Harmanpreet Kaur: 150.. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್..
Harmanpreet Kaur: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ (ಸೆಪ್ಟೆಂಬರ್ 5) ನಡೆದ ಮಹಿಳೆಯರ ಟಿ20 ಏಷ್ಯಾಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿತು. ಈ ಜಯದೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದು, ಈ ಪಂದ್ಯದ ಮೂಲಕ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಪ್ರಮುಖ ಐತಿಹಾಸಿಕ ಸಾಧನೆಗೆ ಪಾತ್ರಾರದರು. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹರ್ಮನ್‌ಪ್ರೀತ್ ಕೌರ್ ಅವರಿಗೆ ಇದು ನಾಯಕಿಯಾಗಿ 150ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿತ್ತು. ಇದರೊಂದಿಗೆ ಪುರುಷ ಅಥವಾ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ 150 T20I ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ಜಗತ್ತಿನ ಮೊದಲ ಆಟಗಾರ್ತಿ/ಆಟಗಾರ ಎಂಬ ಅಭೂತಪೂರ್ವ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಅಪರೂಪದ ಸಾಧನೆ ಮಾಡಿದ ಜಾಗತಿಕ ಮಟ್ಟದ ಏಕೈಕ ನಾಯಕಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಐತಿಹಾಸಿದ ಸಾಧನೆ ಬಗ್ಗೆ ಹರ್ಮನ್‌ಪ್ರೀತ್ ಕೌರ್ ಹೇಳಿದ್ದೇನು?
ಪಂದ್ಯದ ಬಳಿಕ ತಮ್ಮ ಈ ಸಾಧನೆ ಕುರಿತು ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು, 'ನಾನು ನಾಯಕಿಯಾಗಿ ಈ ಹಂತಕ್ಕೆ ತಲುಪುತ್ತೇನೆ ಎಂದು ಎಂದಿಗೂ ಊಹಿಸಿರಲಿಲ್ಲ. ಇಷ್ಟು ವರ್ಷಗಳ ಪಯಣದಲ್ಲಿ ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು. ಅಭಿಮಾನಿಗಳ ಆಶೀರ್ವಾದ ಮತ್ತು ಪ್ರೀತಿ ಇಲ್ಲದಿದ್ದರೆ ನಾನೇನೂ ಅಲ್ಲ. ಮುಂಬರುವ ಪಂದ್ಯಗಳಲ್ಲೂ ನಿಮ್ಮ ಬೆಂಬಲ ಹೀಗೆಯೇ ಇರಲಿ,' ಎಂದು ಕೃತಜ್ಞತೆ ಸಲ್ಲಿಸಿದರು.
ಬೌಲರ್‌ಗಳಿಗೆ ಜಯದ ನೀಡಿ ದೊಡ್ಡತನ ಮೆರೆದ ನಾಯಕಿ
ಅಷ್ಟೇ ಅಲ್ಲದೆ ಮೈದಾನದಲ್ಲೂ ತಮ್ಮ ಉದಾರ ನಾಯಕತ್ವದ ಗುಣ ಪ್ರದರ್ಶಿಸಿದ ಹರ್ಮನ್‌ಪ್ರೀತ್ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸನ್ನು ತಮ್ಮ ತಂಡದ ಬೌಲಿಂಗ್ ವಿಭಾಗಕ್ಕೆ ನೀಡಿದರು. ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಕಟ್ಟಿಹಾಕಿದ ಸ್ಪಿನ್ನರ್‌ಗಳಾದ ಶ್ರೀ ಚರಣಿ (3/7), ಪ್ರೇಮಾ ರಾವತ್ (3/9), ದೀಪ್ತಿ ಶರ್ಮಾ (2/5) ಮತ್ತು ಶಫಾಲಿ ವರ್ಮಾ (1/10) ಅವರ ಶಿಸ್ತುಬದ್ಧ ಬೌಲಿಂಗ್ ಅನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು.
ಸಿಕ್ಸರ್ ಬಾರಿಸಿ ಗೆಲುವು ತಂದುಕೊಟ್ಟ ನಾಯಕಿ
ಬೌಲಿಂಗ್‌ನಲ್ಲಿ ಎದುರಾಳಿಗಳನ್ನು ಧೂಳೀಪಟ ಮಾಡಿದ ಬಳಿಕ, 56 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಹರ್ಮನ್‌ಪ್ರೀತ್ ಕೌರ್ (18*) ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಕೇವಲ 8.4 ಓವರ್‌ಗಳಲ್ಲಿ ಗೆಲುವು ತಂದುಕೊಟ್ಟರು. ಇನ್ನು ಸತತ ಮೂರನೇ ಗೆಲುವಿನೊಂದಿಗೆ ಗ್ರೂಪ್ 'ಎ' ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಭಾರತ ತಂಡವು ಸೆಪ್ಟೆಂಬರ್ 10 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಹರ್ಮನ್‌ಪ್ರೀತ್ ಕೌರ್ ಅವರ ಈ ಐತಿಹಾಸಿಕ ಸಾಧನೆಯು ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.


Click it and Unblock the Notifications
