• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಂದಿನ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಸೆ. 04: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆ ಬಹಳಷ್ಟು ಬದಲಾವಣೆಗೆ ಮುನ್ನುಡಿಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡುತ್ತಾರೆ, ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಹಾಗೂ ಸಹಾಯ ಮಾಡಿದಲ್ಲಿ ಪದಕಗಳ ಪಟ್ಟಿಯಲ್ಲಿ ನಮ್ಮ ದೇಶವೂ ಅಗ್ರಸ್ಥಾನ ಪಡೆಯುವುದು ಸಾಧಗಯವಿದೆ. ಹೀಗಾಗಿ ಕ್ರೀಡಾ ಕ್ಷೇತ್ರಕ್ಕೆ ಮಹತ್ವ ಕೊಡಬೇಕು ಎಂಬ ತೀರ್ಮಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಂದಿವೆ.

ಇದೇ ಹಿನ್ನೆಲೆಯಲ್ಲಿ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದವರೊಂದಿಗೆ ಭಾಗವಹಿಸಿವರಿಗೂ ಸನ್ಮಾನ, ಪ್ರೋತ್ಸಾಹ ಧನ ಕೊಡಲಾಗಿದೆ. ಕ್ರೀಡೆ ಎಂದರೆ ಬರೀ ಕ್ರಿಕೆಟ್ ಮಾತ್ರವಲ್ಲ ಎಂಬುದು ಎಲ್ಲರವ ಮನಸ್ಸಿನಲ್ಲಿ ಬರುವಂತೆ ಆ ಮೂಲಕ ಸರ್ಕಾರಬ ಪ್ರಯತ್ನಿಸುತ್ತಿದೆ.

ಇದೇ ಹಿನ್ನೆಲೆಯಲ್ಲಿ ಟೋಕಿಯೋ ಒಲಂಪಿಕ್ಸ್ 2020ರಲ್ಲಿ ಭಾಗವಹಿಸಿದ್ದ ರಾಜ್ಯದ ಕ್ರೀಡಾಪಟುಗಳಿಗೆ ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜಭವನದಲ್ಲಿ ಸನ್ಮಾನಿಸಿ ಪ್ರೋತ್ಸಾಹ ಧನ ವಿತರಿಸಲಾಗಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ.

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ!

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ!

"ಮುಂದಿನ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನಮ್ಮ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಲು ಗಮನಹರಿಸಲಾಗುವುದು. ಬೆಜೆಟ್‌ನಲ್ಲಿ ಹೆಚ್ಚಿನ ಅನುದಾನ ಕೊಡುವುದರಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ 2020ರಲ್ಲಿ ಭಾಗವಹಿಸಿದ್ದ ರಾಜ್ಯದ ಕ್ರೀಡಾಪಟುಗಳನ್ನು ಸನ್ಮಾನಿಸಿ ಅವರು ಮಾತನಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ಆರಂಭ!

ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ಆರಂಭ!

"ಒಲಂಪಿಕ್ಸ್ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಕಠಿಣ ಪರಿಶ್ರಮ ಹಾಗೂ ಪೂರ್ವ ತಯಾರಿಯ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು 2024ರ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಸಾಮರ್ಥ್ಯವುಳ್ಳ 75 ಕ್ರೀಡಾ ಪಟುಗಳಿಗೆ ತರಬೇತಿ, ಪ್ರೋತ್ಸಾಹ ನೀಡುವ 'ಅಮೃತ ಕ್ರೀಡಾ ದತ್ತು ಯೋಜನೆ'ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಂತಾ ರಾಷ್ಟ್ರೀಯ ಮಟ್ಟದ ತರಬೇತಿ!

ಅಂತಾ ರಾಷ್ಟ್ರೀಯ ಮಟ್ಟದ ತರಬೇತಿ!

"ಅಂತಾರಾಷ್ಟ್ರೀಯ ಮಟ್ಟದ ತರಬೇತಿ, ಪ್ರೋತ್ಸಾಹ ನೀಡಿ ರಾಜ್ಯದ ಕ್ರೀಡಾಪಟುಗಳು ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಲು ಸರ್ಕಾರ ಬೆಂಬಲವನ್ನು ನೀಡಲಿದೆ. ಅದಕ್ಕೆ ಬೇಕಾಗಿರುವ ಎಲ್ಲ ರೀತಿಯ ಸಿದ್ಧತೆ ಮಾಡಲಾಗುವುದು" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

"ರಾಜ್ಯ ಸರ್ಕಾರ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಿದೆ. ಗ್ರಾಮಗಳಲ್ಲಿ ಹಾಗೂ ಎಲ್ಲ ಶಾಲೆಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಕ್ರೀಡಾ ಮೂಲಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ಅಂತರರಾಷ್ಟ್ರೀಯ ಮಟ್ಟದ ಆಧುನಿಕ ಕ್ರೀಡಾಂಗಣವನ್ನು ನಿರ್ಮಿಸಲಾಗುವುದು ಹಾಗೂ ಜಿಲ್ಲೆಗಳಲ್ಲಿ ಈಗಾಗಲೇ ಇರುವ ಕ್ರೀಡಾಂಗಣಗಳನ್ನು ಉನ್ನತೀಕರಿಸಲಾಗುವುದು" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕ್ರೀಡಾಪಟುಗಳಿಗೆ ಸನ್ಮಾನ!

ಕ್ರೀಡಾಪಟುಗಳಿಗೆ ಸನ್ಮಾನ!

ಟೋಕಿಯೋ ಓಲಂಪಿಕ್ ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳು ಹಾಗೂ ಮಹಿಳಾ ಹಾಕಿ ಸಹಾಯಕ‌ ಕೋಚ್ ಅಂಕಿತಾ ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ತಲಾ ರೂ. 1 ಲಕ್ಷ ನಗದು ನೀಡಿ ಪುರಸ್ಕರಿಸಿದರು.

ರಾಜ್ಯದ ಕ್ರೀಡಾಪಟುಗಳಾದ ಕು. ಅದಿತಿ ಅಶೋಕ್(ಗಾಲ್ಫ್) ಶ್ರೀಹರಿ ನಟರಾಜ್(ಈಜು), ಶ್ರೀ ಫವಾಜ್ ಮಿರ್ಜಾ(ಈಕ್ವೆಸ್ಟ್ರಿಯನ್) ಹಾಗೂ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾಗಿ ಕಾರ್ಯನಿರ್ವಹಿಸಿದ ಅಂಕಿತಾ. ಬಿ. ಎಸ್ ಅವರನ್ನು ಸನ್ಮಾನಿಸಿದರು. ಜೊತೆಗೆ ಕ್ರೀಡಾಪಟುಗಳಿಗೆ ಒಂದು ಲಕ್ಷ ರೂ. ಗಳ ಪ್ರೋತ್ಸಾಹ ಧನ ವಿತರಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಮತ್ತಿತರರು ಭಾಗವಹಿಸಿದ್ದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
High priority for sports in the next budget: Chief Minister Basavaraj Bommai. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X