಾರ್ದಿ ಪಾಂಡ್ಯ ಎರಡನೇ ಮದುವೆ
ಹಾರ್ದಿಕ್ ಪಾಂಡ್ಯ ಹಾಗೂ ಮಾಡೆಲ್ ಮಹೀಕಾ ಶರ್ಮಾ ಶೀಘ್ರದಲ್ಲೇ ವಿವಾಹ ಆಗಲಿದ್ದಾರೆ ಎಂದು ವರದಿಯಾಗಿವೆ. ಈ ವರದಿಗಳ ಪ್ರಕಾರ, ಈ ಶುಭ ಸಮಾರಂಭವು ಆಗಸ್ಟ್ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆಯಿದೆ. ವಿವಾಹ ಕಾರ್ಯಕ್ರಮವು ಖಾಸಗಿಯಾಗಿ ನಡೆಯಲಿದ್ದು, ಕೇವಲ ಹತ್ತಿರದ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಹೊರಬೀಳದ ಅಧಿಕೃತ ಮಾಹಿತಿ
ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡುತ್ತಿದ್ದಂತೆ, ಅಭಿಮಾನಿಗಳು ಇವರಿಗೆ ಶುಭ ಹಾರೈಸುತ್ತಿದ್ದಾರೆ. ಆದರೆ ಮದುವೆಯ ದಿನಾಂಕ ಹಾಗೂ ಸ್ಥಳದ ಕುರಿತು ಹಾರ್ದಿಕ್ ಪಾಂಡ್ಯ ಅಥವಾ ಮಹಿಕಾ ಶರ್ಮಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ವರದಿಗಳ ಪ್ರಕಾರ, ಬೆಂಗಳೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಈ ವಿವಾಹ ಮಹೋತ್ಸವ ಆಯೋಜನೆಯಾಗುವ ಸಾಧ್ಯತೆಯಿದೆ. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೂ ಮುಂಚೆ ಮೆಹಂದಿ, ಸಂಗೀತ, ಶಾಸ್ತ್ರಗಳು ಕೂಡ ನೆರವೇರಲಿವೆ. ಸರಳವಾಗಿ ಈ ಕಾರ್ಯವನ್ನು ಮುಗಿಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎನ್ನಲಾಗಿದೆ.
ಈ ವಿವಾಹ ಸಮಾರಂಭವು ಖಾಸಗಿಯಾಗಿದ್ದರೂ ಸಹ ಭಾರತೀಯ ಕ್ರಿಕೆಟ್‌ನ ಪ್ರಮುಖ ಆಟಗಾರರು ಹಾಗೂ ಚಲನಚಿತ್ರ ರಂಗದ ಕೆಲವು ಪ್ರಮುಖ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಹಾರ್ದಿಕ್ ಪಾಂಡ್ಯ ಅವರ ಸಹಪಾಠಿ ಆಟಗಾರರು ಹಾಗೂ ಆಪ್ತ ಗೆಳೆಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮದ ಸ್ಥಳದಲ್ಲಿ ಬಿಗಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನತಾಶಾ ಸ್ಟಾಂಕೋವಿಕ್-ಹಾರ್ದಿಕ್ ವಿಚ್ಛೇದನ
ಹಾರ್ದಿಕ್ ಪಾಂಡ್ಯ ಅವರು ನತಾಶಾ ಸ್ಟಾಂಕೋವಿಕ್ ಅವರೊಂದಿಗೆ 2020ರ ಮೇ 31ರಂದು ವಿವಾಹವಾಗಿದ್ದು, ಜುಲೈ 2024ರಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದರು. ಬಳಿಕ ಹಾರ್ದಿಕ್ ಐಪಿಎಲ್ ಸಮಯದಲ್ಲಿ ಮಹಿಕಾ ಶರ್ಮಾ ಅವರೊಂದಿಗೆ ಕಾಣಿಸಿಕೊಳ್ಳಲು ಶುರು ಮಾಡಿದರು. ಅಲ್ಲದೆ ಡೇಟಿಂಗ್ ಸಹ ಮಾಡಿದ್ದು, ನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಇದೀಗ ವಿವಾಹದ ಸುದ್ದಿ ಹಂತದವರೆಗೂ ಬಂದು ನಿಂತಿದೆ ಎನ್ನಲಾಗುತ್ತಿದೆ.
ಈ ಮೊದಲು ಹಾರ್ದಿಕ್ ಪಾಂಡ್ಯ ಅವರು ಮೇ 22ರಂದು ಉದಯಪುರದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಮಾಹಿಕಾ ಅವರನ್ನು ವಿವಾಹವಾಗಲಿದ್ದಾರೆ ಎಂಬ ಪೋಸ್ಟ್‌ಗಳು ವೈರಲ್ ಆಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಅಥವಾ ಮಾಹಿಕಾ ಶರ್ಮಾ ಅವರಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಇದೇ ವಿಚಾರ ಮುನ್ನಲೆಗೆ ಬಂದಿದೆ. ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಅವರೊಂದಿಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೇ ವೇಳೆ ಹಾರ್ದಿಕ್ ಪಾಂಡ್ಯ ಮುಡಿ ಕೊಟ್ಟು ಗಮನ ಸೆಳೆದಿದ್ದರು.


Click it and Unblock the Notifications
